ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಯಾದಗಿರಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸಾಬಯ್ಯ ಕವಲ್ದಾರ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ. ರವೀಂದ್ರನಾಥ ಹೊಸಮನಿ ತಿಳಿಸಿದ್ದಾರೆ.
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಕಾರ್ಯಾಧ್ಯಕ್ಷರಾಗಿ ಅಶೋಕ್ ಆವಂಟಿ (ನ್ಯೂ ಕನ್ನಡ ಪದವಿಪೂರ್ವ ಕಾಲೇಜು, ಯಾದಗಿರಿ), ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ (ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಯಾದಗಿರಿ), ಪ್ರಧಾನ ಕಾರ್ಯದರ್ಶಿಯಾಗಿ ಭೀಮಾಶಂಕರ ದೊಡ್ಮನಿ (ಸರ್ಕಾರಿ ಪದವಿಪೂರ್ವ ಕಾಲೇಜು, ಹತ್ತಿಕುಣಿ), ಖಜಾಂಚಿಯಾಗಿ ರಾಜಶೇಖರ ರೆಡ್ಡಿ (ಸರ್ಕಾರಿ ಪದವಿಪೂರ್ವ ಕಾಲೇಜು, ಯರಗೊಳ) ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಮಾನಪ್ಪ (ಸರ್ಕಾರಿ ಪದವಿಪೂರ್ವ ಕಾಲೇಜು, ಬಳಿಚಕ್ರ) ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಆಯ್ಕೆ ಬಳಿಕ ಡಾ. ರವೀಂದ್ರನಾಥ ಹೊಸಮನಿ ಮಾತನಾಡಿ, ‘ಪದವಿಪೂರ್ವ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು, ಉಪನ್ಯಾಸಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಸಂಘದ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಉಪನ್ಯಾಸಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು’ ಎಂದು ಕರೆ ನೀಡಿದರು.
ಇದನ್ನು ಓದಿದ್ದೀರಾ? ಕಲಬುರಗಿ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ : ಮಾಜಿ ಶಾಸಕ ಸುಭಾಷ ಗುತ್ತೇದಾರ
ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ರುದ್ರಗೌಡ ಮಾಲಿ ಪಾಟೀಲ್, ಶರಣಪ್ಪ ರಾಹುಲ್, ಬಿಸಲಪ್ಪ ಕಟ್ಟಿಮನಿ, ಸ್ಯಾಮ್ಯುಯೆಲ್ ಕನ್ನಡಿ, ನಿರ್ಮಲ ಸಿನ್ನೂರು, ಸಿದ್ರಾಮಪ್ಪ, ಅನ್ವಾರ್, ಮರಿಯಪ್ಪ ನಾಯ್ಕೋಡಿ, ರವೀಂದ್ರ ಗುತ್ತೇದಾರ್, ಅಮರೇಶ್ ಬಂಗುರ್, ಸಾಬಣ್ಣ, ಶಹಾಪುರ ತಾಲೂಕು ಅಧ್ಯಕ್ಷ ಭೀಮಣ್ಣ ಅಂಚೆಸೂಗೂರ, ಸಂತೋಷ್ ಜುನ್ನಾ, ಮನೋಹರ್ ಗುತ್ತೇದಾರ್, ದಶರಥ, ಶ್ರೀಶೈಲ ಸೇರಿದಂತೆ ಜಿಲ್ಲೆಯ ವಿವಿಧ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಉಪಸ್ಥಿತರಿದ್ದರು.




