ಜೀವ ಬೆದರಿಕೆ ಹಾಕಿ ಮಹಿಳೆಯನ್ನು ಬೈಕ್‌ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ವೆಂಕಟೇಶ ನಗರ ತಾಂಡಾ ನಿವಾಸಿ ಶಂಕರ್ ರಾಠೋಡ್ (27) ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಆರೋಪಿ ಮಹಿಳೆಯನ್ನು ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಬಳಿಕ ಜೀವ ಬೆದರಿಕೆ ಹಾಕಿ ಬೈಕ್‌ನಲ್ಲಿ ಕರೆದೊಯ್ದು ಹೊಲವೊಂದರಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ನಿಯಂತ್ರಣ ತಪ್ಪಿದ ಬೈಕ್ ಕಲ್ಲಿಗೆ ಡಿಕ್ಕಿ; ಮೂವರು ಯುವಕರ ದಾರುಣ ಸಾವು
ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಪೊಲೀಸ್ ಠಾಣೆ ಅಧಿಕಾರಿಗಳು ಆರೋಪಿಯ ಪತ್ತೆ ಹಾಗೂ ಮುಂದಿನ ತನಿಖೆ ಕೈಗೊಂಡಿದ್ದಾರೆ.




