ಯಾದಗಿರಿ | ಸರಕಾರಿ ಶಾಲಾ, ಕಾಲೇಜುಗಳ ವಿಲೀನ; ಎಸ್‌ಎಫ್‌ಐ ಬೃಹತ್ ಪ್ರತಿಭಟನೆ

Date:

ರಾಜ್ಯ ಸರ್ಕಾರವು 700 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಗಳಾಗಿ ಉನ್ನತೀಕರಿಸುವ ಹೆಸರಿನಲ್ಲಿ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ವಿಲೀನಗೊಳಿಸಿ ಮುಚ್ಚಲು ಮುಂದಾಗಿರುವ ಕ್ರಮ ಖಂಡಿಸಿ ತಾಲ್ಲೂಕು ಭಾರತ ವಿದ್ಯಾರ್ಥಿ ಫೆಡರೇಷನ್ ಸಮಿತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

- Advertisement -

ತಾಲ್ಲೂಕಿನ ಕನ್ಯಾಕೋಳ್ಳುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಮಹಿಳಾ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ ಶೌಚಾಲಯ ಮತ್ತು ಕುಡಿಯುವ ನೀರಿನ ತೀವ್ರ ಕೊರತೆ ಇದೆ ಎಂದು ಆರೋಪಿಸಿ, ಕನ್ಯಾಕೋಳ್ಳುರ ಗ್ರಾಮ ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರತಿನಿತ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಕುರಿತು ಹಲವು ಬಾರಿ ಗ್ರಾಮ ಪಂಚಾಯತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ತಕ್ಷಣವೇ ಶಾಲೆಗೆ ಶುದ್ಧ ಕುಡಿಯುವ ನೀರು ಒದಗಿಸುವುದು, ಶೌಚಾಲಯ ನಿರ್ಮಿಸುವುದು, ಶಾಲೆಯ ಕಾಂಪೌಂಡ್ ದುರಸ್ತಿ ಮಾಡುವುದು ಹಾಗೂ ಆಟದ ಮೈದಾನವನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಇಮಾಮಸಾಬ್ ನದಾಫ್ ಮಾತನಾಡಿ, ‘ಯಾದಗಿರಿ ಜಿಲ್ಲೆ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದ್ದು, ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕರ್ತವ್ಯವಾಗಿದ್ದು, ಸರ್ಕಾರಗಳು ಅದನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಕೂಡಲೇ ಗ್ರಾಮದಲ್ಲಿನ ಸರ್ಕಾರಿ ಶಾಲೆಗೆ ಎಲ್ಲಾ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಗ್ರಾಮೀಣ ಬಡವರ ಉದ್ಯೋಗದ ಹಕ್ಕು ಕಸಿಯುವ ವಿಬಿ ಜಿ ರಾಮ್‌ ಜಿ ಮಸೂದೆಯ ಹುನ್ನಾರ: ಸಿಪಿಐಎಂ ಆರೋಪ

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಶಹಾಪುರ ತಾಲೂಕು ಮುಖಂಡರಾದ ತಾಯಣ್ಣ ಟೋಕಪೂರ್, ಪ್ರದೀಪ್ ಮ್ಯಾಗಡಿ ಹಾಗೂ ಹನುಮಂತ ಯಕ್ಷತಿ ಮಾತನಾಡಿದರು. ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಶಹಾಪುರ ತಾಲೂಕು ಮುಖಂಡರಾದ ತಾಯಣ್ಣ ಟೋಕಪೂರ್, ಪ್ರದೀಪ್ ಮ್ಯಾಗಡಿ ಹಾಗೂ ಹನುಮಂತ ಯಕ್ಷತಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಹಾಗೂ ಕೂಲಿಕಾರರ ಸಂಘದ ತಾಲೂಕು ಕಾರ್ಯದರ್ಶಿ ದೇವುಹಳ್ಳಿ, ಎಸ್‌ ಎಫ್ ಐ ಸಂಘಟನೆ ಪದಾಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು, ರೈತ ಸಂಘಟನೆ ಮುಖಂಡರು ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...