ಯಾದಗಿರಿ | ಸಂತ್ರಸ್ತರ ದೂರು ನಿರಾಕರಿಸಿದ ಪಿಎಸ್‌ಐ; ಕ್ರಮಕ್ಕೆ ಆಗ್ರಹ

Date:

ಮಹಿಳೆಯರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು, ಜೀವ ಬೆದರಿಕೆ ಹಾಕಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಯಾದಗಿರಿ ಜಿಲ್ಲಾ ವಡಗೇರಾ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ದೂರು ಸ್ವೀಕರಿಸದೇ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ ಕಳಿಸಿರುವ ಪಿಎಸ್ಐ ಮೇಲೆ ಕ್ರಮ ಕೈಗೊಂಡು, ವರ್ಗಾವಣೆ ಮಾಡಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮಹಾದೇವಮ್ಮ W/O ಸಿದ್ದಲಿಂಗಪ್ಪ ನಟೇಕಾರ, ಕ್ಯಾತನಾಳ ಗ್ರಾಮದ ದಲಿತ ಸಮುದಾಯದ ಬಡ ನಿವಾಸಿಗಳಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದಾರೆ.

ಕ್ಯಾತನಾಳ ಗ್ರಾಮದ ಬಂಡಪ್ಪಗೌಡ, ಆದೆಪ್ಪಗೌಡ ಕುರುಬ ಸಮುದಾಯದ ಇಬ್ಬರೂ ಸ ನಂ 1822ರ ಜಮೀನಿಗೆ ಹೊಂದಿಕೊಂಡಂತೆ ಇರುವ ಡೊಣವನ್ನು ಈಗಾಗಲೇ ಆಕ್ರಮಿಸಿಕೊಂಡಿದ್ದು, ಹೊಲದ ಒಡ್ಡು ಕೆಡಿಸುವುದು, ಜಮೀನಿನಲ್ಲಿ ನೀರು ಬಿಡುವುದು ಮಾಡುತ್ತಾರೆ. ಈ ರೀತಿ ಹಲವು ಬಾರಿ ಮಾಡಿದ್ದಾರೆ” ಎಂದು ಆರೋಪಿಸಿದರು.

“ಅವರು ಮಾಡುವ ದಬ್ಬಾಳಿಕೆಗಳನ್ನು ಕೇಳಲು ಹೋದರೆ ಇದನ್ನು ಕೇಳಲು ಹೋದರೆ, ಅವಾಚ್ಯ ಶಬ್ದಗಳಿಂದ ಬೈದು ನಿಂದಿಸುತ್ತಾರೆ. ಜುಲೈ 4ರಂದು ಇದೇ ವಿಚಾರವಾಗಿ ಕೇಳಿದ್ದಕ್ಕೆ ಬಸವಿ, ಸೂಳೆ ಎಂದು ಬೈದಿದ್ದು, ಜಾತಿ ನಿಂದನೆ ಮಾಡಿದ್ದಾರೆ. ಮಹಿಳೆ, ಹಿರಿಯಳು ಎನ್ನದೇ ಬಾಯಿಗೆ ಬಂದಂತೆ ಬೈದು ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಹಾಕಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು

“ಸಂತ್ರಸ್ತೆ ಮಹಾದೇವಮ್ಮ ಅವರ ಮಗ-ಸೊಸೆಯೊಂದಿಗೆ ಜುಲೈ 4ರಂದು ವಡಗೇರಾ ಠಾಣೆಗೆ ದೂರು ನೀಡಲು ಹೋದರೆ ಪಿಎಸ್‌ಐ ದೂರು ಸ್ವೀಕರಿಸದೆ, ʼನಿಮಗೆ ಮಾಡಲು ಕೆಲಸ ಇಲ್ಲವೇ, ನಿಮ್ಮದೇ ತಪ್ಪಿದೆʼ ಎಂದು ಬೆದರಿಸಿ, ಸಂತ್ರಸ್ತರ ದೂರು ತೆಗೆದುಕೊಳ್ಳದೆ ಜಾತಿ ನಿಂದನೆ ಮಾಡಿ, ಅಪಮಾನ ಮಾಡಿ, ಕಳಿಸಿದ್ದಾರೆ. ದಲಿತರಿಗೆ ರಕ್ಷಣೆ ನೀಡುವ ಬದಲಾಗಿ ನಿಂದನೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ವಡಗೇರಾ ಠಾಣಾಗೆ ದೂರು ನೀಡಲು ಹೋದರೆ ಪಿಎಸ್‌ಐ ದೂರು ಸ್ವೀಕರಿಸದೆ ಅವಾಚ್ಯ ಶಬ್ದಗಳಿಂದ ಬೈದು ಕಳಿಸಿರುವ ಪಿಎಸ್‌ಐ ಮೇಲೆ ಕ್ರಮ ಕೈಗೊಂಡು, ವರ್ಗಾವಣೆ ಮಾಡಬೇಕು” ಎಂದು ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

“ಒಂದು ವಾರದೊಳಗೆ ಕ್ರಮ ಕೈಗೊಳ್ಳದೆ ಹೋದರೆ ಕುಟುಂಬದವರೊಂದಿಗೆ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಮಾಡಲಾಗುವುದು” ಎಂದು ಅಂಬೇಡ್ಕರ್ ಸ್ವಾಭಿಮಾನ ಸೇನೆ ಜಿಲ್ಲಾ ಅಧ್ಯಕ್ಷ ಕಾಶಿನಾಥ್ ನಟೇಕಾರ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ₹7 ಕೋಟಿ ವೆಚ್ಚದ ʼಕ್ಲಾಕ್‌ ಟವರ್ʼ ಕಾಮಗಾರಿ ಸ್ಥಗಿತ

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರಾಹುಲ್ ಕೊಲ್ಲೂರು, ಜಿಲ್ಲಾ ಸದಸ್ಯ ಮಲ್ಲಪ್ಪ ಕುರಕುಂದಿ, ವಡಗೇರಿ ತಾಲೂಕ ಅಧ್ಯಕ್ಷ ಸಾಬಣ್ಣ ಹಂಚಿನಾಳ, ಜಿಲ್ಲಾ ಕಾರ್ಯದರ್ಶಿ ಮೌನೇಶ್ ಯಡ್ಡಳ್ಳಿ, ಜಿಲ್ಲಾ ಸದಸ್ಯ ಭೀಮರಾಯ ಕ್ಯಾತ್ನಾಳ್  ಸೇರಿದಂತೆ  ಇತರರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...