ಯಾದಗಿರಿ | ಜಿಲ್ಲೆಯಾದ್ಯಂತ ಬರ ವೀಕ್ಷಣೆ ನಡೆಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್

Date:

ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಬೆಳೆ ಹಾನಿ, ನೀರಿನ ಸಮಸ್ಯೆ ಹಾಗೂ ರಸಗೊಬ್ಬರ ಮಾರಾಟ ದರದ ಕುರಿತು ಮಾಹಿತಿ ಪಡೆದು ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

- Advertisement -

ಸಚಿವರು ಯಾದಗಿರಿ ಮತ್ತು ಗುರುಮಠಕಲ್ ವಿಧಾನಸಭಾ ಕ್ಷೇತ್ರಗಳ ರಾಮಸಮುದ್ರ, ಮುಂಡರಗಿ, ಕಂದಕೂರ ಹಾಗೂ ಗುಂಜನೂರು ಗ್ರಾಮಗಳಿಗೆ ಭೇಟಿ ನೀಡಿ ಬರಪೀಡಿತ ಕೃಷಿಭೂಮಿಗಳ ಪರಿಶೀಲನೆ ನಡೆಸಿದರು. ಪ್ರಮುಖ ಬೆಳೆಗಳಾದ ಹತ್ತಿ ಬೆಳೆದ ರೈತರೊಂದಿಗೆ ಮಾತುಕತೆ ನಡೆಸಿ ಅವರ ಸಂಕಷ್ಟಗಳನ್ನು ಆಲಿಸಿದರು. ಸ್ಥಳದಲ್ಲಿದ್ದ ಕೃಷಿ ಅಧಿಕಾರಿಗಳಿಗೆ ಪ್ರತಿಯೊಂದು ಬರಪೀಡಿತ ಪ್ರದೇಶಕ್ಕೂ ಖುದ್ದಾಗಿ ಭೇಟಿ ನೀಡಿ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
2671264 1

ಬಳಿಕ ಶಹಾಪುರ ವಿಧಾನಸಭಾ ಕ್ಷೇತ್ರದ ಮೂಡಭೂಳ, ಸೈದಾಪುರ ಹಾಗೂ ರಸ್ತಾಪುರ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು. ರೈತರೊಂದಿಗೆ ಕೆಲಕಾಲ ಸಂವಾದ ನಡೆಸಿದ ಸಚಿವರು, ಬೆಳೆ ಹಾನಿ, ಮಳೆ ಕೊರತೆಯಿಂದ ಎದುರಾಗಿರುವ ಸಂಕಷ್ಟ ಹಾಗೂ ರಸಗೊಬ್ಬರ ಮಾರಾಟ ದರದ ಕುರಿತು ಮಾಹಿತಿ ಪಡೆದುಕೊಂಡರು. ಪ್ರಮುಖ ಬೆಳೆಗಳ ಹಾನಿ ಮತ್ತು ರಸಗೊಬ್ಬರ ಮಾರಾಟದ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

2671269

ಇದೇ ವೇಳೆ ಸುರಪುರ ವಿಧಾನಸಭಾ ಕ್ಷೇತ್ರದ ಖಾನಾಪೂರ, ರುಕ್ಮಾಪೂರ ಹಾಗೂ ವಣಕಿಹಾಳ ಗ್ರಾಮಗಳಿಗೂ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಅವಲೋಕಿಸಿದರು. ರೈತರೊಂದಿಗೆ ಸಮಾಲೋಚನೆ ನಡೆಸಿ ಬೆಳೆ ಹಾನಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು, ಅಗತ್ಯ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಿ; ಅಧಿಕಾರಿಗಳಿಗೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಕಟ್ಟುನಿಟ್ಟಿನ ಸೂಚನೆ

ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ, ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸರೆಡ್ಡಿ ಎಂ. ಪಾಟೀಲ್ ಅನಪುರ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಕೃಷಿ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...