ಯಾದಗಿರಿ | ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಸಂಕಲ್ಪ ಸಮಾವೇಶ

Date:

ಕಲ್ಯಾಣ ಕರ್ನಾಟಕದಲ್ಲಿ ಮುಂದುವರಿದಿರುವ ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಂವಿಧಾನದ ಕಲಂ 371(ಜೆ) ಸಮರ್ಪಕ ಜಾರಿಗೆ ಆಗ್ರಹಿಸಿ ಸೆ.17ರಂದು ಕಲಬುರಗಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಯ್ಯ ಕಮತಗಿ ತಿಳಿಸಿದರು.

- Advertisement -

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನ ವ್ಯಯವಾಗಿದ್ದರೂ ಶಿಕ್ಷಣ, ಆರೋಗ್ಯ, ಉದ್ಯೋಗ, ನೀರಾವರಿ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಕಡೇಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದ ಕೆಲವು ರಾಸಾಯನಿಕ ಕಾರ್ಖಾನೆಗಳಿಂದ ತ್ಯಾಜ್ಯ ನೀರು ಹೊರಹರಿಯುತ್ತಿರುವುದರಿಂದ ಜನರು, ಜಾನುವಾರುಗಳ ಆರೋಗ್ಯಕ್ಕೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಅಂತರ್ಜಲದ ಗುಣಮಟ್ಟದ ಮೇಲೂ ಪರಿಣಾಮ ಬೀರುವ ಆತಂಕವಿರುವುದರಿಂದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಯಾದಗಿರಿ ನಗರದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ವಾಸಿಸುತ್ತಿದ್ದು, ನಗರಸಭೆಯಿಂದ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಸಾರ್ವಜನಿಕರಲ್ಲಿ ಆತಂಕವಿದೆ. ಭೀಮಾ ನದಿಯಿಂದ ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

371(ಜೆ) ಜಾರಿಯಾದ ಬಳಿಕ ಸ್ಥಾಪನೆಯಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನವನ್ನು ಕೇವಲ ಕಾಮಗಾರಿಗಳಿಗೆ ಸೀಮಿತಗೊಳಿಸದೆ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೇರಿದಂತೆ ಮಾನವ ಅಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಪ್ರದೇಶದಲ್ಲಿ ಶಿಕ್ಷಕರ ಕೊರತೆ, ವೈದ್ಯಕೀಯ ಸಿಬ್ಬಂದಿ ಅಭಾವ, ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆ ಮತ್ತು ನೀರಾವರಿ ಯೋಜನೆಗಳ ವಿಳಂಬದಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಯುವಜನರು, ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಸೆ.17ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲಬುರಗಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಮಿತಿಯ ನಿಯೋಗ ಅವರನ್ನು ಭೇಟಿ ಮಾಡಿ ಕಲ್ಯಾಣ ಕರ್ನಾಟಕದ ಸಮಸ್ಯೆಗಳು ಹಾಗೂ ಪ್ರಾದೇಶಿಕ ಅಸಮತೋಲನದ ಕುರಿತು ಮನವಿ ಸಲ್ಲಿಸಲಿದೆ. ಕಲಬುರಗಿಯ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸುಮಾರು 2 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಮಲ್ಲಯ್ಯ ಕಮತಗಿ ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಹಲ್ಲೆ: 14 ಜನರ ವಿರುದ್ಧ ಪ್ರಕರಣ ದಾಖಲು

ಸುದ್ದಿಗೋಷ್ಠಿಯಲ್ಲಿ ತಿಪ್ಪಣ್ಣ ಸುಕಲ್ ಸುರಪುರ, ಅಶೋಕ್ ವಾಟಕರ್, ಸಿದ್ದಲಿಂಗಪ್ಪ ನಾಯಕ್ ಬೆಳಗುಂದಿ, ಅಹ್ಮದ್ ಪಠಾಣ್, ಯಲಪ್ಪ ಮಳಿಕೇರಿ, ಗಿರಿಯಪ್ಪಗೌಡ ಬಾಣತಿಹಾಳ ಶಹಾಪುರ, ಸೈಯದ್ ಕಾದ್ರಿ, ಸಿದ್ದಲಿಂಗ ರೆಡ್ಡಿ ಭೀಮನಹಳ್ಳಿ, ಶರಣಪ್ಪ ಜಾಕನಹಳ್ಳಿ ಸೇರಿದಂತೆ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಚಾಕೋಲೆಟ್ ಆಮಿಷವೊಡ್ಡಿ ಅಪ್ರಾಪ್ತತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣ ದಾಖಲು

ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 12 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ...

ಉಡುಪಿ | ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬೆದರಿಕೆ? ₹42.97 ಲಕ್ಷ ವಂಚನೆ ಆರೋಪ; ಇಬ್ಬರ ಬಂಧನ

ಮದುವೆ ಪ್ರಸ್ತಾಪದ ವಿಚಾರವಾಗಿ ಪರಿಚಯವಾಗಿದ್ದ ಮಹಿಳೆಯೊಬ್ಬರು ಹಾಗೂ ಇತರರು ಸೇರಿ ಬೆದರಿಕೆ...

ಉಡುಪಿ | ಪಕ್ಷ ಸಂಘಟನೆ ಜತೆಗೆ ಜನಸೇವೆಯಲ್ಲೂ ರಮೇಶ್ ಕಾಂಚನ್ ಮುಂಚೂಣಿ: ಸೊರಕೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ...