ಯಾದಗಿರಿ | ಮಹಿಳೆಯ ತಲೆ ಬೋಳಿಸಿ ದೌರ್ಜನ್ಯ ; ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು

Date:

ಅನೈತಿಕ ಸಂಬಂಧದ ಅಪವಾದ ಹೊರಿಸಿ ಮಹಿಳೆಯ ತಲೆ ಬೋಳಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದ್ದು, ಹನ್ನೊಂದು ಮಂದಿ ಮೇಲೆ ಪ್ರಕರಣ ದಾಖಲಾಗಿದೆ.

- Advertisement -

ಈ ಘಟನೆ ಅಕ್ಟೋಬರ್ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ 35 ವರ್ಷದ ಮಹಿಳೆ ಸಂತ್ರಸ್ತೆಯಾಗಿದ್ದು, ಆಕೆಯ ತಲೆ ಬೋಳಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಚಿತ್ರಹಿಂಸೆ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಹಿಳೆ ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿಯಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದಳು. ಆಕೆಯ ಅಳಿಯ ಅವಳನ್ನು ಕರೆದುಕೊಂಡು ಹೋಗುತ್ತಿದ್ದ. ಈ ಹಿನ್ನೆಲೆಯಲ್ಲಿ ಆತನೊಂದಿಗೆ ಅಕ್ರಮ ಸಂಬಂಧ ಇದೆ ಎಂಬ ಅನುಮಾನದಿಂದ ಸ್ಥಳೀಯರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಮಹಿಳೆಯನ್ನು ಸುಮಾರು 11 ಮಂದಿ ನೆಲಕ್ಕೆ ಒದ್ದು ಹಿಡಿದು ಕೂದಲು ಕತ್ತರಿಸಿ, ತಲೆಗೆ ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಕರ್ನಾಟಕ ಕಬ್ಬು ಬೆಳೆಗಾರರ ಸಂಘ ವತಿಯಿಂದ ರಸ್ತೆ ತಡೆದು ಬೃಹತ್ ಪ್ರತಿಭಟನೆ

ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಧಿತರು ಕಸ್ತೂರಿಬಾಯಿ ಮತ್ತು ಡಾಕಪ್ಪ. ಇನ್ನುಳಿದ 9 ಮಂದಿ ಆರೋಪಿಗಳು ವಿಜಯಕುಮಾರ್, ತಿಪ್ಪಣ್ಣ, ರಮೇಶ, ದೇವಿಭಾಯಿ, ತಿಪ್ಪಿಭಾಯಿ, ರೂಪ್ಲಿಭಾಯಿ, ಅನುಸೂಯಾ, ಚಾವಳಿಭಾಯಿ ಹಾಗೂ ತಿಪ್ಪಣ್ಣ ನಾಯ್ಡ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ.

ಪರಾರಿಯಾದವರ ಪತ್ತೆಗೆ ಕೆಂಭಾವಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಥ್ವಿಕ್ ಶಂಕರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...