ಯಾದಗಿರಿ | ಉತ್ತರ ಕರ್ನಾಟಕದ ನಿರ್ಲಕ್ಷ್ಯ ಖಂಡಿಸಿ ಸರ್ಕಾರಿ ಆತಿಥ್ಯ, ಭತ್ಯೆ ತಿರಸ್ಕರಿಸಿದ ಶಾಸಕ ಶರಣಗೌಡ ಕಂದಕೂರ

Date:

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ, ಬೆಳಗಾವಿಯಲ್ಲಿ ನಡೆಯಲಿರುವ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದಿಂದ ಒದಗಿಸುವ ಅಧಿಕೃತ ಆತಿಥ್ಯ, ವಸತಿ, ಊಟೋಪಚಾರ ಹಾಗೂ ಇತರೆ ಭತ್ಯೆಗಳನ್ನು ಸ್ವೀಕರಿಸದೆ ಸ್ವಂತ ಖರ್ಚಿನಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.

- Advertisement -

ಈ ಸಂಬಂಧ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿರುವ ಶಾಸಕರು, ಅಧಿವೇಶನದ ಅವಧಿಯಲ್ಲಿ ವಸತಿ, ಊಟ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸ್ವಂತ ಖರ್ಚಿನಲ್ಲಿ ಮಾಡಿಕೊಳ್ಳಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿಂದಿನ ಚಳಿಗಾಲದ ಅಧಿವೇಶನದಲ್ಲಿಯೂ ಇದೇ ನಿಲುವು ತಳೆದಿದ್ದ ಅವರು, ಸರ್ಕಾರದ ಆತಿಥ್ಯ ಮತ್ತು ಸೌಲಭ್ಯಗಳನ್ನು ತಿರಸ್ಕರಿಸಿ ಸ್ವಂತ ವೆಚ್ಚದಲ್ಲಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಪ್ರಮುಖ ಉದ್ದೇಶ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸದನದಲ್ಲಿ ಧ್ವನಿಯಾಗುವುದು ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಿಣಾಮಕಾರಿ ಚರ್ಚೆ ನಡೆಸುವುದಾಗಿದೆ. ಆದರೆ, ಪ್ರತಿ ಅಧಿವೇಶನದಲ್ಲೂ ಹಲವು ಸಮಸ್ಯೆಗಳು ಪ್ರಸ್ತಾಪವಾಗುತ್ತಿದ್ದರೂ ಅವುಗಳಿಗೆ ನಿರೀಕ್ಷಿತ ಪರಿಹಾರ ದೊರೆಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಪದೇಪದೆ ಎದುರಾಗುತ್ತಿರುವ ಬರಗಾಲ, ಅತಿವೃಷ್ಟಿ, ಕೃಷಿ ಸಂಕಷ್ಟ, ನಿರುದ್ಯೋಗ, ಬಡತನ, ಶಿಕ್ಷಣ, ಆರೋಗ್ಯ ಹಾಗೂ ಕುಡಿಯುವ ನೀರಿನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ. ಉದ್ಯೋಗ ಮತ್ತು ಜೀವನೋಪಾಯ ಅರಸಿ ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಸಾವಿರಾರು ಜನರು ಬೆಂಗಳೂರು, ಮುಂಬೈ, ಪುಣೆ ಹಾಗೂ ಹೈದರಾಬಾದ್‌ನಂತಹ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇದು ಈ ಭಾಗದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಮನರೇಗಾ ಯೋಜನೆಯ ₹13.57 ಲಕ್ಷ ದುರುಪಯೋಗ; ಮಾಜಿ ಗ್ರಾಪಂ ಅಧ್ಯಕ್ಷ ಸೇರಿ ಇಬ್ಬರಿಗೆ ಜೈಲು ಶಿಕ್ಷೆ

ಅಧಿವೇಶನ ನಡೆಸಲು ಸರ್ಕಾರ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣ ವೆಚ್ಚ ಮಾಡುತ್ತಿದ್ದರೂ, ಜನರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ಅಧಿವೇಶನಗಳ ಉದ್ದೇಶವೇನು ಎಂಬ ಪ್ರಶ್ನೆಯನ್ನೂ ಶಾಸಕರು ಎತ್ತಿದ್ದಾರೆ. ಜನಪ್ರತಿನಿಧಿಗಳು ಜನರ ಆಶೋತ್ತರಗಳಿಗೆ ಸ್ಪಂದಿಸಿ, ಸದನದಲ್ಲಿ ಪ್ರಸ್ತಾಪಿಸುವ ಬೇಡಿಕೆಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಹೊಂದಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ನಿರ್ಲಕ್ಷ್ಯದ ವಿರುದ್ಧ ಸರ್ಕಾರದ ಗಮನ ಸೆಳೆಯಲು ಸರ್ಕಾರಿ ಆತಿಥ್ಯ ಮತ್ತು ಭತ್ಯೆಗಳನ್ನು ತಿರಸ್ಕರಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ಮುಂದುವರಿಸಲು ಶರಣಗೌಡ ಕಂದಕೂರ ನಿರ್ಧರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ರಾಷ್ಟ್ರೀಯ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌ ಗೆ ಅಂಗವಿಕಲೆ ಗಿರಿಜಾ ಹೆಚ್ ಆಯ್ಕೆ

ರಾಷ್ಟ್ರೀಯ ಮಟ್ಟದ ಪ್ರಥಮ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌–2026ರಲ್ಲಿ ಕರ್ನಾಟಕ ರಾಜ್ಯ ತಂಡವನ್ನು...

ಚಿಕ್ಕಮಗಳೂರು | ಕಾಡಾನೆ ದಾಳಿ ಮತ್ತೊಂದು ಸಾವು: ಕಾಡಾನೆ ಸ್ಥಳಾಂತರಿಸಿದರೆ ತೀವ್ರ ಹೋರಾಟ; SDPI ಎಚ್ಚರಿಕೆ

ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೃಷ್ಣಮೂರ್ತಿ ಎಂಬವರು ಮೃತಪಟ್ಟಿರುವ...

ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ: ಒಂದು ಲಕ್ಷ ಜನರ ಭಾಗವಹಿಸುವಿಕೆ ನಿರೀಕ್ಷೆ

ನವೆಂಬರ್ 26ರಂದು ಮೈಸೂರಿನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆಯ ಸಿದ್ಧತೆಗಳ ಕುರಿತು ನಿಕಟಪೂರ್ವ...