ಯಾದಗಿರಿ | ಮರಕುಂಬಿ ಪ್ರಕರಣದ ತೀರ್ಪು; ಸತ್ರ ನ್ಯಾ. ಸಿ ಚಂದ್ರಶೇಖರ್‌ರವರಿಗೆ ದಸಂಸ ಅಭಿನಂದನೆ

Date:

ಕೊಪ್ಪಳ ಜಿಲ್ಲೆಯ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸಿ ಚಂದ್ರಶೇಖರವರಿಗೆ ಈ ರಾಜ್ಯದ ಕೆಳವರ್ಗದ ಜನ ಹೃತೂರ್ವಕ ಅಭಿನಂದನೆ ಹೇಳುತ್ತ ಈ ತೀರ್ಪುನ್ನು ಸ್ವಾಗತಿಸುತ್ತೇವೆ. ಇದರ ಜತೆಗೆ ರಾಜ್ಯದ ಎಲ್ಲ ಜಿಲ್ಲಾ ಸತ್ರ ನ್ಯಾಯಾಧೀಶರೂ ಕೂಡಾ ಈ ಪ್ರಕಾರ ತೀರ್ಪು ಕೊಟ್ಟಾಗ ಮಾತ್ರ ದೇಶದಲ್ಲಿ ದಲಿತರು ನೆಮ್ಮದಿಯಿಂದ ಬದುಕುವುದಕ್ಕೆ ಸಾಧ್ಯವಾಗುತ್ತದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಮನವಿ ಮಾಡಿದರು.

- Advertisement -

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ(ಕ್ರಾಂತಿಕಾರಿ)ದಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ 2014 ಅಗಸ್ಟ್‌ 28ರಂದು ಒಂದು ಕ್ಷುಲ್ಲಕ ಕಾರಣಕ್ಕಾಗಿ ಮೇಲ್ವರ್ಗದವರು ದಲಿತ ಕೇರಿಗೆ ನುಗ್ಗಿ ಸಿಕ್ಕ ಸಿಕ್ಕ ದಲಿತರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಲ್ಲದೆ, ದಲಿತರ ಗುಡಿಸಲುಗಳಿಗೆ ಬೆಂಕಿಹಚ್ಚಿ ಅಟ್ಟಹಾಸ ಮೆರೆದಿದ್ದರು. ಈ ಹಿನ್ನೆಲೆಯಲ್ಲಿ ಗಂಗಾವತಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಘಟನೆಯ ಬಗ್ಗೆ ಆಟ್ರಾಸಿಟಿ ಮತ್ತು ಕೊಲೆಗೆ ಯತ್ನ ಮಾಡಿದ ಪ್ರಕರಣ ದಾಖಲಾಗಿತ್ತು” ಎಂದು ತಿಳಿಸಿದರು.

“ಕೊಪ್ಪಳ ಜಿಲ್ಲಾ ಸತ್ರನ್ಯಾಯಾಲಯದಲ್ಲಿ ಸುಮಾರು 10 ವರ್ಷಗಳಿಂದ ವಿಚಾರಣೆ ನಡೆಸಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಇದೇ ತಿಂಗಳು ಅಕ್ಟೋಬರ್ 21ರಂದು ತೀರ್ಪು ನೀಡಿದ್ದು, 98 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ಇನ್ನುಳಿದ 3 ಮಂದಿಯನ್ನು 5 ವರ್ಷ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆದೇಶ ಮಾಡಿರುವುದು ಬಹುಶಃ ದೇಶದಲ್ಲಿಯೇ ಪ್ರಥಮ ಬಾರಿಗೆ ಇಂತಹ ತೀರ್ಪು ಕೊಟ್ಟಿರಬಹುದು. ಮಹಾತ್ಮ ಗೌತಮ ಬುದ್ಧ, ಅಣ್ಣ ಬಸವಣ್ಣ, ಸಾಮಾಜಿಕ ಕ್ರಾಂತಿಕಾರಿ ಮತ್ತು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್‌ ಅವರ ಸಮಾನತೆಯ ಕನಸು ಮತ್ತು ಮಾಜಿ ಪ್ರಧಾನಿ ವಿ ಪಿ ಸಿಂಗ್‌ ಅವರ ಕನಸನ್ನು ನನಸಾಗಿಸಿದ ನ್ಯಾಯಾಧೀಶ ಸಿ ಚಂದ್ರಶೇಖರ ಅವರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನೆಲದ ಕಾನೂನನ್ನು ಅತ್ಯಂತ ಘನತೆ, ಗೌರವದಿಂದ ಪಾಲಿಸಿ: ನ್ಯಾಯಾಧೀಶೆ ಪ್ರಿಯಾಂಕಾ

“ಈ ದೇಶದಲ್ಲಿಯೇ ಪ್ರಥಮ ಬಾರಿಗೆ ಇಂತಹ ಕಠಿಣ ಶಿಕ್ಷೆ ವಿಧಿಸಿದ ಮಾನ್ಯರಿಗೆ ಸರ್ಕಾರ ಸೂಕ್ತ ರಕ್ಷಣೆ ಕೊಡಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾನು ಗುರಿಕಾರ, ಮಾನಪ್ಪ ಕಟ್ಟಿಮನಿ, ಚಂದ್ರಶೇಖರ ಹಸನಾಪುರ, ಬಸವರಾಜ ಶೆಳ್ಳಗಿ, ಮಾನಪ್ಪ ಶೆಳ್ಳಗಿ, ರಾಮಣ್ಣ ಶೆಳ್ಳಗಿ, ಹಣಮಂತ ದೊರೆ ಬಿಜಾಸಪುರ, ಮಹೇಶ ಯಾದಗಿರಿ, ದೇವಿಂದ್ರಪ್ಪ ಬಾದ್ಯಾಪೂರ, ರೇವಣಸಿದ್ದ ಮಾಲಹತ್ತಿ, ನಿಂಗಪ್ಪ ಕಟಗಿ ಶಹಾಪೂರ, ಮೂರ್ತಿ ಬೊಮ್ಮನಹಳ್ಳಿ, ಮುಯಪ್ಪ, ವೀರಭದ್ರಪ್ಪ ತಳಾವರಗಲಿ, ಹಣಮಂತ ಬಾಂಬೆಕರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...