ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

Date:

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮದ ಆರೋಪಗಳ ತನಿಖೆಗೆ ಆಗ್ರಹಿಸಿ ಸಮಾನ ಮನಸ್ಕರ ವೇದಿಕೆ ವತಿಯಿಂದ ನಗರದಲ್ಲಿ ಧರಣಿ ನಡೆಸಲಾಯಿತು.

- Advertisement -

ಧರಣಿಯಲ್ಲಿ ಮಾತನಾಡಿದ ಸಿಪಿಎಂ ಕಾರ್ಯದರ್ಶಿ ಚನ್ನಪ್ಪ ಆನೆಗುಂದಿ, ‘ಬ್ಯಾಂಕ್‌ನಲ್ಲಿ ಸುಮಾರು ₹16.5 ಕೋಟಿ ಹಣಕಾಸಿನ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಪಿ. ಏಜೆಂಟ್ ಸಂಗಣ್ಣ ವಡ್ಡಡೋಗಿ ಅವರು 451 ಜನರಿಗೆ ಸಾಲ ಕೊಡಿಸುವುದಾಗಿ ನಂಬಿಸಿ, ದಾಖಲೆಗಳನ್ನು ಸೃಷ್ಟಿಸಿ ಹಾಗೂ ರಶೀದಿಗಳ ಮೇಲೆ ಸಹಿ ಪಡೆದು ತಲಾ ₹3 ಲಕ್ಷ ಸಾಲ ಮಂಜೂರು ಮಾಡಿಸಿಕೊಂಡು, ಒಟ್ಟು ₹14.80 ಕೋಟಿ ಹಣವನ್ನು ತಮ್ಮ ಖಾತೆಗೆ ಜಮೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ಹಣಕಾಸು ವ್ಯವಹಾರಗಳಲ್ಲಿನ ನೈಜ ಸಂಗತಿಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

‘ಬ್ಯಾಂಕ್‌ಗಳ ಮೇಲಿನ ನಂಬಿಕೆಯಿಂದ ಜನರು ತಮ್ಮ ದುಡಿಮೆಯ ಹಣವನ್ನು ಭವಿಷ್ಯದ ಅಗತ್ಯಗಳಿಗಾಗಿ ಠೇವಣಿ ಇಡುತ್ತಾರೆ. ಆದರೆ, ಅಗತ್ಯವಿದ್ದಾಗ ಠೇವಣಿ ಹಣ ಕೈಗೆ ಸಿಗದಿದ್ದರೆ ಕುಟುಂಬಗಳ ಆರ್ಥಿಕ ಭದ್ರತೆಗೆ ಧಕ್ಕೆಯಾಗುತ್ತದೆ. ಈ ಸಮಸ್ಯೆಯಿಂದ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಬ್ಯಾಂಕ್ ಆಡಳಿತ ಮಂಡಳಿ ವಿಳಂಬ ಮಾಡದೆ ಹಣ ಮರುಪಾವತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

Advertisements

‘ಬ್ಯಾಂಕ್‌ನ ಸಾಲ ಮಂಜೂರಾತಿ, ಹಣ ವರ್ಗಾವಣೆ ಹಾಗೂ ದಾಖಲೆಗಳ ನಿರ್ವಹಣೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು. ಹಣಕಾಸಿನ ಅಕ್ರಮ ನಡೆದಿರುವುದು ತನಿಖೆಯಲ್ಲಿ ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಠೇವಣಿದಾರರಿಗೆ ಹಣ ಮರಳಿಸುವ ಕುರಿತು ಸ್ಪಷ್ಟ ಕಾಲಮಿತಿ ಪ್ರಕಟಿಸಬೇಕು. ಕೇವಲ ಭರವಸೆ ನೀಡುವ ಬದಲು ಗ್ರಾಹಕರ ಹಿತ ಕಾಪಾಡಲು ಆಡಳಿತ ಮಂಡಳಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು’ ಎಂದು ಧರಣಿನಿರತರು ಒತ್ತಾಯಿಸಿದರು.

ಇನ್ನು, ‘ಬ್ಯಾಂಕ್ ಅಧ್ಯಕ್ಷ ಬಸನಗೌಡ ಪಾಟೀಲ್ ಮರ್ಕಲ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ಹಲವು ಪ್ರಶ್ನೆಗಳು ಮೂಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಿ, ತನಿಖೆಯಲ್ಲಿ ತಪ್ಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

ಧರಣಿಯ ಬಳಿಕ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಠೇವಣಿದಾರರ ಹಣ ಮರುಪಾವತಿ, ಬ್ಯಾಂಕ್‌ನ ಹಣಕಾಸು ವ್ಯವಹಾರಗಳ ಸಮಗ್ರ ತನಿಖೆ ಹಾಗೂ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಕೋರಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಈ ಸಂದರ್ಭದಲ್ಲಿ ಗಿರೆಪ್ಪಗೌಡ ಬಾಣತಿಯಾಳ್, ನ್ಯಾಯವಾದಿ ಆರ್. ಚನ್ನಬಸು, ಗೌಡಪ್ಪಗೌಡ ಆಲ್ದಾಳ, ರಾಮಚಂದ್ರ, ಕಾಶಿರಾಜ್, ಎಸ್.ಎನ್. ಸಾಗರ್, ಶೇಖರ್ ದೊರೆ, ಹೊನ್ನಪ್ಪ ಹೊಸ್ಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...