ಯಾದಗಿರಿ | “ಶಿಕ್ಷಣದಿಂದಲೇ ಸಮಾಜ ಪರಿವರ್ತನೆ ಸಾಧ್ಯ”: ಅಂಬರೀಶ್ ಕುಂಬಾರ

Date:

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣದ ಸಮನ್ವಯ ಅಧಿಕಾರಿ ಅಂಬರೀಶ್ ಕುಂಬಾರ ಹೇಳಿದರು.

- Advertisement -

ತಾಲೂಕಿನ ಜಾಪ ನಾಯಕ್ ತಾಂಡ, ಕನ್ನೆಕೋಳೂರು ಗ್ರಾಮದಲ್ಲಿ ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ಸ್ವಯಂಸೇವಾ ಸಂಸ್ಥೆ ಹಮ್ಮಿಕೊಂಡಿದ್ದ ಪರಿಹಾರ ಬೋಧನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಕಾರ್ಯಕ್ರಮ ಉದ್ಘಾಟಿಸಿ ಅಂಬರೀಶ್ ಕುಂಬಾರ ಮಾತನಾಡಿ, ‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ಪರಿಹಾರ ಬೋಧನೆ ನೀಡುವ ಮೂಲಕ ಶೈಕ್ಷಣಿಕ ಸಾಧನೆಯನ್ನು ಹೆಚ್ಚಿಸಲು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಮಹತ್ವದ ಸೇವೆ ಸಲ್ಲಿಸುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಸಂಸ್ಥೆಯು ಶಹಾಪುರದ ಆಯ್ದ ಗ್ರಾಮಗಳಲ್ಲಿ ಪರಿಹಾರ ಬೋಧನಾ ಕೇಂದ್ರಗಳನ್ನು ಸ್ಥಾಪಿಸಿ, ಶಾಲಾ ಅವಧಿಯ ನಂತರ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ವೃದ್ಧಿಸಿದೆ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮೆರೆದಿದ್ದಾರೆ’ ಎಂದು ತಿಳಿಸಿದರು.

2553707

ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಸನ್ಮಾನಿಸಲಾಯಿತು. ಇದೇ ವೇಳೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿದ್ದು, ಬಳಿಕ ವಿಶೇಷ ಪ್ರೀತಿಯ ಭೋಜನವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಮಾಟಿನವರು ನಿರೂಪಿಸಿದರು, ಮೈಕೆಲ್ ಅವರು ವಂದಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಧರಣಿ

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರವಿ ಪವರ್, ಸಮೂಹ ಸಂಪನ್ಮೂಲ ವ್ಯಕ್ತಿ ರವಿ ಕೆ., ಜಾಪ ನಾಯಕ್ ತಾಂಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಅಬ್ದುಲ್ ಹಮೀದ್, ವರ್ಲ್ಡ್ ವಿಷನ್ ಇಂಡಿಯಾ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರಕರ್, ಗ್ರಾಮದ ಹಿರಿಯ ಶಂಕರ್ ಪೂಜಾರಿ, ಅತಿಥಿ ಶಿಕ್ಷಕ ಶಾಂತಪ್ಪ ಗೌಡ, ಕಾರ್ಯಕ್ರಮ ಸಂಯೋಜಕ ಗಿದ್ದಿಯಾನ್ ಜಾಸ್ವಾ, ಮೋಹನ್ ಕುಮಾರ್ ಹೊಸಮನಿ, ಸಿದ್ದಮ್ಮ ಮಲ್ಲಿಕಾರ್ಜುನ್, ಸಿದ್ದಮ್ಮ ಅವಿನಾಶ್, ಮೇನಕ ಚೌಹಾಣ್, ಮಾರುತಿ ಚೌಹಾಣ್, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...