ಯಾದಗಿರಿ | ಮೊಹರಂ ಹಬ್ಬ ಹಿನ್ನೆಲೆ : 8 ಗ್ರಾಮಗಳಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟಕ್ಕೂ ಬ್ರೇಕ್

Date:

ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ಎಂಟು ಗ್ರಾಮಗಳಲ್ಲಿ ಮೊಹರಂ ಹಬ್ಬವನ್ನು ಸಾರ್ವಜನಿಕವಾಗಿ ಹಾಗೂ ಗುಂಪು ಗುಂಪಾಗಿ ಆಚರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಹುಲ್ ಪಾಂಡೈ ಆದೇಶ ಹೊರಡಿಸಿದ್ದಾರೆ.

- Advertisement -

ಗುರುಮಠಕಲ್ ತಾಲ್ಲೂಕಿನ ಅರಕೇರಾ (ಕೆ), ನಜರಾಪುರ, ಮಾಧವಾರ, ಪುಟಪಾಕ್ ಮತ್ತು ತಾತಳಗೇರಾ, ಸುರಪುರ ತಾಲ್ಲೂಕಿನ ಗೊಡ್ರಿಹಾಳ ಹಾಗೂ ವಡಗೇರಾ ತಾಲ್ಲೂಕಿನ ತುಮಕೂರು ಗ್ರಾಮಗಳಲ್ಲಿ ಈ ನಿಷೇಧ ಜಾರಿಗೊಳಿಸಲಾಗಿದೆ. ಈ ಗ್ರಾಮಗಳಲ್ಲಿ ಸಾರ್ವಜನಿಕ ಮೆರವಣಿಗೆ ನಡೆಸುವುದಕ್ಕೂ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಜೂನ್ 28ರವರೆಗೆ ನಡೆಯಲಿರುವ ಮೊಹರಂ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಮೂರು ದಿನ ಮದ್ಯ ಮಾರಾಟ ನಿಷೇಧ

ಮೊಹರಂ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂನ್ 25ರಿಂದ 27ರವರೆಗೆ ಎಲ್ಲಾ ವೈನ್‌ಶಾಪ್‌ಗಳು, ಬಾರ್‌ಗಳು ಸೇರಿದಂತೆ ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಮೊಹರಂ ಹಬ್ಬ ಆಚರಿಸುವ ಸಂದರ್ಭದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮದ್ಯದ ಅಮಲಿನಲ್ಲಿ ಗಲಾಟೆಗಳು ನಡೆಯುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡೈ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಮದ್ಯದ ನಶೆಯಲ್ಲಿ ಕ್ರೌರ್ಯ: ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ಜಿಲ್ಲೆಯಲ್ಲಿ ಹಬ್ಬದ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಹಾಗೂ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...