ಯಾದಗಿರಿ | ಅಂಗನವಾಡಿ ನೌಕರರ ನಿರೀಕ್ಷೆ ಹುಸಿಗೊಳಿಸಿದ ರಾಜ್ಯ ಬಜೆಟ್‌ : ಎಐಯುಟಿಯುಸಿ

Date:

Advertisements

2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇವಲ 1000 ಸಹಾಯಕಿಯರಿಗೆ ರೂ.750 ಗೌರವ ಧನವನ್ನು ಹೆಚ್ಚಳ ಮಾಡಿರುವುದು ಇಡೀ ರಾಜ್ಯದ ಅಂಗನವಾಡಿ ನೌಕರರಿಗೆ ಬಹಳ ಬೇಸರ ತಂದಿದೆ ಕರ್ನಾಟಕ ರಾಜ್ಯ
ಸಂಯುಕ್ತ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿ ತಿಳಿಸಿದೆ.

ʼಅಂಗನವಾಡಿ ನೌಕರರು ಗ್ರಾಮೀಣ ಮಟ್ಟದಲ್ಲಿ ಕೊಳೆಗೇರಿಗಳ ಮಕ್ಕಳಿಗೆ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣ ನಿಡುವಲ್ಲಿ ಗರ್ಭಿಣಿ ಮತ್ತು ಬಾಣಂತಿಯ ಕಿಶೋರಿಯರ, ಅವರುಗಳಿಗೆ ಪೌಷ್ಟಿಕಾಂಶ ನಿಡುವಲ್ಲಿ ಮಹತ್ತರವಾದ ಸೇವೆಯನ್ನು
ಕಳೆದ 50 ವರ್ಷಗಳಿಂದಲೂ ಸಲ್ಲಿಸುತ್ತಾ ಬಂದಿದ್ದಾರೆ ಎಂದು ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್‌ ಯಾದಗಿರಿ, ರಾಜ್ಯ ಕಾರ್ಯದರ್ಶಿ ಎಂ.ಉಮಾದೇವಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಈ ಯೋಜನೆಯಲ್ಲಿ ಬಹುತೇಕ ಕಾರ್ಯಕರ್ತೆಯರು ಒಬ್ಬಂಟಿ ಮಹಿಳೆ, ವಿಧವೆಯರು ಇರುವುದರಿಂದ ಹೆಣ್ಣು ಮಕ್ಕಳ ಆರ್ಥಿಕವಾಗಿ ಮೇಲೆ ಬರುವ ಹಿನ್ನೆಲೆಯಲ್ಲಿ ಐಸಿಡಿಎಸ್ ಯೋಜನೆ ಜಾರಿಗೆ ತಂದಿರುವುದು, ಈ ಸೇವೆಯನ್ನು ಸಮರ್ಪಕವಾಗಿ ಕೆಳ ಮಟ್ಟದ ಜನಗಳಿಗೆ ತಲುಪುವ ನಿಟ್ಟಿನಲ್ಲಿ ಈ ಕಾರ್ಯಕರ್ತೆಯರನ್ನು ಸೇವೆಗೆ ತೆಗೆದುಕೊಂಡಿದ್ದಾರೆ, ಇಡೀ ಕುಟುಂಬದ ಜವಾಬ್ದಾರಿಯನ್ನು ಈ ಬಡ ಹೆಣ್ಣುಮಕ್ಕಳ ಮೇಲೆ ಇದೆ. ಇಂತಹ ಸಂದರ್ಭದಲ್ಲಿ ದಿನ ನಿತ್ಯ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆರುತ್ತಿವೆ. ಈಗ ತಮಗೆ ಸಿಗುವ ಗೌರವ ಧನದಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಆರೋಗ್ಯ, ಮನೆ ಬಾಡಿಗೆ ನೀಡುವುದು ದುಸ್ತರವಾಗಿದೆʼ ಎಂದರು

Advertisements

ʼಈಗಿನ ಬೆಲೆ ಏರಿಕೆ ಸಂದರ್ಭದಲ್ಲಿ ಕನಿಷ್ಠ ವೇತನ ಜಾರಿಗೊಳಿಸದೆ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳೂ ಇವರಿಗೆ ಅನ್ಯಾಯ ಮಾಡಿವೆ. ಕೇಂದ್ರ ಸರಕಾರವು ತನ್ನ 11ನೇ ಬಜೆಟ್‌ನಲ್ಲಿ ಸಹ ನಯಾ ಪೈಸೆ ಗೌರವ ಧನವನ್ನು ಏರಿಕೆ ಮಾಡದೆ
ಇರುವುದು ಆ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಚುನಾವಣಾ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿರುವ 6ನೇ ಗ್ಯಾರಂಟಿಯಂತೆ ಗೌರವ ಧನವನ್ನು 15 ಸಾವಿರಕ್ಕೆ ಹೆಚ್ಚಿಸಬಹುದು ಎನ್ನುವ ಕನಿಷ್ಟ ನಿರೀಕ್ಷೆಯೂ ಹುಸಿಯಾಗಿದೆʼ ಎಂದು ಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನವ ಉದಾರೀಕರಣ ನೀತಿಗಳಿಗೆ ಮಣೆ ಹಾಕಿರುವ ರಾಜ್ಯ ಬಜೆಟ್‌ : ಶರಣಬಸಪ್ಪ ಮಮಶೆಟ್ಟಿ

ʼಒಟ್ಟಾರೆಯಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಅಂಗನವಾಡಿ ನೌಕರರು ಇಟ್ಟಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದೆ. ಸರ್ಕಾರ ಈ ತೀರ್ಮಾನವನ್ನು ಮರು ಪರಿಶೀಲಿಸಿ ಈ ಹಿಂದೆ ಭರವಸೆ ನೀಡಿರುವಂತೆ ಮಾಸಿಕ ಗೌರವ ಧನವನ್ನು 15 ಸಾವಿರಕ್ಕೆ ಹೆಚ್ಚಿಸುವುದೂ ಸೇರಿದಂತೆ ಸಂಘವು ಮುಂದಿಟ್ಟಿರುವ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ರಾಜ್ಯ ಸಮಿತಿ ಆಗ್ರಹಿಸುತ್ತದೆʼ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X