ಯಾದಗಿರಿ | ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮುಂದಾಗಬೇಕು : ಬಾಬು ಬಾಲಸಿಂಗ್

Date:

ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ (ಚೆನ್ನೈ)ಯ ಲೆಕ್ಕಾಧಿಕಾರಿ ಬಾಬು ಬಾಲಸಿಂಗ್ ಹೇಳಿದ್ದಾರೆ.

- Advertisement -

ಶಹಾಪುರ ತಾಲೂಕಿನ ಶಾರದಹಳ್ಳಿಯ ಪರಿಹಾರ ಭೋದನ ಕೇಂದ್ರದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ ಬುಧವಾರ ಮಕ್ಕಳ ರಕ್ಷಣೆಯ ಜಾಗೃತಿ ಕಾರ್ಯಕ್ರಮ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಾಬು ಬಾಲಸಿಂಗ್, “ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು ಕೇವಲ ಸಂಸ್ಥೆಗಳ ಹೊಣೆಗಾರಿಕೆ ಅಲ್ಲ, ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿ” ಎಂದು ಹೇಳಿದರು.

1002408283

ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣೆಯ ಕುರಿತು ಹಾಡುಗಳು, ಕಥೆಗಳು ಹಾಗೂ ಕಿರು ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಯಿತು. ಜೊತೆಗೆ ಮಕ್ಕಳ ಮೇಲಿನ ದೌರ್ಜನ್ಯ ಕುರಿತ ಕಿರುಚಿತ್ರವನ್ನೂ ಪ್ರದರ್ಶಿಸಲಾಯಿತು.

ವರ್ಲ್ಡ್ ವಿಷನ್ ಇಂಡಿಯಾ ನಿರ್ವಹಣಾಧಿಕಾರಿ ಅನಿಲ್ ತೇಜಪ್ಪ ಬಲ್ಲೂರ್, ಸಂಸ್ಥೆಯ ಮಕ್ಕಳ ರಕ್ಷಣೆಗೆ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಬಾಬು ಬಾಲಸಿಂಗ್ ಅವರು ಸಹಾಯ ಪಡೆಯುತ್ತಿರುವ ಮಕ್ಕಳ ಮನೆಗಳನ್ನು ಭೇಟಿ ಮಾಡಿ, ಅವರ ಕಲಿಕೆಯ ಸ್ಥಿತಿಯನ್ನು ಪರಿಶೀಲಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಿದ್ದಪ್ಪ ಪೂಜಾರಿ, ಗ್ರಾಮಪಂಚಾಯತ್ ಸದಸ್ಯ ಸಂತೋಷ್ ವಿಶ್ವಕರ್ಮ, ಶಂಕರಾಚಾರ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು, ಶಿಕ್ಷಕಿ ಚೈತ್ರ, ಸ್ವಯಂಸೇವಕರು ಮೇನಕ ಚೌಹಾಣ್, ಶಿವು, ಶಿವಲೀಲಾ, ಶಂಕರ ಹಾಗೂ ಗ್ರಾಮದ ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಸುಂದರವರು ನಿರೂಪಿಸಿದರು, ಮಾರ್ಟಿನ್ ಶಾಂತಕುಮಾರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...