ಯಾದಗಿರಿ | ನಿಸ್ವಾರ್ಥ ಸೇವೆಯಿಂದ ಮಾತ್ರ ಸಮಾಜ ಪರಿವರ್ತನೆ ಸಾಧ್ಯ: ಡಾ. ರವೀಂದ್ರನಾಥ ಹೊಸಮನಿ

Date:

ನಿಸ್ವಾರ್ಥ ಸೇವೆ ಮತ್ತು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ತರಲು ಸಾಧ್ಯ ಎಂದು ಯಾದಗಿರಿ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಡಾ. ರವೀಂದ್ರನಾಥ ಹೊಸಮನಿ ಹೇಳಿದರು.

- Advertisement -

ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ಶಹಾಪುರ ಭಾಗದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗಾಗಿ ಆಯೋಜಿಸಿದ್ದ ಒಂದು ದಿನದಂದು ತರಬೇತಿ ಕಾರ್ಯಗಾರದಲ್ಲಿ ಅವರು ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗೆ ಇದ್ದಾರೆ- ಹಳೆಯ...

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ ಷಡ್ಯಂತ್ರ ಮಾಡಿದ್ದಾರೆ ಎಂಬುದು ಗೊತ್ತಿದೆ. ಅವರಿಗೆ ಸರಿಯಾದ ಪಾಠ ಕಲಿಸುತ್ತೇವೆ"...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...
2157965

‘ಮದರ್ ತೆರೇಸಾ ಮತ್ತು ಸಾವಿತ್ರಿಬಾಯಿ ಫುಲೆ ಅವರ ಸೇವಾ ಮನೋಭಾವವನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, ಸಮಾಜದ ತಳಮಟ್ಟದ ಜನರ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಕಾರ್ಯಕರ್ತೆಯರು ತಮ್ಮ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಬೇಕು’ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ಫ್ಲಾರೆನ್ಸ್ ನೈಟಿಂಗಲ್ ಪ್ರಶಸ್ತಿ ಪುರಸ್ಕೃತ ನರ್ಸಿಂಗ್ ಅಧಿಕಾರಿ ಶ್ರೀಮತಿ ಲೀಲಾ ಅಸ್ನಾಥ್, ‘ನಿಗದಿತ ಕರ್ತವ್ಯಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿದಾಗ ಮಾತ್ರ ಪ್ರಶಂಸೆ, ಗೌರವ ಹಾಗೂ ಜನರ ಆಶೀರ್ವಾದ ದೊರೆಯುತ್ತದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಉತ್ಸಾಹ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ’ ಸಲಹೆ ನೀಡಿದರು.

ಆರೋಗ್ಯ ಇಲಾಖೆಯ ಬಿಎಚ್‌ಇಒ ಗುಲ್ಜನ್ ಬೇಗಂ ಮಾತನಾಡಿ, ‘ಮಕ್ಕಳ ಆರೋಗ್ಯ, ಗರ್ಭಿಣಿಯರ ಆರೈಕೆ ಹಾಗೂ ಸ್ವಂತ ಆರೋಗ್ಯದ ಮಹತ್ವದ ಕುರಿತು ಮಾಹಿತಿ ನೀಡಿದರು. ಗ್ರಾಮೀಣ ಆರೋಗ್ಯ ವ್ಯವಸ್ಥೆಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಹೆಚ್ಚಿನ ಆಸಕ್ತಿಯಿಂದ ಸೇವೆ ಸಲ್ಲಿಸಬೇಕು’ ಎಂದು ಹೇಳಿದರು.

2157954

ಕಾರ್ಯಕ್ರಮದಲ್ಲಿ ಸಿಎಚ್‌ಒ ಭೀಮಶಂಕರ್, ವರ್ಲ್ಡ್ ವಿಷನ್ ಇಂಡಿಯಾದ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್, ವಿಡಿಸಿ ಅಧ್ಯಕ್ಷ ರಾಚಣ್ಣ ಕರದಳ್ಳಿ, ಬನ್ನಪ್ಪ ನಾಟೀಕಾರ, ರಾಬರ್ಟ್ ದೊಡ್ಡಮನಿ, ಮೀಕಾಯಲ್ ಸಂಪತ್ ಕುಮಾರ್, ಮೋಹನ್ ಕುಮಾರ್ ಹೊಸಮನಿ, ಸಿದ್ದಮ್ಮ ಮಲ್ಲಿಕಾರ್ಜುನ್, ಸಿದ್ದಮ್ಮ ಅವಿನಾಶ್, ಬೆನಕ ಮಾರುತಿ ಚೌಹಾಣ್ ಹಾಗೂ ರೇಖಾ ಬಸವರಾಜ್ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ಭೀಮಾ ನದಿಯಲ್ಲಿ ಮುಳುಗಿ ಬಾಲಕಿ ಸಾವು!

ಕಾರ್ಯಕ್ರಮವನ್ನು ಮಾರ್ಟಿನ್ ಶಾಂತಕುಮಾರ ಕಾರ್ಯಕ್ರಮವನ್ನು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪರವಾನಗಿ ಇಲ್ಲದೇ ಮದ್ಯ ಮಾರಾಟ; ಆರೋಪಿತನ ವಿರುದ್ಧ ಪ್ರಕರಣ ದಾಖಲು

ನಗರದ ಹೀರಾಪುರ ಬಡಾವಣೆಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ...

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಸಮೀಪ...

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ...

ರಾಯಚೂರು | ಸಿಡಿಲು ಬಡಿದು ಆಡುಗಳ ಸಾವಿಗೆ ಶಾಸಕರಿಂದ ₹40 ಸಾವಿರ ನೆರವು

ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ...