ಯಾದಗಿರಿ | ನೀಟ್ ಅಕ್ರಮ ಖಂಡಿಸಿ ಪ್ರತಿಭಟನೆ; ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದಸಂಸ ಆಗ್ರಹ

Date:

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್‌ಚುಕ್ ಅವರೊಂದಿಗೆ ನಡೆದುಕೊಂಡ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ), ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ಸುರಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಡಾ. ಬಾಬಾಸಾಹೇಬ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗಾಂಧಿ ವೃತ್ತದಲ್ಲಿ ಸಮಾವೇಶಗೊಂಡಿತು. ಬಳಿಕ ತಹಸೀಲ್ದಾರರ ಮುಖಾಂತರ ರಾಷ್ಟ್ರಪತಿಗಳಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದರು. ಪರೀಕ್ಷೆ ರದ್ದಾದ ಬಳಿಕ ಉಂಟಾದ ಮಾನಸಿಕ ಒತ್ತಡದಿಂದ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿ, ಈ ಘಟನೆಯ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು’ ಎಂದು ಹೇಳಿದರು.

2483904

‘ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಅಮರಣಾಂತ ಉಪವಾಸ ನಡೆಸುತ್ತಿದ್ದ ಶಿಕ್ಷಣ ತಜ್ಞ ಸೋನಂ ವಾಂಗ್‌ಚುಕ್ ಅವರ ವಿರುದ್ಧ ಕೇಂದ್ರ ಸರ್ಕಾರ ಅನುಸರಿಸಿದ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಹಾಗೂ ಲಾಠಿಚಾರ್ಜ್ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಅಲ್ಲದೆ, ‘ನೀಟ್ ಪರೀಕ್ಷೆ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ನಡೆಯದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ನೀಟ್ ಹಗರಣ ಖಂಡಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಈ ಸಂದರ್ಭದಲ್ಲಿ ವಿಭಾಗೀಯ ಸಂಚಾಲಕ ಮಾನಪ್ಪ ಕಟ್ಟಿಮನಿ, ಜಿಲ್ಲಾ ಮುಖಂಡ ಮಾನು ಗುರಿಕಾರ, ಎಐಟಿಯುಸಿ ಜಿಲ್ಲಾ ಅಧ್ಯಕ್ಷ ದೇವೇಂದ್ರಪ್ಪ ಪತ್ತಾರ, ಜಿಲ್ಲಾ ಸಂಚಾಲಕ ಉತ್ತಮ್ ಬಿ. ಕೃಷ್ಣಪ್ಪ (ಸ್ವಾಭಿಮಾನಿ ಬಣ), ವಿಭಾಗೀಯ ಸಂಚಾಲಕ ಮಲ್ಲು ಬಿಲ್ಲವ್, ಜಿಲ್ಲಾ ಸಂಚಾಲಕ ನಿಂಗಣ್ಣ ಗೋನಾಲ, ಮಾಜಿ ಪುರಸಭೆ ಅಧ್ಯಕ್ಷ ಚಂದ್ರಶೇಖರ ಹಸನಾಪೂರ, ಮಹಾದೇವಪ್ಪ ಬಿಜಾಸಪೂರ, ನ್ಯಾಯವಾದಿ ಮಲ್ಲಿಕಾರ್ಜುನ ತಳ್ಳಳ್ಳಿ, ಶರಣಪ್ಪ ವಾಗಣಗೇರಾ, ಅಜೀಜ್ ಸಾಬ್ ಐಕೂರು, ಚಂದ್ರಶೇಖರ ಕಟ್ಟಿಮನಿ, ಸಿದ್ದಪ್ಪ ಸುರಪುರಕರ್, ಮಲ್ಲಯ್ಯ ಕಮತಗಿ, ರಾಮಚಂದ್ರ ಮಗಣಗೇರಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...