ಯಾದಗಿರಿ | ನೀಟ್ ಅಕ್ರಮ ಖಂಡಿಸಿ, ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಆಗ್ರಹಿ ಭೀಮ್ ಸೇನೆ ಮನವಿ

Date:

ನೀಟ್ ಅಕ್ರಮ ಪ್ರಕರಣ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕರ್ನಾಟಕ ಭೀಮ್ ಸೇನೆ (ರಿ) ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಜಿಲ್ಲಾ ಅಧ್ಯಕ್ಷ ರಮೇಶಕುಮಾರ ಗೌಡೂರು, ‘ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯ ಪೇಪರ್ ಸೋರಿಕೆ ಪ್ರಕರಣವು ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದರು. ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಹೋರಾಟಗಾರರ ಮೇಲೆ ನಡೆದಿರುವ ಲಾಠಿಚಾರ್ಜ್ ಹಾಗೂ ಆಶ್ರುವಾಯು ಪ್ರಯೋಗವನ್ನು ತೀವ್ರವಾಗಿ’ ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

‘ನೀಟ್ ಪೇಪರ್ ಸೋರಿಕೆ ಪ್ರಕರಣದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹5 ಕೋಟಿ ಪರಿಹಾರ ನೀಡಬೇಕು ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು. ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.

‘ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಹಾಗೂ ಸಮಯಬದ್ಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪ್ರತಿಭಟನಾನಿರತ ವಿದ್ಯಾರ್ಥಿಗಳು ಮತ್ತು ಹೋರಾಟಗಾರರ ಮೇಲೆ ಲಾಠಿಚಾರ್ಜ್ ಹಾಗೂ ಆಶ್ರುವಾಯು ಪ್ರಯೋಗಕ್ಕೆ ಆದೇಶ ನೀಡಿದ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆಯಾಗದಂತೆ ಪಾರದರ್ಶಕ, ಸುರಕ್ಷಿತ ಹಾಗೂ ಜವಾಬ್ದಾರಿಯುತ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ: ಸಾವು-ಬದುಕಿನ ಮಧ್ಯೆ ಹೋರಾಟ

ಈ ಸಂದರ್ಭದಲ್ಲಿ ಮರಲಿಂಗಪ್ಪ ಹಳ್ಳಿ, ವಾಸುದೇವ, ಮಾಳಪ್ಪ ಸೇರಿದಂತೆ ಕರ್ನಾಟಕ ಭೀಮ್ ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...