ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕಲಬುರಗಿಯ ಸಂಸದ ರಾಧಾಕೃಷ್ಣ ದೊಡ್ಮಿನಿ ಅವರ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹಾಗೂ ಸಂಸದ ರಾಧಾಕೃಷ್ಣ ದೊಡ್ಮಿನಿ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ವೀರಾರಡ್ಡಿ ಮುನ್ನಾಳ ಕಾಂಗ್ರೆಸ್ ಸೇರಿದರು.
ವೀರಾರಡ್ಡಿ ಮುನ್ನಾಳ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಸಂಸದ ರಾಧಾಕೃಷ್ಣ ದೊಡ್ಮಿನಿ ಮಾತನಾಡಿ, ಮಾಜಿ ಶಾಸಕ ದಿವಂಗತ ಡಾ. ವೀರಬಸವಂತರಡ್ಡಿ ಮುನ್ನಾಳ ಅವರ ಅಳಿಯರಾದ ವೀರಾರಡ್ಡಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಗುರುಮಿಠಕಲ್, ಯಾದಗಿರಿ ಮತಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಘಟನೆಗೆ ಮತ್ತಷ್ಟು ಬಲ ನೀಡಲಿದೆ. ಅವರ ಸೇರ್ಪಡೆಯಿಂದ ಪಕ್ಷದ ಕಾರ್ಯಕರ್ತರಿಗೆ ಹೊಸ ಉತ್ಸಾಹ ದೊರೆಯಲಿದ್ದು, ಸಂಘಟನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕಟ್ಟಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು
This video cannot be played in your browser. Open the video directly
ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ರಾಜ್ಯ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಪಾಟೀಲ್ ಅನಪೂರ, ಕೆಪಿಸಿಸಿ ಸದಸ್ಯ ಶರಣಪ್ಪ ಮಾನೇಗಾರ, ಗುರುಮಿಠಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಚಪೇಟ್ಲಾ, ಮುಖಂಡರಾದ ಸಾಯಿಬಣ್ಣ ಬೋರಬಂಡ, ಬಾಲಪ್ಪ ನೀರಟ್ಟಿ, ಬಸವರಾಜ ದಳಪತಿ, ಕಾಶಪ್ಪ ಚಿನ್ನಾಕಾರ, ಶರಣಪ್ಪ ಮೋಟ್ನಳ್ಳಿ, ಅಮೀರ್ ಅಲಿ ಸಾಹುಕಾರ, ಗುಂಡಪ್ಪ ಇಟಕಾಲ್, ಶಿವಾನಂದ ದೇವರಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.





