ಯಾದಗಿರಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಶಹಾಪುರದಲ್ಲಿ ಪಂಜಿನ ಮೆರವಣಿಗೆ

Date:

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ಖಂಡಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿ ದಲಿತ ಸೇನೆ ಜಿಲ್ಲಾ ಸಮಿತಿ ಹಾಗೂ ಜಿಲ್ಲಾ ವಿದ್ಯಾರ್ಥಿ ಘಟಕದ ವತಿಯಿಂದ ಶಹಾಪುರ ನಗರದಲ್ಲಿ ಬುಧವಾರ ಪಂಜಿನ ಮೆರವಣಿಗೆ ನಡೆಸಖಂಡನೀಯ.

- Advertisement -

ನಗರದ ಸಿ.ಬಿ. ಕಮಾನ್‌ನಿಂದ ಆರಂಭವಾದ ಮೆರವಣಿಗೆ ಮುಖ್ಯ ರಸ್ತೆಯ ಮೂಲಕ ಬಸವೇಶ್ವರ ವೃತ್ತದವರೆಗೆ ಸಾಗಿತು. ನೂರಾರು ವಿದ್ಯಾರ್ಥಿಗಳು ಮತ್ತು ಯುವಕರು ಕೈಯಲ್ಲಿ ಉರಿಯುವ ಪಂಜುಗಳನ್ನು ಹಿಡಿದು ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ ಹಾಗೂ ನೀಟ್ ಅಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಸೇನೆ ಜಿಲ್ಲಾ ಅಧ್ಯಕ್ಷ ಅಶೋಕ ಹೊಸಮನಿ, ‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ ಮತ್ತು ನ್ಯಾಯಸಮ್ಮತ ಅವಕಾಶವನ್ನು ಕಲ್ಪಿಸಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರದಿಂದ ಬಡ ಹಾಗೂ ಶೋಷಿತ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳ ಪ್ರತಿಭಟನೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದಿರುವುದು ಹಾಗೂ ಸೋನಂ ವಾಂಗ್ಚುಕ್ ಅವರಂತಹ ಜನಪರ ಹೋರಾಟಗಾರರನ್ನು ಹತ್ತಿಕ್ಕುವ ಪ್ರಯತ್ನ ಖಂಡನೀಯ’ ಎಂದು ಹೇಳಿದರು.

‘ನೀಟ್ ಅಕ್ರಮ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.

ಯುವ ಮುಖಂಡ ವಿರೇಶ ಕೊಂಕಲ್ ಮಾತನಾಡಿ, ‘ನೀಟ್ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚಲ್ಲಾಟವಾಡಲಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ’ ಎಂದು ಕಿಡಿಕಾರಿದರು.

‘ಮನವಿಯಲ್ಲಿ ನೀಟ್ ಅಕ್ರಮದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಹತ್ತಿಕ್ಕುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಶಾಲಾ ಆವರಣದಲ್ಲಿ ಕಲುಷಿತ ನೀರು ಸಂಗ್ರಹ; ಮೂಲ ಸೌಕರ್ಯ ಕಲ್ಪಿಸಲು ಸಮತಾ ಸೈನಿಕ ದಳ ಆಗ್ರಹ

ಪ್ರತಿಭಟನೆಯಲ್ಲಿ ದಲಿತ ಸೇನೆ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಮನೋಜ ಕುರುಕುಂದ, ಉದ್ಯಮಿ ದೇವಿಂದ್ರಪ್ಪ ಗೌಡಗೇರಾ, ಎಸ್‌ಡಿಪಿಐ ಮುಖಂಡ ಸೈಯದ್ ಇಸಾಕ್ ಖಾಲಿದ್, ಹಿರಿಯ ಮುಖಂಡರಾದ ಶಾಂತಪ್ಪ ಸಾಲಿಮನಿ, ಪುರುಷೋತ್ತಮ ಬಬಲಾದ, ತಾಲೂಕು ಅಧ್ಯಕ್ಷರಾದ ಹುಸೇನ್ ಕೊಂಗಡಿ, ಅಯ್ಯಪ್ಪ ಗೊಂದೆನೂರು, ಅಶೋಕ ಪೂಜಾರಿ, ವಿಶ್ವ ರಾಮೋಜಿ, ಹೊನ್ನಪ್ಪ ಮುನಮುಟಗಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...