ಯಾದಗಿರಿ | ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ

Date:

ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲ್ಲೂಕಿನ ಹತ್ತಿಕುಣಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಯಾದಗಿರಿ, ಸೇಡಂ ರಾಜ್ಯ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

- Advertisement -

ಹತ್ತಿಕುಣಿ ಗ್ರಾಮವು ಹೋಬಳಿ ಕೇಂದ್ರವಾಗಿದ್ದು, ಪ್ರತಿದಿನ ಇಲ್ಲಿಂದ ನೂರಾರು ವಿದ್ಯಾರ್ಥಿಗಳು ಯಾದಗಿರಿ ನಗರದ ವಿವಿಧ ಶಾಲೆ ಮತ್ತು ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ಕಳೆದ 15 ದಿನಗಳಿಂದ ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದ ಕಾರಣ ಸಮಯಕ್ಕೆ ಸರಿಯಾಗಿ ಶಿಕ್ಷಣ ಸಂಸ್ಥೆಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಯಾದಗಿರಿಯಿಂದ ಸೇಡಂ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚರಿಸುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಪ್ರಯಾಣಿಕರಿಂದ ತುಂಬಿರುವ ಕಾರಣ ಹತ್ತಿಕುಣಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸದೆ ಮುಂದಕ್ಕೆ ತೆರಳುತ್ತಿವೆ. ಪರಿಣಾಮ ವಿದ್ಯಾರ್ಥಿಗಳು ಗಂಟೆಗಟ್ಟಲೆ ಬಸ್‌ಗಾಗಿ ಕಾಯುವಂತಾಗಿದ್ದು, ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಪ್ರತಿಭಟನೆಗೆ ಗ್ರಾಮದ ಮುಖಂಡರಾದ ಶರಣಪ್ಪಗೌಡ ಮಾಲಿ ಪಾಟೀಲ್‌, ಭೀಮರಡ್ಡಿ ರಾಂಪೂರಹಳ್ಳಿ, ವೆಂಕಟರಡ್ಡಿ ಕೌಳೂರ, ನಾಗಪ್ಪ ಗೋಪಾಳಪುರ, ಅಂಬು ನಾಯಕ, ಮಲ್ಲಿಕಾರ್ಜುನ ಕನ್ನಡಿ, ಹಣಮಂತ ನಾಯಕ ಹಾಗೂ ಶರಣು ಗಡೇದ ಸೇರಿದಂತೆ ಹಲವರು ಬೆಂಬಲ ಸೂಚಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಹಾಸ್ಟೆಲ್ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಪ್ರತಿಭಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ವಿರೇಶ ಹಾಗೂ ಸಾರಿಗೆ ಇಲಾಖೆಯ ಇನ್ಸ್‌ಪೆಕ್ಟರ್ ಬಸಣ್ಣಗೌಡ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ವಿದ್ಯಾರ್ಥಿಗಳ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...