ಯಾದಗಿರಿ | ಜೆಜೆಎಂ ಹಣ ದುರ್ಬಳಕೆ : ತಪ್ಪಿಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಭೀಮ್ ಆರ್ಮಿ ಆಗ್ರಹ

Date:

ಯಾದಗಿರಿ ಜಿಲ್ಲೆ ವಡಗೇರಾ ತಾಲ್ಲೂಕಿನ ನಾಯ್ಕಲ್ ಗ್ರಾಮದ ಜಲ ಜೀವನ್‌ ಮಿಷನ್‌ (ಜೆಜೆಎಂ) ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದು ಸಾಬೀತಾಗಿ ಐವರ ಮೇಲೆ ದೂರು ದಾಖಲಾಗಿದ್ದು, ಕೂಡಲೇ ತಪ್ಪಿಸ್ಥರನ್ನು ಬಂಧಿಸಿ, ಸೇವೆಯಿಂದ ವಜಾಗೊಳಿಸಿ ದುರ್ಬಳಕೆಯಾದ ಹಣ ವಸೂಲಿ ಮಾಡಬೇಕೆಂದು ಭೀಮ್ ಆರ್ಮಿ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ.

- Advertisement -

ಭೀಮ್‌ ಆರ್ಮಿ ಕರ್ನಾಟಕ ಏಕತಾ ಮಿಷನ್ ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಕಣಜಿಕರ್, ಮೌನೇಶ್ ಚಟ್ನಳ್ಳಿ. ಮರಿಲಿಂಗ ಹಳ್ಳಿ, ತಾಯಣ್ಣ ಚಟ್ನಳ್ಳಿ ಅವರು ಮಂಗಳವಾರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲಾಧ್ಯಕ್ಷ ಸೈದಪ್ಪ ಎಂ.ಕಣಜಿಕರ್ ಮಾತನಾಡಿ, ‘ವಡಗೇರಾ ತಾಲ್ಲೂಕಿನ ನಾಯ್ಕಲ್ ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ 1,500 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕನೀಡುವ ಕಾಮಗಾರಿಗೆ 41 ಲಕ್ಷ ಅನುದಾನ ಮಂಜೂರಾಗಿತ್ತು, ಆದರೆ ವಾಸ್ತವಿಕವಾಗಿ 529 ಮನೆಗಳ ಕಾಮಗಾರಿ ಪೂರ್ಣಗೊಂಡು, 1,257 ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದೆ ಎಂದು ಸಂಬಂಧಪಟ್ಟ ಇಲಾಖೆಯು 330.39 ಲಕ್ಷ ಬಿಲ್ ಪಾವತಿ ಮಾಡಲಾಗಿದ್ದು, ಆದರೆ ಗ್ರಾ.ಪಂ. ಪಿಡಿಓರವರು 109 ಮನೆಗಳಿಗೆ ಮಾತ್ರ ಅಳವಡಿಸಿದ್ದೇವೆಂದು ಹೇಳಿದರು. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು 529 ಮನೆಗಳಿಗೆ ನಳ ಅಳವಡಿಸಲಾಗಿದೆ ಎಂದು ಅಧಿಕಾರಿಗಳಿಗೆ ವರದಿ ನೀಡಿ, ಈಗಾಗಲೇ 330.39 ಲಕ್ಷ ರೂಪಾಯಿ ಬಿಲ್ ಪಾವತಿ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕುʼ ಎಂದು ಒತ್ತಾಯಿಸಿದರು.

‘ಈ ಅವ್ಯವಹಾರದಲ್ಲಿ ಭಾಗಿಯಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಸಹಾಯಕ ಇಂಜಿನಿಯರ್, ಶ್ರೀನಿವಾಸ , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಶಹಾಪೂರ ಪ್ರಸ್ತುತ ದೇವದುರ್ಗ ಲೋಕೋಪಯೋಗಿ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬನ್ನಪ್ಪ, ಗ್ರಾಮೀಣ ಕುಡಿಯುವ ನೀರಿನ ಕಾರ್ಯಪಾಲಕ ಅಭಿಯಂತರ ಆನಂದ, ಗುತ್ತಿಗೆದಾರ ವೆಂಕಟೇಶ ಗುರುಸುಣಗಿ, 3ನೇ ತನಿಖಾ ತಂಡದವರಾದ ಬೆಂಗಳೂರಿನ ಟ್ರಾನ್ಸಪೋರ್ಟೆಕ್ ಕನ್ಸಲೆನ್ಸ್ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾದರೂ, ಇಲ್ಲಿಯವರೆಗೆ ಯಾವುದೇ ಕ್ರಮ ಜರುಗಿಸಿಲ್ಲʼ ಎಂದು ಆರೋಪಿಸಿದರು.

‘ಒಂದು ವಾರದಲ್ಲಿ ಕ್ರಮಕ್ಕೆ ಮುಂದಾಗದೇ ನಿರ್ಲಕ್ಷ್ಯ ತೋರಿದರೆ ಜಿಲ್ಲಾಡಳಿತ ಕಚೇರಿ ಮುಂದೆ ಉಗ್ರವಾದ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...