ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

Date:

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಕಲ್ಲುತೂರಾಟ ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆದಿರುವ ಘಟನೆ ಸೋಮವಾರ ರಾತ್ರಿ ನಗರದ ವಾರ್ಡ್‌ ನಂ.17 ಮತ್ತು 18ರ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

- Advertisement -

ಗಣೇಶ ಮೂರ್ತಿ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಬೈಕ್‌ವೊಂದು ಕಾಲಿನ ಮೇಲೆ ಹರಿದಿದೆ ಎಂಬ ವಿಚಾರಕ್ಕೆ ಕೆಲ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಳಿಕ ವಾಗ್ವಾದ ತೀವ್ರಗೊಂಡು ಎರಡೂ ಗುಂಪುಗಳ ನಡುವೆ ಗಲಾಟೆ ಉಂಟಾಗಿದೆ. ಈ ವೇಳೆ ಪರಸ್ಪರ ಕಲ್ಲು ತೂರಾಟ ನಡೆಸಲಾಗಿದ್ದು, ದೊಣ್ಣೆಗಳಿಂದಲೂ ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಘಟನೆಗೆ ಮೂರು-ನಾಲ್ಕು ತಿಂಗಳ ಹಿಂದೆ ನಡೆದಿದ್ದ ಮದುವೆ ಸಮಾರಂಭದ ಗಲಾಟೆಯಿಂದ ಉಂಟಾದ ಹಳೆಯ ವೈಮನಸ್ಸು ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗಣೇಶ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರೊಂದಿಗೆ ಕೆಲವರು ಕಿರಿಕ್ ತೆಗೆದು ಗಲಾಟೆ ಆರಂಭಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

ಗಲಾಟೆಯಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಒಟ್ಟು 19 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಕಲ್ಲುತೂರಾಟ ಹಾಗೂ ಹಲ್ಲೆಯಲ್ಲಿ ಭಾಗಿಯಾದವರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ಘಟನೆಯ ಹಿನ್ನೆಲೆಯಲ್ಲಿ ವಾರ್ಡ್‌ ನಂ.17 ಮತ್ತು 18ರ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...

ಗದಗ | ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಸವರಾಜ ರಾಯರಡ್ಡಿ...