ಯಾದಗಿರಿ | ಸೆ.16ರಂದು ‘ಕಲ್ಯಾಣದಲ್ಲಿ ಕ್ಷೀರ ಕ್ರಾಂತಿ’

Date:

ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರ ಸ್ಮರಣಾರ್ಥ ಜೈ ಸೀತಾರಾಮ ರೈತ ಉತ್ಪಾದಕ ಸಂಸ್ಥೆ ವತಿಯಿಂದ ಸೆ.16ರಂದು ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ‘ಕಲ್ಯಾಣದಲ್ಲಿ ಕ್ಷೀರ ಕ್ರಾಂತಿ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಮುಖರು ತಿಳಿಸಿದರು.

- Advertisement -

ನಗರದಲ್ಲಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ರೈತರ ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ ರೈತ ಉತ್ಪಾದಕ ಸಂಸ್ಥೆಯ ಮೂಲಕ ಬೃಹತ್ ಪ್ರಮಾಣದಲ್ಲಿ ಕ್ಷೀರ ಕ್ರಾಂತಿಗೆ ಮುನ್ನುಡಿ ಬರೆಯಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈಗಾಗಲೇ 300 ರೈತರು ಸಂಸ್ಥೆಯ ಸದಸ್ಯರಾಗಿದ್ದು, ಮುಂದಿನ ದಿನಗಳಲ್ಲಿ 10 ಸಾವಿರ ರೈತರನ್ನು ಸದಸ್ಯರನ್ನಾಗಿ ಮಾಡುವುದು, 20 ಸಾವಿರ ಹಸುಗಳನ್ನು ಖರೀದಿಸುವುದು ಹಾಗೂ ಪ್ರತಿದಿನ ಒಂದು ಲಕ್ಷ ಲೀಟರ್ ಹಾಲು ಸಂಗ್ರಹಿಸುವುದು ಸಂಸ್ಥೆಯ ಮಹತ್ವಾಕಾಂಕ್ಷೆಯ ಗುರಿಯಾಗಿದೆ ಎಂದು ಹೇಳಿದರು.

ಸೆ.16ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಉದ್ಘಾಟಿಸಲಿದ್ದು, ಶಾಸಕ ರಾಜಾ ವೇಣುಗೋಪಾಲ ನಾಯಕ ಅಧ್ಯಕ್ಷತೆ ವಹಿಸುವರು. ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹಾಗೂ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ಘನ ಉಪಸ್ಥಿತರಿರುವರು.

ಸಂಸದ ಜಿ. ಕುಮಾರನಾಯಕ ಅವರಿಂದ ಸಂಸ್ಥೆಯ ಲಾಂಛನ ಬಿಡುಗಡೆ ನಡೆಯಲಿದ್ದು, ಪಶುಸಂಗೋಪನಾ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ವಿಶೇಷ ಸನ್ಮಾನ ನೆರವೇರಲಿದೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ವಡಗೇರಾ ಬರಪಟ್ಟಿಗೆ ಸೇರಿಸದಿದ್ದರೆ ಸರ್ಕಾರದ ವಿರುದ್ಧ ಬೃಹತ್ ಹೋರಾಟ: ಸರ್ವ ಸಂಘಟನೆಗಳ ಒಕ್ಕೂಟ ಎಚ್ಚರಿಕೆ

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಯಲ್ಲಪ್ಪ ನಾಯಕ ಮಲ್ಲಿಭಾವಿ, ನಿರ್ದೇಶಕರಾದ ಶಿವಶರಣಪ್ಪ ಸಾಹುಕಾರ ಹೈಯಾಳ, ಕೋಟ್ರೇಶ್ ಚೌಧರಿ, ಭೀಮು ನಾಯಕ ಮಲ್ಲಿಭಾವಿ, ಮುಖಂಡರಾದ ಗೋವಿಂದಪ್ಪ ಟಣಕೆದಾರ, ರಾಘವೇಂದ್ರ ಹಸನಾಪುರ, ರಾಮಚಂದ್ರಪ್ಪ ದೊರೆ, ಚಂದ್ರಶೇಖರ ಸಾಹು, ಸಣ್ಣ ದೇವೇಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...