ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

Date:

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ, ಹಂಚಿನಾಳ ಹಾಗೂ ಕಾಡಿನಗೇರಿ ಮೂಲಕ ವಡಗೇರಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಮೂರು ದಶಕಗಳಿಂದ ಡಾಂಬರು ಕಾಣದೆ ಹದಗೆಟ್ಟಿದೆ. ಇದರಿಂದ ವಿಭೂತಹಳ್ಳಿ, ತಿಪ್ಪನಹಳ್ಳಿ, ಕನ್ಯಕೋಳೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು, ಕೃಷಿ ಕಾರ್ಮಿಕರು ಹಾಗೂ ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ.

- Advertisement -

ಕೃಷಿ ಚಟುವಟಿಕೆಗಳಿಗೆ ಈ ರಸ್ತೆ ಪ್ರಮುಖ ಸಂಪರ್ಕ ಮಾರ್ಗವಾಗಿದ್ದರೂ, ದುರಸ್ತಿ ಕಾರ್ಯ ಕೈಗೊಳ್ಳದ ಕಾರಣ ರಸ್ತೆಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಶಹಾಪುರ ತಾಲೂಕು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ಜಿಲ್ಲಾಧಿಕಾರಿಗಳು, ತಾಲೂಕು ದಂಡಾಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕಾರ್ಯದರ್ಶಿ ಭೀಮಣ್ಣ ರಸ್ತಾಪುರ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಕಾಮಗಾರಿಯಲ್ಲಿ ಅವ್ಯವಹಾರದ ಆರೋಪ

Advertisements

ರಸ್ತೆ ಅಭಿವೃದ್ಧಿಗಾಗಿ ಜಿಲ್ಲಾ ಪಂಚಾಯಿತಿಯಿಂದ ₹25ರಿಂದ ₹30 ಲಕ್ಷ ಮೊತ್ತದ ಕಾಮಗಾರಿಗೆ ಟೆಂಡರ್ ನೀಡಲಾಗಿತ್ತು ಎನ್ನಲಾಗಿದ್ದು, ಕೇವಲ 500 ಮೀಟರ್‌ವರೆಗೆ ಮಾತ್ರ ಜಲ್ಲಿ ಹಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸದೆ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪವನ್ನು ರೈತ ಸಂಘ ಮಾಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸಂಬಂಧಪಟ್ಟ ಗುತ್ತಿಗೆದಾರರ ಪರವಾನಗಿಯನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಪ್ರಾಧ್ಯಾಪಕ ಶಿವಾನಂದ ಬಂಟನೂರಗೆ ಡಾ.ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ

ರಸ್ತೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ದುರಸ್ತಿ ಕಾರ್ಯ ಆರಂಭಿಸದಿದ್ದರೆ, ರಸ್ತಾಪುರ ಕಮಾನ್ ಸಮೀಪ ರಾಜ್ಯ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...

ಉಡುಪಿ | ಸಾರಾಯಿ ಅಂಗಡಿಗೆ ಜಾಗವಿದೆ, ದಲಿತರಿಗೆ ನಿವೇಶನವಿಲ್ಲವೇ? : ಕೃಷ್ಣ ಮೂಡುಬೆಳ್ಳೆ

ಡಿಸಿ ಮನ್ನಾ ಜಮೀನು ಹಾಗೂ ವಸತಿ ನಿವೇಶನಗಳ ಹಕ್ಕುಪತ್ರ ವಿತರಣೆಯಲ್ಲಿ ದಲಿತರಿಗೆ...