ಯಾದಗಿರಿ | ಕುಣಿ ಅಗೆಯಲು ನಿರಾಕರಣೆ: ದಲಿತರ ಮೇಲೆ ಹಲ್ಲೆ, ಗ್ರಾಮ ಬಹಿಷ್ಕಾರದ ಬೆದರಿಕೆ ಆರೋಪ

Date:

ಸುರಪುರ ತಾಲೂಕಿನ ಶಖಾಪುರ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಗಾಗಿ ಕುಣಿ (ಸಮಾಧಿ) ಅಗೆಯುವ ಕಾಯಕ ನಿರ್ವಹಿಸಲು ನಿರಾಕರಿಸಿದ್ದಕ್ಕೆ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

- Advertisement -

ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಮೇಲ್ವರ್ಗದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಂಪ್ರದಾಯದಂತೆ ಅಂತ್ಯಕ್ರಿಯೆಗೆ ಕುಣಿ ಅಗೆಯಲು ದಲಿತ ಸಮುದಾಯದ ಕೆಲವರನ್ನು ಕರೆಯಲಾಗಿತ್ತು ಎನ್ನಲಾಗಿದೆ. ಆದರೆ, ಈ ಕಾಯಕವನ್ನು ಇನ್ನು ಮುಂದೆ ಮಾಡುವುದಿಲ್ಲ ಎಂದು ದಲಿತ ಸಮುದಾಯದವರು ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ದಲಿತ ಸಮುದಾಯದವರ ಪ್ರಕಾರ, “ಗ್ರಾಮದಲ್ಲಿ ಯಾರೇ ಮೃತಪಟ್ಟರೂ ನೀವು ಕುಣಿ ಅಗೆಯಲೇಬೇಕು. ಇಲ್ಲದಿದ್ದರೆ ಗ್ರಾಮದಲ್ಲಿ ಇರಲು ಅವಕಾಶ ನೀಡುವುದಿಲ್ಲ. ನಮ್ಮ ಮಾತು ಕೇಳದಿದ್ದರೆ ಸಾಮಾಜಿಕ ಬಹಿಷ್ಕಾರ ಹಾಕುತ್ತೇವೆ” ಎಂದು ಕೆಲವರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದರ ಜೊತೆಗೆ, ಗ್ರಾಮದ ಬಾವಿಯಿಂದ ಕುಡಿಯುವ ನೀರು ತೆಗೆದುಕೊಳ್ಳಲು ಅವಕಾಶ ನೀಡದೆ ತಡೆಯುವುದು, ಜಮೀನಿಗೆ ಹೋಗುವ ದಾರಿಯಲ್ಲಿ ಅಡ್ಡಿಪಡಿಸುವುದು, ದಲಿತ ಓಣಿಯಲ್ಲಿ ಕಾರ್ಯಕ್ರಮ ನಡೆದಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಹಾಗೂ ಮಹಿಳೆಯರನ್ನು ಅಶ್ಲೀಲ ಪದಗಳಿಂದ ನಿಂದಿಸುವಂತಹ ಘಟನೆಗಳು ನಡೆಯುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ.

ಜಾತೀಯತೆ, ಅಸ್ಪೃಶ್ಯತೆ, ಶೋಷಣೆ, ದಬ್ಬಾಳಿಕೆ ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಟ ಪದ್ಧತಿಗಳು ಇಂದಿಗೂ ಕೆಲವು ಗ್ರಾಮಗಳಲ್ಲಿ ಮುಂದುವರಿದಿರುವುದಕ್ಕೆ ಈ ಘಟನೆ ಉದಾಹರಣೆಯಾಗಿದೆ ಎಂದು ದಲಿತ ಸಮುದಾಯದ ಮುಖಂಡರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಮುಂಗಾರು ವೈಫಲ್ಯಕ್ಕೆ ಮನನೊಂದು ಯುವ ರೈತ ಆತ್ಮಹತ್ಯೆ

ಈ ಸಂಬಂಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ದಲಿತ ಸಮುದಾಯದವರಿಗೆ ರಕ್ಷಣೆ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...