ಯಾದಗಿರಿ | ವಿಷಕಾರಿ ದುಬೈ ಸಸಿಗಳ ನೆಡುವಿಕೆ ನಿಲ್ಲಿಸಿ ; ಜಯ ಕರ್ನಾಟಕ ಸಂಘಟನೆಯ ಆಗ್ರಹ

Date:

ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ರಸ್ತೆ ವಿಭಾಜಕಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ದುಬೈ ಸಸಿಗಳನ್ನು ನೆಡುವುದನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಮನವಿ ಸಲ್ಲಿಸಿದರು.

- Advertisement -

ಬುಧವಾರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ ಜಿಲ್ಲಾ ಅಧ್ಯಕ್ಷ ಬಿ ಎನ್ ವಿಶ್ವನಾಥ ನಾಯಕ ಮಾತನಾಡಿ, ‘ದುಬೈ ಸಸಿಗಳು ಪರಿಸರಕ್ಕೆ ವಿಷಕಾರಿ ಅಶುದ್ಧ ಗಾಳಿಯನ್ನು ಬಿಡುತ್ತಿವೆ. ಅವುಗಳಿಂದ ಅಸ್ತಮಾ, ಶ್ವಾಸಕೋಶದ ತೊಂದರೆಗಳು ಹಾಗೂ ಕ್ಯಾನ್ಸರ್‌ನಂತಹ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ,’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅವರು ಮುಂದುವರೆದು ‘ಅರಣ್ಯ ಇಲಾಖೆ ಇತ್ತೀಚೆಗೆ ವಿವಿಧ ಸ್ಥಳಗಳಲ್ಲಿ ಈ ಸಸಿಗಳನ್ನು ನೆಡುವ ಕಾರ್ಯ ಕೈಗೊಂಡಿದೆ. ಇದು ಸಂಪೂರ್ಣ ಅವೈಜ್ಞಾನಿಕ ಹಾಗೂ ಅವಿವೇಕದ ನಿರ್ಧಾರ. ಪರಿಸರ ಮತ್ತು ಮಾನವ ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಈ ಸಸಿಗಳನ್ನು ನೆಡುವ ಬದಲು ಆಮ್ಲಜನಕ ಉತ್ಪಾದನೆಗೆ ಸಹಾಯಕವಾದ, ಹಣ್ಣು-ಹಂಪಲು ನೀಡುವ ಸಸಿಗಳನ್ನು ನೆಡಬೇಕು,’ ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಪಥಸಂಚಲನ ಪಾಲಿಟಿಕ್ಸ್ | ವಾಗ್ವಾದ, ಗೊಂದಲದಲ್ಲೇ ಕಲಬುರಗಿ ಶಾಂತಿ ಸಮಿತಿ ಸಭೆ ಮುಕ್ತಾಯ

‘ಯಾದಗಿರಿ ಜಿಲ್ಲಾಧಿಕಾರಿ ಕಚೇರಿ, ಖಾಸಗಿ ಕಟ್ಟಡಗಳ ಮುಂಭಾಗ, ಹೈದ್ರಾಬಾದ್ ರಸ್ತೆ ವಿಭಾಜಕಗಳು ಸೇರಿದಂತೆ ಸುರಪುರ, ಶಹಾಪೂರ, ವಡಗೇರಾ, ಗುರುಮಠಕಲ್, ಹುಣಸಗಿ ಹಾಗೂ ಕಡೇಚೂರು ಕೈಗಾರಿಕಾ ಪ್ರದೇಶಗಳಲ್ಲಿ ಶೇಕಡಾ 90ರಷ್ಟು ದುಬೈ ಸಸಿಗಳು ನೆಡಲ್ಪಟ್ಟಿವೆ ಎಂದು ತಿಳಿಸಿ, ಈ ಕೆಲಸವನ್ನು ಕೂಡಲೇ ನಿಲ್ಲಿಸಲು ಅರಣ್ಯ ಅಧಿಕಾರಿಗಳಲ್ಲಿ ಒತ್ತಾಯಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ವಿಜಯಕುಮಾರ ಮೊಗದಂಪುರ, ಶಿವರಾಜ ಗುತ್ತೇದಾರ, ನಾಗರಾಜ ರಾಮಸಮುದ್ರ, ಮಾರುತಿ ಮುದ್ನಾಳ, ದೀಪಕ ಪೊದ್ದಾರ, ಅಶೋಕ್ ರೆಡ್ಡಿ ಎಲ್ಲೇರಿ, ರಂಗನಾಥ ನಾಯಕ, ಭೀಮಣ್ಣ ಪೂಜಾರಿ, ಸಾಬೆರಡ್ಡಿ, ನಾಗರಡ್ಡಿ, ಸಿದ್ದು ಸಿದ್ಧಿ, ಎಂ.ಡಿ. ಅಮೀರ್, ಮಂಜುನಾಥ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...