ಯಾದಗಿರಿ | ಸಾಲ ಮರುಪಾವತಿಗೆ ಕೆಬಿಎಸ್ ಬ್ಯಾಂಕ್‌ ಸಿಬ್ಬಂದಿ ಕಿರುಕುಳ : ಮಹಿಳೆಯರ ಆರೋಪ

Date:

ಕೃಷ್ಣ ಭೀಮಾ ಸಮೃದ್ಧಿ ಲೋಕಲ್‌ ಏರಿಯಾ ಬ್ಯಾಂಕ್‌ ಲಿಮಿಟೆಡ್‌ (ಕೆಬಿಎಸ್) ಬ್ಯಾಂಕ್‌ ಸಿಬ್ಬಂದಿ ಸಾಲ ಮರುಪಾವತಿಸುವಂತೆ ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

- Advertisement -

ಈ ಸಂಬಂಧ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದ ಮಹಿಳೆಯರು ಯಾದಗಿರಿ ಗ್ರಾಮೀಣ ಠಾಣೆಗೆ ಮನವಿ ಸಲ್ಲಿಸಿದ್ದು, ಕೆಬಿಎಸ್ ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ʼಕೃಷಿ ಕೂಲಿ ಕಾರ್ಮಿಕರಾದ ನಾವು ಬ್ಯಾಂಕ್‌ನಿಂದ ಸಾಲ ಪಡೆದು ಮರುಪಾವತಿ ಮಾಡುತ್ತಿದ್ದೇವೆ. ಇನ್ನೂ ಒಂದಿಷ್ಟು ಸಾಲ ಬಾಕಿ ಇದೆ. ಆದರೆ ಸದ್ಯಕ್ಕೆ ಯಾವುದೇ ಕೆಲಸ ಇಲ್ಲದ ಕಾರಣ ಸಾಲ ಮರುಪಾವತಿಸಲು ಸಾಧ್ಯವಾಗುತ್ತಿಲ್ಲ. ಆದರೆ ಇದಕ್ಕೆ ಅವಕಾಶ ಕೊಡದ ಕೆಬಿಎಸ್ ಬ್ಯಾಂಕ್ ಸಿಬ್ಬಂದಿ ಪ್ರತಿದಿನ ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದಾರೆʼ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ʼಕೆಬಿಎಸ್ ಬ್ಯಾಂಕ್ ಫೈನಾನ್ಸ್ ಸಿಬ್ಬಂದಿ ಸಾಲಗಾರರ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ಬೈಯ್ದು, ಮನಸ್ಸಿಗೆ ಬೇಜಾರು ಮಾಡಿದ್ದಾರೆ. ಇದರಿಂದ ನಮ್ಮ ಜೀವಕ್ಕೆ ಏನಾದರೂ ಅನಾಹುತವಾದರೆ ಬ್ಯಾಂಕ್‌ ಸಿಬ್ಬಂದಿಯೇ ಕಾರಣರಾಗುತ್ತಾರೆ. ಕೂಡಲೇ ಬ್ಯಾಂಕ್‌ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಮೇಲೆ ಕಾನೂನು ಕ್ರಮ ಜರುಗಿಸಿ ನಮಗೆ ನ್ಯಾಯ ಒದಗಿಸಿʼ ಎಂದು ಕೋರಿದ್ದಾರೆ.

ಇದನ್ನೂ ಓದಿ : ಯಾದಗಿರಿ | ರೈತ ಹೋರಾಟಗಾರ ಚನ್ನಪ್ಪ ಆನೇಗುಂದಿ ಮೇಲೆ ದೂರು : ಪ್ರಾಂತ ರೈತ ಸಂಘ ಖಂಡನೆ

ಈ ಸಂದರ್ಭದಲ್ಲಿ ಶಾಣಮ್ಮ ಹನುಮಂತ, ನಿಂಗಮ್ಮ ನಿಂಗಪ್ಪ, ಮಲ್ಲಮ್ಮ ಚನ್ನಬಸಪ್ಪ, ಬಸಮ್ಮ ವೆಂಕಟೇಶ್, ಲಕ್ಷ್ಮೀ ರಾಮಣ್ಣ, ಪದ್ಮಾವತಿ, ಅನುಸಮ್ಮ, ನಾಗಮ್ಮ ಮಹಾದೇವಮ್ಮ , ನಾಗಮ್ಮ , ಪಾರ್ವತಿ , ನಾಗಮ್ಮ, ದೇವಿದ್ರಮ್ಮ, ಬಸಮ್ಮ ಮತ್ತಿತರರು ಇದ್ದರು.

ವರದಿ: ಸುಧೀರ್ ಕೋಟಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...

ಉಡುಪಿ | ಇಸ್ಲಾಮಿಕ್ ವೆಲ್ಫೇರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

ಇಸ್ಲಾಮಿಕ್ ವೆಲ್ಫೇರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ, ಉಡುಪಿ ಇದರ 2025-26ನೇ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಚಿಕ್ಕಬಳ್ಳಾಪುರ | ದಲಿತರ ಕೇರಿಗೆ ಹೋದರೆ ‘ನಾನು ಸಾಯ್ತೀನಿ’: ಉದ್ಧಟತನ ಮೆರೆದ ಪೂಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು...