ಯಾದಗಿರಿ | ಮೊಹರಂ ಹಬ್ಬದಲ್ಲಿ ನರೇಗಾ ಕಾರ್ಮಿಕರ ಹೆಜ್ಜೆ; ಸೌಹಾರ್ದತೆ ಮತ್ತು ಐಕ್ಯತೆಯ ಸಂದೇಶ

Date:

ಠಾಣಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಡಗಿಮದ್ರ ಗ್ರಾಮದಲ್ಲಿ ಡಬ್ಬಿನ ಕೆರೆ ಸಮಗ್ರ ಅಭಿವೃದ್ಧಿ ಕಾಮಗಾರಿಯಲ್ಲಿ ತೊಡಗಿದ್ದ ನರೇಗಾ ಕೂಲಿ ಕಾರ್ಮಿಕರು ಮೊಹರಂ ಹಬ್ಬದ ಅಂಗವಾಗಿ ಸಂಭ್ರಮದಿಂದ ಹೆಜ್ಜೆ ಹಾಕಿ ಹಬ್ಬ ಆಚರಿಸಿದರು.

- Advertisement -

ಇದೆ ವೇಳೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಜಮಾಲ್ ಸಾಬ್ ಎ. ಹೆಡಗಿಮದ್ರ ಮಾತನಾಡಿ, ‘ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದು-ಮುಸ್ಲಿಂ ಭೇದಭಾವವಿಲ್ಲದೆ ಎಲ್ಲ ಸಮುದಾಯದ ಜನರು ಒಂದಾಗಿ ಮೊಹರಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...
2159356

“ಸರ್ವ ಜನಾಂಗದ ಶಾಂತಿಯ ತೋಟ ನಮ್ಮ ಭಾರತ ದೇಶ” ಎಂಬ ಸಂದೇಶವನ್ನು ಸಾರುವ ಮೊಹರಂ ಹಬ್ಬವು ಸಮಾಜದಲ್ಲಿ ಸಹೋದರತ್ವ ಮತ್ತು ಐಕ್ಯತೆಯನ್ನು ಬಲಪಡಿಸುತ್ತಿದೆ. ಜನರ ನಡುವೆ ಜಾತಿ, ಧರ್ಮ, ಮೇಲು-ಕೀಳು ಎಂಬ ಭೇದಭಾವದ ವಿಷಬೀಜ ಬಿತ್ತುವ ಪ್ರಯತ್ನಗಳು ನಡೆದರೂ,
ಇಂತಹ ಹಬ್ಬಗಳಲ್ಲಿ ಎಲ್ಲರೂ ಒಂದಾಗಿ ಪಾಲ್ಗೊಳ್ಳುವುದು ಸಮಾಜದ ಒಗ್ಗಟ್ಟಿನ ಪ್ರತೀಕವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.

‘ಹಬ್ಬ-ಹರಿದಿನಗಳು ಜನರನ್ನು ಒಗ್ಗೂಡಿಸುವ ಶಕ್ತಿಯಾಗಿದ್ದು, ಜನವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ಪ್ರೇರಣೆಯಾಗಬೇಕು’ ಎಂದು ಕರೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಬೃಹತ್ ಉದ್ಯೋಗ ಮೇಳ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಈ ಸಂಧರ್ಭದಲ್ಲಿ ಮರೆಪ್ಪ ಶಂಕರಬಂಡಿ, ಸುರೇಶ್ ತೆಳಿಗೇರಿ, ಮರೆಪ್ಪ ಕೋಟೆಕಲ್, ನಂದಪ್ಪ ಬೈರಪ್ಪೋರ್, ಭೀಮರಾಯ ಪೂಜಾರಿ, ಸಾಬಣ್ಣ ಹೆಳವೂರು, ಸಾಹೇಬ್ ಗೌಡ ಅಲಿಪುರ, ಮಲ್ಲಮ್ಮ ಅಂಬಿಗೇರ್, ಮಹೆಬೂಬಿ ಹುಲ್ಕಲ್, ಮಲ್ಲಮ್ಮ ಸುಲಗಿತ್ತಿ, ಶಾಂತಮ್ಮ ಬಂಡಿಮನಿ, ಸಲೀಮಾ ಮುಲ್ಲಾ, ನಾಗಮ್ಮ ಪೂಜಾರಿ, ಹಣಮಂತಿ ಒರುಂಚಿ, ಮಲ್ಲಮ್ಮ ಪತ್ಪುರ್ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...