ಕನ್ನೆಕೋಳೂರು ಗ್ರಾಮ ಪಂಚಾಯತ್ ಕಾರ್ಯಾಲಯದ ಮಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಕೆಲಸ ಸೇರಿದಂತೆ ಇತರೆ ಬೇಡಿಕೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಪ್ರತಿಭಟನೆ ನಡೆಸಿತು.
ಶಹಾಪುರ ತಾಲೂಕ ಸಮಿತಿ ಜಂಟಿಯಾಗಿ ಜಿಲ್ಲಾ ಪಂಚಾಯತ್ ಕಚೇರಿಯ ಎದುರುಗಡೆ ಪ್ರತಿಭಟನಾ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.
ʼಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗಾಗಿ ಜಾಬ್ ಕಾರ್ಡ್ ವಿತರಿಸಿ ಸತತ 100 ಮಾನವ ದಿನಗಳು ಕೆಲಸ ಕೊಡಬೇಕು. ಮನರೇಗಾ ಕೂಲಿ ಕೊಡದಿದ್ದರೆ ನಿರುದ್ಯೋಗ ಭತ್ಯೆ ಕೊಡಬೇಕು. ವಸತಿ ರಹಿತರಿಗೆ ಸರ್ವೆ ಮಾಡಿ ಅರ್ಹರಿಗೆ ಮನೆ ಹಂಚಿಕೆ ಮಾಡಬೇಕು. ಕನ್ಯಾಕೊಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಟೆಂಟ್ ಹಾಗೂ ನೀರಿನ ವ್ಯವಸ್ಥೆ ಮಾಡಬೇಕುʼ ಎಂದರು.
ಧರಣಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಶಹಾಪುರ ತಾಲೂಕು ಕಾರ್ಯದರ್ಶಿ ಭೀಮರಾಯ ಪೂಜಾರಿ, ಎಐಎಡಬ್ಲ್ಯೂಯು ಶಹಾಪುರ ತಾಲೂಕ ಅಧ್ಯಕ್ಷೆ ರಂಗಮ್ಮ ಕಟ್ಟಿಮನಿ ಸೇರಿದಂತೆ ಮತ್ತಿತರರಿದ್ದರು.