ಯಾದಗಿರಿ | ವಿದ್ಯಾರ್ಥಿ ತಲೆಗೆ ಹೊಡೆದ ಶಿಕ್ಷಕಿ ವಿರುದ್ಧ ಜೂ.13 ರಂದು ಪ್ರತಿಭಟನೆ

Date:

ಶಿಕ್ಷಕಿಯೊಬ್ಬರು ವಿದ್ಯಾರ್ಥಿಯ ತಲೆಗೆ ಹೊಡೆದಿದ್ದು, ತಲೆಗೆ ಬಲವಾಗಿ ಪೆಟ್ಟು ಬಿದಿರುವ ಘಟನೆ ಯಾದಗಿರಿ ನಗರದ ವಿದ್ಯಾರಣ್ಯ ಶಾಲೆಯಲ್ಲಿ ನಡೆದಿದ್ದು, ಈ ಘಟನೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಜೂನ್‌ 13ರಂದು ಪ್ರತಿಭಟನೆ ಹಮ್ಮಿಕೊಳ್ಞಲಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ತಿಳಿಸಿದ್ದಾರೆ.

- Advertisement -

ʼವಿದ್ಯಾರಣ್ಯ ಶಾಲೆಯಲ್ಲಿ 6ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ಮನೀಷ್ ಎನ್ನುವ ವಿದ್ಯಾರ್ಥಿಗೆ ಶಾಲಾ ಶಿಕ್ಷಕಿಯೊಬ್ಬರು ತಲೆಗೆ ಕಟ್ಟಿಗೆ ರೂಲ್‌ನಿಂದ ಹೊಡೆದಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ವಿದ್ಯಾರ್ಥಿಯನ್ನು ಸೋಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹಾಗೂ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆʼ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ʼವಿದ್ಯಾರ್ಥಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಶಸ್ತ್ರಚಿಕಿತ್ಸೆ ಅಗತ್ಯವಿದ್ದು, ಅದಕ್ಕೆ ಸುಮಾರು 8 ರಿಂದ 10 ಲಕ್ಷ ರೂಪಾಯಿ ಖರ್ಚಾಗಲಿದ್ದು, ಹಣ ಹೊಂದಿಸಿಕೊಂಡು ಬಂದರೆ ಶಸ್ತ್ರ ಚಿಕಿತ್ಸೆ ನೀಡುವುದಾಗಿ ವೈದ್ಯರು ಹೇಳಿದ್ದಾರೆ. ಈ ಬಗ್ಗೆ ವಿದ್ಯಾರಣ್ಯ ಶಾಲೆಗೆ ಸಂಬಂಧಪಟ್ಟವರನ್ನು ಭೇಟಿ ಮಾಡಲಾಗಿದ್ದು, ಯಾದಗಿರಿ ಡಿಡಿಪಿಐ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲʼ ಎಂದು ದೂರಿದರು.

ʼವಿದ್ಯಾರ್ಥಿಯ ಚಿಕಿತ್ಸೆಗೆ ತಗಲುವ ಖರ್ಚುವೆಚ್ಚ ಸಂಪೂರ್ಣ ಶಾಲಾ ಮಂಡಳಿ ಭರಿಸಬೇಕು. ಒಂದು ವೇಳೆ ಚಿಕಿತ್ಸೆ ವೆಚ್ಚ ಭರಿಸದೇ ಹೋದಲ್ಲಿ ಇದೆ ತಿಂಗಳು ಜೂ. 13ರಂದು ಶಾಲೆ ಗೇಟ್‌ಗೆ ಮುಳ್ಳು ಬಡೆದು ಪ್ರತಿಭಟನೆ ನಡೆಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಜೀಜ್ ಸಾಬ್ ಐಕೂರು, ಮಲ್ಲಿಕಾರ್ಜುನ ಕುರಕುಂದಿ, ಮಹಾದೇವಪ್ಪ ಬಿಜಾಸಪೂರಕ‌ರ್, ಮಾನಪ್ಪ ಬಿಜಾಸಪೂರಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...