ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

Date:

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಶಹಾಪುರ ನಗರವನ್ನು ಸಂಪೂರ್ಣ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

- Advertisement -

ಭೀ ಗುಡಿಯಲ್ಲಿ ಏಳು ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸಿದರೂ ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಬಸ್ ಸಂಚಾರ ಸ್ಥಗಿತಗೊಳಿಸಿ ರಾಜ್ಯ ಹೆದ್ದಾರಿ ತಡೆದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ರೈತರ ಪರ ನಿರ್ಧಾರ ಕೈಗೊಂಡು ನೀರು ಹರಿಸುವ ಭರವಸೆಯ ಹಿನ್ನೆಲೆಯಲ್ಲಿ ಹೋರಾಟಕ್ಕೆ ಒಂದು ದಿನದ ಗಡುವು ನೀಡಲಾಗಿತ್ತು. ಆದರೆ, ಅಧಿವೇಶನದಲ್ಲಿ ಮುಖ್ಯಮಂತ್ರಿ ಜನವರಿ ಕೊನೆಯ ವಾರದವರೆಗೆ ನೀರು ಹರಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...
3688220

ಇದರ ಬೆನ್ನಲ್ಲೇ ಶುಕ್ರವಾರ ಭೀ ಗುಡಿಯಿಂದ ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್‌ಗಳೊಂದಿಗೆ ಬೃಹತ್ ಪ್ರತಿಭಟನಾ ರ‍್ಯಾಲಿ ಆರಂಭಗೊಂಡು ಶಹಾಪುರ ನಗರದ ಶರಣಬಸವೇಶ್ವರ ವೃತ್ತ ತಲುಪಿತು. ಬಳಿಕ ನಾಲ್ಕು ರಸ್ತೆಗಳಲ್ಲಿ ಟ್ರ್ಯಾಕ್ಟರ್ ಹಾಗೂ ಎತ್ತಿನಗಾಡಿಗಳನ್ನು ನಿಲ್ಲಿಸಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಯಿತು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯಾದರೂ ಪ್ರತಿಭಟನೆ ಮುಂದುವರಿದಿತ್ತು. ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ರೈತರ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತು, ಹಿರಿಯ ಸಾಹಿತಿಗಳು ಹಾಗೂ ಪತ್ರಿಕಾಗೋಷ್ಠಿ ಮೂಲಕ ಬೆಂಬಲ ವ್ಯಕ್ತಪಡಿಸಿದರು. ವಕೀಲರ ಸಂಘ ಮತ್ತು ಬಾರ್ ಅಸೋಸಿಯೇಷನ್ ಕೂಡ ಪ್ರತಿಭಟನಾಕಾರರ ಪರವಾಗಿ ನಿಂತವು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೆಗುಂದಿ ಮಾತನಾಡಿ, ಜಲಾಶಯದ ಸಂಪೂರ್ಣ ಜವಾಬ್ದಾರಿಯನ್ನು ಪ್ರಾದೇಶಿಕ ಆಯುಕ್ತರಿಗೆ ವಹಿಸಿರುವುದು ಸ್ವಾಗತಾರ್ಹ. ಆದರೆ, ವಿಜಯಪುರ ಜಿಲ್ಲೆಗೆ 7 ಟಿಎಂಸಿ ಕುಡಿಯುವ ನೀರು ನೀಡುತ್ತಿರುವಾಗ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಕೇವಲ 1 ಟಿಎಂಸಿ ನೀರು ಒದಗಿಸುತ್ತಿರುವುದು ಅನ್ಯಾಯವಲ್ಲವೇ? ಎಂದು ಪ್ರಶ್ನಿಸಿದರು.

3688387

ಜಲಾಶಯದಲ್ಲಿ ನೀರಿದ್ದರೂ ಇಲ್ಲವೆಂದು ಹೇಳಿ ರೈತರನ್ನು ದಾರಿ ತಪ್ಪಿಸಲಾಗುತ್ತಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ನೀರು ಹರಿಸುವ ಭರವಸೆ ನೀಡಿದವರು ರೈತರ ನೋವಿಗೆ ಸ್ಪಂದಿಸದೆ ಬೇರೆ ಕಾರ್ಯಕ್ರಮಗಳಲ್ಲಿ ತೊಡಗಿದ್ದಾರೆ. ನಾವು ಬೀದಿಗಿಳಿದು ಹೋರಾಟ ಮಾಡುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಾದೇಶಿಕ ಆಯುಕ್ತರು ನಿಖರ ಅಂಕಿ-ಅಂಶಗಳನ್ನು ಪಡೆದು ಜಲಾಶಯದಲ್ಲಿರುವ ನೀರಿನ ಪ್ರಮಾಣ ಪರಿಶೀಲಿಸಿ ರೈತರಿಗೆ ನೀರು ಒದಗಿಸಬೇಕು ಎಂದು ಒತ್ತಾಯಿಸಿದರು.

ಹೋರಾಟಗಾರ ಶರಣು ಮಂದರವಾಡ ಮಾತನಾಡಿ, ಜಲಾಶಯದಲ್ಲಿ 80 ಟಿಎಂಸಿ ನೀರು ಇದೆ ಎಂದು ಈ ಹಿಂದೆ ಅಧಿಕಾರಿಗಳು ವರದಿ ಸಲ್ಲಿಸಿರುವ ದಾಖಲೆಗಳು ನಮ್ಮ ಬಳಿ ಇವೆ. ಸುಮಾರು 20 ಟಿಎಂಸಿ ನೀರನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ನಮ್ಮ ಭಾಗಕ್ಕೆ ನೀರು ನೀಡದೆ ಅನ್ಯಾಯ ಮಾಡಲಾಗುತ್ತಿದೆ. ಒಂಬತ್ತು ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಕನಿಷ್ಠ ಒಂದು ಸಂದೇಶವೂ ಬಂದಿಲ್ಲ. ಇಂತಹ ನಿರ್ಲಕ್ಷ್ಯ ಧೋರಣೆಗೆ ರೈತ ಸಂಘದಿಂದ ಧಿಕ್ಕಾರವಿದೆ ಎಂದು ಕಿಡಿಕಾರಿದರು.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಅವರನ್ನು ಉದ್ದೇಶಿಸಿ ಮಾತನಾಡಿದ ಹೋರಾಟಗಾರರು, ತುಂಗಭದ್ರಾ ಜಲಾಶಯದ ವಿಚಾರದಲ್ಲಿ ಆ ಭಾಗದ ಶಾಸಕರು ಹಾಗೂ ಮಾಜಿ ಶಾಸಕರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ನೀರು ಪಡೆದುಕೊಳ್ಳುತ್ತಾರೆ. ರೈತರು ನಿಮಗೆ ಅನ್ನ ಹಾಕುವವರು. ನಮಗೆ ನೀರು ನೀಡದಿದ್ದರೆ ಜಲಾಶಯಕ್ಕೆ ತೆರಳಿ ನೀರು ಪಡೆಯುವ ಸಾಮರ್ಥ್ಯವೂ ನಮಗಿದೆ ಎಂದು ಸವಾಲು ಹಾಕಿದರು.

3688410

ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಹಿಂದಿನ ಗುಂಡೂರಾವ್ ಸರ್ಕಾರದ ಅವಧಿಯಲ್ಲಿ ರೈತರ ಮೇಲೆ ಗುಂಡಿನ ದಾಳಿ ನಡೆದಿತ್ತು. ರೈತರ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ಎಚ್ಚರಿಸಿದರು. ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಈಗ 3 ಟಿಎಂಸಿ ನೀರು ಹರಿಸಿದರೂ ಸಾಕು. ರೈತರು ಎರಡು ಎಕರೆ ಜಮೀನಿನಲ್ಲಿ ಬೆಳೆ ಬೆಳೆಯಲು ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಬೆಳೆ ಕೈಕೊಟ್ಟರೆ ರೈತರು ಬೆಂಗಳೂರು, ಮುಂಬೈಗೆ ವಲಸೆ ಹೋಗಿ ಕೂಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ರೈತರ ಬದುಕು ಮಾತ್ರವಲ್ಲದೆ ಮಕ್ಕಳ ಭವಿಷ್ಯವೂ ಹಾಳಾಗಲಿದೆ ಎಂದರು.

ಜಿಲ್ಲಾಡಳಿತ ಸರ್ಕಾರಕ್ಕೆ ಸರಿಯಾದ ಅಂಕಿ-ಅಂಶಗಳನ್ನು ನೀಡದೆ ರೈತರಿಗೆ ಮೋಸ ಮಾಡಿದೆ ಎಂದು ಆರೋಪಿಸಿದ ಅವರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹಾಗೂ ಕೃಷಿ ಜಂಟಿ ನಿರ್ದೇಶಕರು ಜನವರಿವರೆಗೆ ನೀರು ಹರಿಸುವ ಅಗತ್ಯವಿದೆ ಎಂದು ಬುಧವಾರ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಮುಖಂಡ ಮಹೇಶ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಜೆಡಿಎಸ್ ಮತ್ತು ಬಿಜೆಪಿ ಸರ್ಕಾರಗಳಿಗಿಂತ ರೈತರ ಹಿತ ಕಾಪಾಡಬಹುದು ಎಂಬ ನಿರೀಕ್ಷೆಯಿಂದ ಜನರು ಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ. ಆದರೆ, ಈಗಿನ ಸರ್ಕಾರ ಹಿಂದಿನ ಸರ್ಕಾರಗಳಿಗಿಂತಲೂ ಕನಿಷ್ಠವಾಗಿ ನಡೆದುಕೊಳ್ಳುತ್ತಿದೆ. ರೈತರ ಪರವಾಗಿ ನಿಂತು ತಕ್ಷಣ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

3688216

ಕೂಲಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷರು ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿಯಲ್ಲಿರುವ ಅಧಿಕಾರಿಗಳಿಗೆ ಯಾವ ಬೆಳೆಗೆ ಎಷ್ಟು ನೀರು ಬೇಕು, ಯಾವ ಸಂದರ್ಭದಲ್ಲಿ ಬೆಳೆ ಬೆಳೆಯಬೇಕು ಎಂಬ ಕನಿಷ್ಠ ಅರಿವಿಲ್ಲ. ಸಮಿತಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಆದ್ದರಿಂದ ನೀರಾವರಿ ಸಲಹಾ ಸಮಿತಿಯಲ್ಲಿ ರೈತ ಪ್ರತಿನಿಧಿಗಳಿಗೂ ಅವಕಾಶ ಕಲ್ಪಿಸಬೇಕು. ಆಗ ವಾಸ್ತವ ಪರಿಸ್ಥಿತಿಯ ಬಗ್ಗೆ ನಾವೇ ಸಮಿತಿಗೆ ಸರಿಯಾದ ಮಾಹಿತಿ ನೀಡುತ್ತೇವೆ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಬರಗಾಲದ ನಡುವೆಯೂ ಹರಾಜು ಪ್ರಕ್ರಿಯೆ ಮುಂದುವರಿಕೆ; ಜಿಲ್ಲಾಧಿಕಾರಿ ವಿರುದ್ಧ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಆಕ್ರೋಶ

ನೀರು ಹರಿಸುವವರೆಗೂ ಹೋರಾಟ ಹಿಂಪಡೆಯುವುದಿಲ್ಲ: ಸಂಜೆ 7 ಗಂಟೆಯಾದರೂ ರೈತರು ಪ್ರತಿಭಟನೆಯನ್ನು ಮುಂದುವರಿಸಿದರು. ನೀರು ಹರಿಸಿದರೆ ಮಾತ್ರ ಹೋರಾಟ ಹಿಂಪಡೆಯುತ್ತೇವೆ. ಇಲ್ಲದಿದ್ದರೆ ಹಗಲು-ರಾತ್ರಿ ರಸ್ತೆಯಲ್ಲೇ ಮಲಗಿ ಹೋರಾಟ ಮಾಡುತ್ತೇವೆ. ಜೈಲಿಗಟ್ಟಿದರೂ ಹೆದರುವುದಿಲ್ಲ. ನಮಗೆ ನೀರು ಕೊಡಿ, ಇಲ್ಲ ವಿಷ ಕೊಡಿ ಎಂಬ ಪಟ್ಟು ಹಿಡಿದ ರೈತರು, ಸರ್ಕಾರ ತಕ್ಷಣ ಬೇಡಿಕೆ ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ: ರವಿಹಂಜ ಬಂಧನಕ್ಕೆ ಲಿಂಗಾಯತ ಮಹಾಸಭಾ ಆಗ್ರಹ

ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಅನಿವಾಸಿ ಭಾರತೀಯ...

ದಕ್ಷಿಣ ಕನ್ನಡ | ‘ಋತು ತಾರೆ’ ಪ್ರಾಯೋಗಿಕ ಜಾರಿಗೆ ಸಿದ್ಧತೆ: ಆರೋಗ್ಯಾಧಿಕಾರಿ ಮಾಹಿತಿ

ಮಧ್ಯ ವಯಸ್ಕ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಋತುಬಂಧ ಸಮಸ್ಯೆಗಳಿಗೆ ಪೂರಕವಾಗಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ ಕಾರ್ಮಿಕರ ಬದುಕಿಗಿಲ್ಲ ಭದ್ರತೆ!

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ...

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಮಾರಾಟಕ್ಕೆ ಬ್ರೇಕ್‌: ತೀವ್ರ ಕಾರ್ಯಾಚರಣೆಗೆ ಎಡಿಸಿ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಸಿಗರೇಟ್, ತಂಬಾಕು...