ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

Date:

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಅಕ್ಟೋಬರ್‌ 17ರಿಂದ 19ರವರೆಗೆ ನಗರದ ಡಿಡಿಯು ಶಾಲೆಯಲ್ಲಿ ಮೂರು ದಿನಗಳ ವಿಶೇಷ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕನಸು ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವಾ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ದೇವಿಂದ್ರ ಹುಲಕಲ್(ಜೆ) ತಿಳಿಸಿದ್ದಾರೆ.

- Advertisement -

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಇಂಡಿಯನ್ ಸೋಷಲ್ ಇನ್‌ಸ್ಟಿಟ್ಯೂಟ್ (ಐಎಸ್‌ಐ) ಹಾಗೂ ಕನಸು ಟ್ರಸ್ಟ್, ಸರ್ವೋದಯ ಟ್ರಸ್ಟ್, ಸುಮಿತ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ಮೈರಾಡ್ ಸಂಸ್ಥೆಗಳ ಸಹಯೋಗದಲ್ಲಿ ಶಿಬಿರ ನಡೆಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಸಂವಿಧಾನದ ಪ್ರಸ್ತಾವನೆ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು, ಪ್ರಜಾಪ್ರಭುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಮಾನವ ಹಕ್ಕುಗಳು ಹಾಗೂ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಕುರಿತು ತರಬೇತಿ ನೀಡಲಾಗುವುದು. ಅಲ್ಲದೆ, ವಿಶ್ವಸಂಸ್ಥೆಯ ಸಾರ್ವತ್ರಿಕ ಮಾನವ ಹಕ್ಕುಗಳ ಘೋಷಣೆ, ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಕಾರ್ಯವೈಖರಿ ಬಗ್ಗೆಯೂ ಚರ್ಚಿಸಲಾಗುವುದು ಎಂದು ತಿಳಿಸಿದರು.

ಯುವಜನರಲ್ಲಿ ವೈಜ್ಞಾನಿಕ ಮನೋಭಾವ, ಮಾನವೀಯ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದರೊಂದಿಗೆ ತಾರತಮ್ಯದ ವಿರುದ್ಧ ಧ್ವನಿಯೆತ್ತುವ ಸಾಮರ್ಥ್ಯವನ್ನು ರೂಪಿಸುವುದು ಶಿಬಿರದ ಉದ್ದೇಶವಾಗಿದೆ ಎಂದರು.

Advertisements

20ರಿಂದ 35 ವರ್ಷದೊಳಗಿನ ಯುವಕ–ಯುವತಿಯರು ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಮೂರು ದಿನಗಳ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಆಸಕ್ತರು 7353545497, 9880373568, 9535393131 ಸಂಖ್ಯೆಗೆ ಸಂಪರ್ಕಿಸಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ಸುದ್ದಿಗೋಷ್ಠಿಯಲ್ಲಿ ಸುಮಿತ್ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಅರಬೋಳ, ಸರ್ವೋದಯ ಟ್ರಸ್ಟ್ ಅಧ್ಯಕ್ಷ ಪ್ರಭಾಕರ ಹೊಸಮನಿ, ಮನೋಜ ಕುರುಕುಂದಿ ಹಾಗೂ ಮಲ್ಲು ಅಭಿನವ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಪಶು ವೈದ್ಯರ ಖಾಲಿ ಹುದ್ದೆ ಭರ್ತಿಗೆ ರೈತಸಂಘ ಆಗ್ರಹ

ಪಶು ಇಲಾಖೆಯಲ್ಲಿ ಖಾಲಿ ಇರುವ ಪಶು ವೈದ್ಯರ ಹುದ್ದೆಗಳನ್ನು ತಕ್ಷಣ ಭರ್ತಿ...

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...