ಯಾದಗಿರಿ | ರೈತರ ಕಲ್ಯಾಣಕ್ಕಾಗಿ ಸೆ.11ರಂದು ಪಾದಯಾತ್ರೆ

Date:

ಶ್ರಾವಣ ಮಾಸದ ಬೆನಕನ ಅಮಾವಾಸ್ಯೆ ಅಂಗವಾಗಿ ರೈತರ ಕಲ್ಯಾಣಕ್ಕಾಗಿ ಡಾ. ಭೀಮಣ್ಣ ಮೇಟಿ ಅಭಿಮಾನಿ ಬಳಗದ ವತಿಯಿಂದ ಸೆ.11ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಸದಸ್ಯ ಬೀರೇಶ್ ಚಿರತೆನೋರ್ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 11ರಂದು ಬೆಳಿಗ್ಗೆ 9ಕ್ಕೆ ನಗರದ ಶ್ರೀ ಆತ್ಮಲಿಂಗೇಶ್ವರ ದೇವಸ್ಥಾನದಿಂದ ತಾಲೂಕಿನ ಮೈಲಾಪೂರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದವರೆಗೆ ಪಾದಯಾತ್ರೆ ನಡೆಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಲಾಪೂರ ಗ್ರಾಮದಲ್ಲಿ ಶ್ರೀ ಬನ್ನಿ ಮಹಾಕಾಳಮ್ಮ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದ್ದು, ಬಳಿಕ 101 ಮುತ್ತೈದೆಯರಿಗೆ ಉಡಿ ತುಂಬಲಾಗುವುದು. ಕಾರ್ಯಕ್ರಮಕ್ಕೆ ನೇಗಿಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಶ್ರೀ ಮುರುಘಾರಾಜೇಂದ್ರ ಸ್ವಾಮೀಜಿ ಹಾಗೂ ಶ್ರೀ ವಿಶ್ವರಾಧ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಡಾ. ಭೀಮಣ್ಣ ಮೇಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಲಾಪೂರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಪೀಠಾಧಿಪತಿ ಶರಣಪ್ಪ ಪೂಜಾರಿ, ಹಳಿಗೇರಾದ ನಾಗಪ್ಪ ಪೂಜಾರಿ ಹಾಗೂ ಗಿರಿಮಲ್ಲಪ್ಪ ಪೂಜಾರಿ ಘನ ಉಪಸ್ಥಿತಿ ವಹಿಸಲಿದ್ದಾರೆ ಎಂದು ತಿಳಿಸಿದರು.

ಪಾದಯಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಸಹಸ್ರಾರು ಜನರು ಭಾಗವಹಿಸುವ ನಿರೀಕ್ಷೆಯಿದ್ದು, ವಿವಿಧ ರಾಜಕೀಯ ಮುಖಂಡರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಯಾದಗಿರಿ | ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ, ಇಂಟರ್‌ಸಿಟಿ ಸೇವೆ ಪುನರಾರಂಭಕ್ಕೆ ದಸಂಸ ಆಗ್ರಹ

ಸುದ್ದಿಗೋಷ್ಠಿಯಲ್ಲಿ ಶೇಕ್ ಇಮ್ರಾನ್, ಬೆಂಜಮಿನ್ ಶಿವನೂರ, ಖಾಜಾ ಪಟೇಲ್ ದೋರನಹಳ್ಳಿ, ಸೀಮೆನ್ ಅಬ್ಬೆತುಮಕೂರ, ಸುರೇಶ ಹಾಲಗೇರಾ, ಮಲ್ಲಿಕಾರ್ಜುನ ಮೈಲಾಪೂರ, ನಾಗಪ್ಪ ಮೈಲಾಪೂರ, ಮರೆಪ್ಪ ಸುಣಗಾರ ಹಾಗೂ ಕೃಷ್ಣಾ ಭಜಂತ್ರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...