ಯಾದಗಿರಿ | ಮಂಗನಿಗೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು

Date:

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾವೂರ ಗ್ರಾಮದಲ್ಲಿ ಮಂಗನಿಗೂ ಮನುಷ್ಯರಂತೆ ಅಂತ್ಯಸಂಸ್ಕಾರ ನೆರವೇರಿಸಿರುವ ಘಟನೆ ಶುಕ್ರವಾರ ನಡೆದಿದೆ.

- Advertisement -

ಗುರುವಾರ ಬೆಳಿಗ್ಗೆ ಗ್ರಾಮದ ಹೊರವಲಯದ ಆಲದ ಮರದ ಮೇಲೆ ಮೃತಪಟ್ಟಿದ್ದ ಮಂಗನ ಶವವನ್ನು ಗ್ರಾಮಸ್ಥರು ಗುರುತಿಸಿ. ಪ್ರಾರಂಭದಲ್ಲಿ ಕಾಡಿನಲ್ಲೇ ಹೂಳೋಣವೆಂದು ಕೆಲವರು ಅಭಿಪ್ರಾಯಪಟ್ಟರೂ, ಗ್ರಾಮದ ಹಿರಿಯರು ‘ಈ ಮಂಗ ನಮ್ಮ ಊರಿನ ಸರ್ವರಿಗೂ ಪರಿಚಿತ. ಪ್ರತಿದಿನ ಮನೆಮನೆಗೆ ಬಂದು ಮಕ್ಕಳ ಜೊತೆ ಆಟವಾಡುತ್ತಿತ್ತು. ಗೌರವದಿಂದ ಅಂತ್ಯಸಂಸ್ಕಾರ ಮಾಡೋಣ’ ಎಂದು ನಿರ್ಧರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನಂತರ ಗ್ರಾಮಸ್ಥರು ಸೇರಿ ಮಂಗನ ಶವವನ್ನು ಶುದ್ಧ ನೀರಿನಿಂದ ಸ್ನಾನ ಮಾಡಿಸಿ, ಹೂಮಾಲೆಗಳಿಂದ ಅಲಂಕರಿಸಿದರು. ಕೆಲವರು ತುಳಸಿ, ಚಂದನ ಮತ್ತು ಹೂವುಗಳಿಂದ ಪೂಜೆ ನೆರವೇರಿಸಿದರು. ಬಳಿಕ ಬಾಜಾ-ಬಜೆಂತ್ರಿಯ ಸದ್ದಿನ ನಡುವೆ ಮೆರವಣಿಗೆ ನಡೆಸಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಆವರಣದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.

ಮೆರವಣಿಗೆಯಲ್ಲಿ ಮಹಿಳೆಯರು, ಪುರುಷರು, ಮಕ್ಕಳು ಸೇರಿದಂತೆ ಇಡೀ ಗ್ರಾಮವೇ ಭಾಗವಹಿಸಿತು. ಮೆರವಣಿಗೆಯ ವೇಳೆ ಗ್ರಾಮದ ಕೆಲವರು ಕಣ್ಣೀರಿಟ್ಟರು ಎಂದು ಗ್ರಾಮದ ನಿವಾಸಿ ಮರಲಿಂಗ ಹಿರೇಮಠಿ ತಿಳಿಸಿದರು.

447137

ಮಂಗನಿಗೆ ಮಾನವೀಯ ರೀತಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಾವೂರ ಗ್ರಾಮಸ್ಥರು ಪ್ರಾಣಿಪ್ರೀತಿಯ ನಿಜವಾದ ಮಾದರಿ ತೋರಿದ್ದಾರೆ ಎಂದು ಜನರು ಶ್ಲಾಘಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಸಾರ್ವಜನಿಕ ಶೌಚಾಲಯ ದುರಸ್ತಿಗೆ ಆಗ್ರಹಿಸಿ ಕಾರ್ಮಿಕರ ಸಂಘದ ಮನವಿ

ಮಂಗನಿಗೆ ಗೌರವಪೂರ್ಣವಾಗಿ ವಿದಾಯ ನೀಡಿದ ಸಾವೂರ ಗ್ರಾಮಸ್ಥರ ಈ ಕ್ರಮ ಈಗ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾನವೀಯತೆ ಮತ್ತು ಸಹಾನುಭೂತಿಯ ನಿಜವಾದ ಪಾಠವಾಗಿ ಚರ್ಚೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...