ಯಾದಗಿರಿ | ಬಿಸಿ ಪಾನಕ ಬಿದ್ದು, ವಿದ್ಯಾರ್ಥಿಗೆ ಗಂಭೀರ ಗಾಯ: ಸ್ವಾಮಿ ನಾರಾಯಣ ಗುರುಕುಲ ವಿದ್ಯಾಪೀಠದ ಆಡಳಿತ ನಿರ್ಲಕ್ಷ್ಯ

Date:

ವಸತಿಶಾಲೆಯ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವಾಗ ಮೇಮೇಲೆ ಬಿಸಿ ಪಾನಕ ಬಿದ್ದು, ಮೈ ಸುಟ್ಟಿರುವುದಕ್ಕೆ ಚಿಕಿತ್ಸೆ ನೀಡಲು ₹5 ಲಕ್ಷ ಖರ್ಚಾಗುವುದಾಗಿ ವೈದ್ಯರು ಹೇಳಿದ್ದಾರೆ. ಆದರೆ ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಹೇಳಿದ್ದ ಸ್ವಾಮಿ ನಾರಾಯಣ ಗುರುಕುಲ ವಿದ್ಯಾಪೀಠದ ಮುಖ್ಯೋಪಧ್ಯಾಯರು, ಈಗ ನಮ್ಮ ಫೋನ್‌ ಕರೆಗಳನ್ನೇ ಸ್ವೀಕರಿಸುತ್ತಿಲ್ಲ ಎಂದು ವಿದ್ಯಾರ್ಥಿಯ ಪೋಷಕ ಸಂಗಮೇಶ ಎಂಬುವವರು ಆರೋಪಿಸಿದ್ದಾರೆ.

- Advertisement -

ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಅಲವತ್ತುಕೊಂಡಿರುವ ಅವರು, “ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟ ಗ್ರಾಮದವರಾದ ನಾವು ಮಗ(ಚೇತನ್)ನನ್ನು ಕಲಬುರಗಿ ನಗರದ ಸ್ವಾಮಿ ನಾರಾಯಣ ಗುರುಕುಲ ವಿದ್ಯಾಪೀಠದಲ್ಲಿ ವಿದ್ಯಾಭ್ಯಾಸ ಮಾಡಲು ಬಿಟ್ಟಿದ್ದೆವು. ಅಲ್ಲಿಯ ಅಡುಗೆ ಮನೆಯಲ್ಲಿ ಮಕ್ಕಳಿಂದಲೇ ಕೆಲಸ ಮಾಡಿಸುತ್ತಿದ್ದರು. ಈ ವೇಳೆ ಜಾಮೂನು ಮಾಡುವ ಸಂದರ್ಭದಲ್ಲಿ ಅವನ ಮೇಲೆ ಬಿಸಿ ಪಾಕ ಬಿದ್ದಿದ್ದು, ಗಂಭಿರ ಗಾಯಗಳಾಗಿವೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಈ ಕುರಿತು ಮುಖ್ಯೋಪಾಧ್ಯಾಯರ ಗಮನಕ್ಕೆ ತಂದಾಗ, ಶಾಲೆವತಿಯಿಂದಲೇ ಸಂಪೂರ್ಣವಾಗಿ ಅವನ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಹೇಳಿ ಕಳುಹಿಸಿದ್ದರು. ಆದರೆ ಈಗ ನನ್ನ ಮಗನಿಗೆ ಅಲ್ಪ ಚಿಕಿತ್ಸೆ ಮಾಡಿಸಿ, ಕಣ್ಮರೆಯಾಗಿದ್ದಾರೆ. ನಾನು ಹಲವು ಬಾರಿ ಪೋನ್ ಕಾಲ್ ಮಾಡಿದರೂ ರೀಸಿವ್‌ ಮಾಡುತ್ತಿಲ್ಲ. ಇತ್ತ ವೈದ್ಯರು ಅವನ ಚಿಕಿತ್ಸೆಗಾಗಿ 5 ಲಕ್ಷ ರೂ.ವರೆಗೂ ಖರ್ಚಾಗುತ್ತದೆಂದು ಹೇಳುತ್ತಿದ್ದಾರೆ. ನಮಗೆ ದಿಕ್ಕೇ ತೋಚದಂತಾಗಿದೆ” ಎಂದು ಅವಲತ್ತುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಜಿಲ್ಲೆಯಲ್ಲಿ 245 ಇಸ್ಪೀಟ್, ಜೂಜು ಆಟಗಾರರ ಬಂಧನ

ದಯಾಳುಗಳಾದ ತಾವುಗಳು ಮಧ್ಯ ಪ್ರವೇಶಿಸಿ ನನ್ನ ಮಗನ ಆರೋಗ್ಯದ ಸಲುವಾಗಿ ಶಾಲೆಯ ಕಡೆಯಿಂದ ವೈದ್ಯಕೀಯ ಚಿಕಿತ್ಸೆ ಪರಿಹಾರವನ್ನು ಕೊಡಿಸುವುದರ ಜತೆಗೆ ಅವನ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...