ಯಾದಗಿರಿ | ಬಾಲ ಕಾರ್ಮಿಕರ ಬಳಕೆ ಕಂಡುಬಂದರೆ ಕಠಿಣ ಕ್ರಮ: ಪಿಎಸ್‌ಐ ರಾಹುಲ್ ಪವಾಡೆ ಎಚ್ಚರಿಕೆ

Date:

14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡು ದುಡಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್‌ಐ ರಾಹುಲ್ ಪವಾಡೆ ಎಚ್ಚರಿಕೆ ನೀಡಿದರು.

- Advertisement -

ಹುಣಸಗಿ ಪಟ್ಟಣದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಹೋಟೆಲ್‌, ಡಾಬಾ, ಲಾಡ್ಜ್‌, ಪೆಟ್ರೋಲ್‌ ಬಂಕ್‌ ಹಾಗೂ ರಸಗೊಬ್ಬರ ಅಂಗಡಿಗಳಿಗೆ ತೆರಳಿ ತಪಾಸಣೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಯಾವುದೇ ಕಾರಣಕ್ಕೂ ಮಕ್ಕಳನ್ನು ಕೆಲಸಕ್ಕೆ ಕಳುಹಿಸಬಾರದು ಹಾಗೂ ಮಾಲೀಕರು ಅವರನ್ನು ದುಡಿಸಿಕೊಳ್ಳಬಾರದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಪಿಎಸ್‌ಐ ತಿಳಿಸಿದರು.

ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಮಕ್ಕಳನ್ನು ಕೆಲಸಕ್ಕೆ ಬಳಸುವುದು ಗಂಭೀರ ಅಪರಾಧವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮರಣಾಂತಿಕ ಹಲ್ಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಮಲ್ಲು ಹಲಗಿ

ಕಾರ್ಯಾಚರಣೆಯಲ್ಲಿ ಎಎಸ್‌ಐ ಚಂದ್ರಾಮ ಹಾಗೂ ಪೊಲೀಸ್‌ ಸಿಬ್ಬಂದಿಗಳಾದ ಸುಭಾಷ್, ಡಂಬಳ, ಶಿವರಾಜ್, ಪ್ರಶಾಂತಿ, ಸಿದ್ದು, ಅಮರೇಶ್ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬೆದರಿಕೆ? ₹42.97 ಲಕ್ಷ ವಂಚನೆ ಆರೋಪ; ಇಬ್ಬರ ಬಂಧನ

ಮದುವೆ ಪ್ರಸ್ತಾಪದ ವಿಚಾರವಾಗಿ ಪರಿಚಯವಾಗಿದ್ದ ಮಹಿಳೆಯೊಬ್ಬರು ಹಾಗೂ ಇತರರು ಸೇರಿ ಬೆದರಿಕೆ...

ಉಡುಪಿ | ಪಕ್ಷ ಸಂಘಟನೆ ಜತೆಗೆ ಜನಸೇವೆಯಲ್ಲೂ ರಮೇಶ್ ಕಾಂಚನ್ ಮುಂಚೂಣಿ: ಸೊರಕೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...