ಯಾದಗಿರಿ | ಮನರೇಗಾ ಯೋಜನೆಯ ₹13.57 ಲಕ್ಷ ದುರುಪಯೋಗ; ಮಾಜಿ ಗ್ರಾಪಂ ಅಧ್ಯಕ್ಷ ಸೇರಿ ಇಬ್ಬರಿಗೆ ಜೈಲು ಶಿಕ್ಷೆ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ₹13.57 ಲಕ್ಷ ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಯಾದಗಿರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ನವೆಂಬರ್ 13ರಂದು ನ್ಯಾಯಾಧೀಶ ಮರುಳಸಿದ್ದಾರಾಧ್ಯ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ, ವಾದ-ಪ್ರತಿವಾದ ಆಲಿಸಿದ ಬಳಿಕ ತೀರ್ಪು ಪ್ರಕಟಿಸಿದ್ದಾರೆ.

- Advertisement -

ಪ್ರಕರಣದ ಎರಡನೇ ಆರೋಪಿಯಾಗಿರುವ ಸುರಪುರ ತಾಲೂಕಿನ ಹೇಮನೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದೇವನಗೌಡ ನಿಡಗುಂದಿ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಲಾಗಿದೆ. ಮೂರನೇ ಆರೋಪಿಯಾಗಿರುವ ಹೇಮನೂರು ಗ್ರಾಮದ ಸಿದ್ದಪ್ಪ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ₹2 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

ಸುರಪುರ ತಾಲೂಕಿನ ಹೇಮನೂರು ಗ್ರಾಮ ಪಂಚಾಯಿತಿಯಲ್ಲಿ ಮನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳದೆ ಅಥವಾ ಸಮರ್ಪಕವಾಗಿ ನಿರ್ವಹಿಸದೆ ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿತ್ತು. ಅಲ್ಲದೆ, ಕಾಮಗಾರಿಗಳಿಗೆ ಸಂಬಂಧಿಸಿದ ಕಡ್ಡಾಯ ದಾಖಲೆಗಳಾದ ಹಾಜರಾತಿ ಪುಸ್ತಕ (ಮಾಸ್ಟರ್ ರೋಲ್), ಅಳತೆ ಪುಸ್ತಕ ಹಾಗೂ ನಗದು ಪುಸ್ತಕಗಳನ್ನು ನಿರ್ವಹಿಸದೆ ನಿಯಮ ಉಲ್ಲಂಘಿಸಿರುವ ಆರೋಪವೂ ಪ್ರಕರಣದಲ್ಲಿತ್ತು.

ಈ ಸಂಬಂಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಪ್ರಕರಣದ ಮೊದಲ ಆರೋಪಿಯಾಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮನಪ್ಪ ಕೊಂಗಂಡಿಕರ್ ಹಾಗೂ ನಾಲ್ಕನೇ ಆರೋಪಿ ರಾಜಾ ರಾಮಪ್ಪ ನಾಯಕ ಅವರ ವಿಚಾರಣೆ ಈಗಾಗಲೇ ನಡೆದಿತ್ತು. ಕರ್ನಾಟಕ ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಶ್ವನಾಥ ಉಬಾಳೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ಉದ್ದೇಶದ ಮಹತ್ವದ ಸರ್ಕಾರಿ ಯೋಜನೆಯ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೂ ಜೈಲು ಶಿಕ್ಷೆಯಾಗಿರುವುದು ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ: ಒಂದು ಲಕ್ಷ ಜನರ ಭಾಗವಹಿಸುವಿಕೆ ನಿರೀಕ್ಷೆ

ನವೆಂಬರ್ 26ರಂದು ಮೈಸೂರಿನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆಯ ಸಿದ್ಧತೆಗಳ ಕುರಿತು ನಿಕಟಪೂರ್ವ...

ವಿಜಯನಗರ | ಕಬ್ಬಿನ ಗದ್ದೆಗೆ ಬೆಂಕಿ : ಅಪಾರ ಹಾನಿ

ಹೂವಿನಹಡಗಲಿ ತಾಲ್ಲೂಕಿನ ಕತ್ತೆಬೆನ್ನೂರ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕಿಟ್ ಕಿಡಿಯಿಂದ...

ಬನವಾಸಿ | ಗೃಹಪ್ರವೇಶದ ಬೆನ್ನಲ್ಲೇ ಹೊಸ ಮನೆಗೆ ಕನ್ನ: ಸ್ವಿಫ್ಟ್ ಕಾರು ಸೇರಿ ₹9.30 ಲಕ್ಷ ಮೌಲ್ಯದ ಸ್ವತ್ತು ಕಳವು

ಬನವಾಸಿ: ಶಿರಸಿ ತಾಲೂಕಿನ ದಾಸನಕೊಪ್ಪ ರಸ್ತೆಯ ನಿವಾಸಿ ಪ್ರಕಾಶ ಚನ್ನಪ್ಪ ಜಕಲಣ್ಣನವರ...