ಯಾದಗಿರಿ | ಅನವಾರದಲ್ಲಿ ಜಲಜೀವನ್ ಯೋಜನೆ ವಿಫಲ: 15 ದಲಿತ ಕುಟುಂಬಗಳಿಗೆ ಹಳ್ಳವೇ ಆಶ್ರಯ

Date:

ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಡಿಗೇರ ತಾಲೂಕಿನ ಅನವಾರ ಗ್ರಾಮದಲ್ಲಿ ಜಲಜೀವನ್ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದರೂ ದಲಿತ(ಎಸ್‌ಸಿ) ಕಾಲನಿಯಲ್ಲಿ ಸುಮಾರು 15 ಕುಟುಂಬಗಳಿಗೆ ಕಳೆದ ಒಂದು ವರ್ಷದಿಂದ ಕುಡಿಯುವ ನೀರು ಲಭ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

- Advertisement -

ಕುಡಿಯುವ ನೀರು ಸಿಗದ ಕಾರಣ ಕಾಲನಿಯ ನಿವಾಸಿಗಳು ಪಕ್ಕದ ಗ್ರಾಮದ ಹಳ್ಳದಿಂದ ನೀರು ತಂದು ಕುಡಿಯುವ ದುಃಸ್ಥಿತಿ ಎದುರಾಗಿದೆ. ಮಹಿಳೆಯರು ಪ್ರತಿದಿನ ಹಳ್ಳಕ್ಕೆ ತೆರಳಿ ನೀರು ತುಂಬಿಕೊಳ್ಳುವುದು ನಿತ್ಯದ ಕಾಯಕವಾಗಿದ್ದು, ತೀವ್ರ ಪರದಾಟ ಅನುಭವಿಸುತ್ತಿದ್ದಾರೆ. ಈ ಗ್ರಾಮ ಹತ್ತಿಗೂಡೂರಿನಿಂದ ಯಾದಗಿರಿ ಜಿಲ್ಲಾ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದರೂ, ಮೂಲ ಸೌಕರ್ಯಗಳ ಕೊರತೆ ಮುಂದುವರೆದಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಕುರಿತು ಗ್ರಾಮಸ್ಥರು ಈ ದಿನ.ಕಾಮ್‌ನೊಂದಿಗೆ ಗ್ರಾಮಸ್ಥರು ಮಾತನಾಡಿ, “ಜಲಜೀವನ ಯೋಜನೆಯಲ್ಲಿ ನಮ್ಮ ಮನೆಗಳಿಗೆ ನೀರು ಬರುತ್ತಿಲ್ಲ. ಕುಡಿಯುವ ನೀರಿಗಾಗಿ ಸಂಕಷ್ಟ ಅನುಭವಿಸುತ್ತಿದ್ದೇವೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕುಡಿಯುವ ನೀರು ವ್ಯವಸ್ಥೆ ಮಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದು ದೂರಿದರು.

“ಗ್ರಾಮದಲ್ಲಿ ಜಲಜೀವನ ಯೋಜನೆಯ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಇದರಿಂದಲೇ ನೀರು ಸರಬರಾಜಾಗುತ್ತಿಲ್ಲ. ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಮತ್ತು ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಕಾಲನಿ ನಿವಾಸಿಗಳಿಗೆ ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ದಸಂಸ ಜಿಲ್ಲಾಧ್ಯಕ್ಷ ಹತ್ತಿಗೂಡೂರ ಶರಣರೆಡ್ಡಿ ಈ ದಿನ.ಕಾಮ್ ಜತೆ ಮಾತನಾಡಿ, “ಗ್ರಾಮಸ್ಥರಿಗೆ ಕುಡಿಯುವ ನೀರು ಕಲ್ಪಿಸದಿದ್ದರೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತನಾಡಿ, “ಜೆಜೆಎಮ್(ಜಲಜೀವನ ಮಿಷನ್) ಕಾಮಗಾರಿ ಅಪೂರ್ಣವಾಗಿದ್ದು, ಆರ್‌ಡಬ್ಲ್ಯೂಎಸ್ ಸೆಕ್ಷನ್ ಅಧಿಕಾರಿಗಳು ರೀ-ಎಸ್ಟಿಮೇಟ್ ಮಾಡಿ ಗ್ರಾಮ ಪಂಚಾಯಿತಿಗೆ ಹ್ಯಾಂಡವರ್ ಮಾಡಿದ ನಂತರ ಮಾತ್ರ ನಾವು ಮುಂದಿನ ಕ್ರಮ ಕೈಗೊಳ್ಳಲು ಸಾಧ್ಯ. ಈ ಸಂಬಂಧ ಆರ್‌ಡಬ್ಲ್ಯೂಎಸ್ ಅಧಿಕಾರಿಗೆ ಪತ್ರ ಬರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಆರ್‌ಡಬ್ಲ್ಯೂಎಸ್ ಕಚೇರಿಯಿಂದ ನಡೆದಿದ್ದು, ಟೆಕ್ನಿಕಲ್ ಸಮಸ್ಯೆಯಿಂದ ಕಳೆದ ಒಂದು ವರ್ಷದಿಂದ ಕಾಮಗಾರಿ ಪೆಂಡಿಂಗ್ ಇದೆ” ಎಂದು ತಿಳಿಸಿದ್ದಾರೆ.

ಆರ್‌ಡಬ್ಲ್ಯೂಎಸ್ ಸೆಕ್ಷನ್ ಅಧಿಕಾರಿ ಶರಣಪ್ಪ ಮಾತನಾಡಿ, “ಗುತ್ತಿಗೆದಾರರಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ನೊಟೀಸ್ ನೀಡಲಾಗಿದೆ. ಐಎಂಎಸ್‌ನಲ್ಲಿ ನಮೂದಾದ ಮನೆಗಳಿಗಷ್ಟೇ ಜೆಜೆಎಮ್ ಕಾರ್ಯ ನಡೆದಿದೆ. ಉಳಿದ ಮನೆಗಳು ಐಎಂಎಸ್ ಪಟ್ಟಿಯಲ್ಲಿ ಇಲ್ಲದ ಕಾರಣ ಕಾಮಗಾರಿ ಅಪೂರ್ಣವಾಗಿದೆ. ಹೆಚ್ಚುವರಿ ಅನುಮೋದನೆ ದೊರೆತ ಬಳಿಕ ಉಳಿದ ಮನೆಗಳಿಗೂ ಕಾಮಗಾರಿ ಪೂರ್ಣಗೊಳಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಈ ದಿನ.ಕಾಮ್ ತಾಲೂಕು ಅಧಿಕಾರಿ ಮಲ್ಲಿಕಾರ್ಜುನ ಸಂಗವರ್ ಅವರನ್ನು ಸಂಪರ್ಕಿಸಿದೆಯಾದರೂ ಕರೆಗೆ ಲಭ್ಯವಾಗಿಲ್ಲ.

ಒಟ್ಟಾರೆ, ಜಲಜೀವನ ಯೋಜನೆ ಜಾರಿಗೆ ಬಂದರೂ ಕಾಲನಿಯ 15 ಕುಟುಂಬಗಳು ಇನ್ನೂ ನೀರಿನ ನಿರೀಕ್ಷೆಯಲ್ಲೇ ಉಳಿದಿರುವುದು ಗ್ರಾಮೀಣ ಮೂಲಸೌಕರ್ಯಗಳ ಸ್ಥಿತಿಗತಿಯನ್ನೇ ಪ್ರಶ್ನಿಸುವಂತಾಗಿದೆ.‌

ಇದನ್ನೂ ಓದಿದ್ದೀರಾ? ಬಂಗಾಳ ಚುನಾವಣೆ | ಮುಸ್ಲಿಂ ಪ್ರಾಬಲ್ಯವಿರುವ ಟಿಎಂಸಿ ಭದ್ರಕೋಟೆಯನ್ನು ಭೇದಿಸುವುದೇ ಬಿಜೆಪಿ?

ಬಾಬಾಸಾಹೇಬ್ ಅಂಬೇಡ್ಕರ್ ನೇತೃತ್ವದಲ್ಲಿ 1927ರಂದು ದಲಿತರು ಚೌಡಾರ್‌ ಕೆರೆಯ ನೀರನ್ನು ಮುಟ್ಟುವ ಮೂಲಕ ಆರಂಭಿಸಿದ ಚಳವಳಿ ದಲಿತರ ನೀರು ಹಕ್ಕುಗಳಿಗಾಗಿ ಮುನ್ನುಗ್ಗಿದ ಮೊದಲ ಬೃಹತ್‌ ಬಂಡಾಯವಾಗಿತ್ತು. ಅಂದಿನಿಂದ ದಲಿತ ಸಮುದಾಯಕ್ಕೆ ನೀರು ಹಕ್ಕುಗಳು(water rights) ಭಾರತದಲ್ಲಿ ಮೂಲಭೂತ ಮಾನವ ಹಕ್ಕುಗಳ ಭಾಗವಾಗಿವೆ.

ʼಭಾರತೀಯ ಸಂವಿಧಾನದ ಆರ್ಟಿಕಲ್ 21(ಜೀವನದ ಹಕ್ಕು) ಅಡಿಯಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಅಗತ್ಯಗಳನ್ನು ಸರ್ಕಾರ ಒದಗಿಸಬೇಕು. ನೀರು ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದ್ದು, ತಾರತಮ್ಯವಿಲ್ಲದೆ ಎಲ್ಲರಿಗೂ ಲಭ್ಯವಾಗಬೇಕೆಂದು ಸುಪ್ರೀಂ ಕೋರ್ಟ್ ಹಲವು ತೀರ್ಪುಗಳಲ್ಲಿ ಸ್ಪಷ್ಟಪಡಿಸಿದೆ. ಆದರೂ ಗ್ರಾಮೀಣ ಭಾರತದಲ್ಲಿ ಈಗಲೂ ಶೇ.20ಕ್ಕಿಂತ ಅಧಿಕ ದಲಿತ ಕುಟುಂಬಗಳಿಗೆ ಸುರಕ್ಷಿತ ಕುಡಿಯುವ ನೀರು ಲಭ್ಯವಿಲ್ಲ. ದಲಿತ ಗ್ರಾಮಗಳಲ್ಲಿ ಶೇ.48ಕ್ಕಿಂತ ಹೆಚ್ಚು ನೀರಿನ ಮೂಲಗಳಿಗೆ ಪ್ರವೇಶ ನಿರಾಕರಣೆ ಎದುರಾಗುತ್ತದೆ.

WhatsApp Image 2026 05 02 at 12.01.27 e1777704270988
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...