ಯಾದಗಿರಿ| ದಲಿತರ ಮೇಲೆ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಆರೋಪ: ಕಠಿಣ ಕ್ರಮಕ್ಕೆ ದಸಂಸ ಆಗ್ರಹ

Date:

ಸುರಪುರ ತಾಲೂಕಿನ ಶಖಾಪುರ ಎಸ್‌.ಎಚ್‌. ಗ್ರಾಮದಲ್ಲಿ ದಲಿತ ಕುಟುಂಬಗಳ ಮೇಲೆ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಿರುವ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಆಗ್ರಹಿಸಿದೆ.

- Advertisement -

ಈ ಕುರಿತು ಸಮಿತಿಯ ತಾಲೂಕು ಘಟಕದ ಪದಾಧಿಕಾರಿಗಳು ರಾಜ್ಯದ ಗೃಹ ಸಚಿವ ಪ್ರಿಯಾಂಕ ಎಂ. ಖರ್ಗೆ ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಉದ್ದೇಶಿಸಿ ಕೆಂಭಾವಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ ಮೂಲಕ ಶುಕ್ರವಾರ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, ‘ಶಖಾಪುರ ಗ್ರಾಮದಲ್ಲಿ ಮೇಲ್ವರ್ಗದ ಯುವತಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಬಳಿಕ, ಶವ ಸಂಸ್ಕಾರಕ್ಕಾಗಿ ಕುಣಿ ತೋಡಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಆಗಸ್ಟ್‌ 1ರಂದು ದಲಿತ ಸಮುದಾಯದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ’ ಎಂದು ಆರೋಪಿಸಲಾಗಿದೆ.

‘ಯುವತಿಯ ಸಾವಿನ ಪ್ರಕರಣವನ್ನು ಪೊಲೀಸರ ಗಮನಕ್ಕೆ ತರದೆ ಮುಚ್ಚಿಹಾಕಲು ಪ್ರಯತ್ನಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಸಮಿತಿ ಮಾಡಿದೆ. ಯುವತಿಯ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಂಶವನ್ನು ಹೊರತರಬೇಕು’ ಎಂದು ಒತ್ತಾಯಿಸಿದೆ.

‘ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಹಲ್ಲೆಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರ, ಪೊಲೀಸ್ ಭದ್ರತೆ ಹಾಗೂ ಕಾನೂನು ರಕ್ಷಣೆ ಒದಗಿಸಬೇಕು’ ಎಂದು ಆಗ್ರಹಿಸಿದರು.

ಇದಲ್ಲದೆ, ‘ಗ್ರಾಮದಲ್ಲಿ ದಲಿತ ಕುಟುಂಬಗಳಿಗೆ ರಸ್ತೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ತಡೆದು ಸಾಮಾಜಿಕ ಬಹಿಷ್ಕಾರ ಹೇರಲಾಗಿದೆ ಎಂಬ ಆರೋಪದ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು. ಸೌಲಭ್ಯಗಳನ್ನು ತಡೆದಿರುವುದು ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಸಂತ್ರಸ್ತ ದಲಿತ ಕುಟುಂಬಗಳಿಗೆ ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಅಗತ್ಯವಿರುವ ಮನೆಗಳಿಗೆ ಶೌಚಾಲಯ ನಿರ್ಮಿಸಬೇಕು. ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.

‘ದಲಿತ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡುವಂತೆ ಒತ್ತಾಯಿಸಿರುವ ಸಮಿತಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೂಲಕ ಅರ್ಹ ಕುಟುಂಬಗಳಿಗೆ ಸ್ವಯಂ ಉದ್ಯೋಗ ಸಾಲ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು; ಜೆಸ್ಕಾಂ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ

ಈ ಸಂದರ್ಭದಲ್ಲಿ ಶರಣಪ್ಪ ಗಾಯಕವಾಡ, ಗೋಪಾಲ ಬಡಿಗೇರ, ಬಸವಣ್ಣೆಪ್ಪ ಮಾಲಹಳ್ಳಿಕರ, ಪರಶುರಾಮ ಮಾಲಹಳ್ಳಿಕರ, ಸಂಗಪ್ಪ ಹೊಸಮನಿ, ಮಲ್ಲಿಕಾರ್ಜುನ ಕಟ್ಟಿಮನಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ...

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...