ಸಾಲಬಾಧೆ ತಾಳಲಾರದೆ ವಿಷ ಕುಡಿದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮದಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆ ಸುರುಪುರ ತಾಲ್ಲೂಕು ಯಾಳಗಿ ಗ್ರಾಮದ ಸಿದ್ದಣ್ಣ ಹಡಪದ ( 56) ಮೃತ ರೈತ ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಸಿದ್ದಪ್ಪ ಅವರು 5 ಲಕ್ಷಕ್ಕೂ ಅಧಿಕ ಸಾಲ ಮಾಡಿ ನಾಲ್ಕು ಎಕರೆ ಜಮೀನಿನಲ್ಲಿ ಸಾಲಮಾಡಿ ತೊಗರಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಅತಿವೃಷ್ಟಿ ಮಳೆಯಿಂದಾಗಿ ಸಂಪೂರ್ಣ ಬೆಳೆ ಹಾನಿಯಾದ ಕಾರಣ ಸಾಲ ತೀರಿಸಲು ಸಾಧ್ಯವಾಗದೆ, ಮನನೊಂದು ಬೆಳೆಗಳಿಗೆ ಸಿಂಪಡಿಸುವ ಕೀಟನಾಶಕ ಔಷಧಿ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನ ಭೂಮಿಯಿಲ್ಲದೇ ಅಂತ್ಯಸಂಸ್ಕಾರಕ್ಕೆ ಸಂಕಟ
ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.