ಯಾದಗಿರಿ | ಪ್ರಜಾಸೌಧ ನಿರ್ಮಾಣ ಪ್ರಸ್ತಾವನೆ ಈ ಕೂಡಲೇ ಕೈ ಬಿಡಬೇಕು ; ವಿಶ್ವ ನಾಟೇಕಾರ್

Date:

‘ಶಹಾಪುರ ಪಟ್ಟಣದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪ್ರಜಾಸೌಧ ನಿರ್ಮಿಸಲು ಪ್ರಸ್ತಾವನೆ ಇದ್ದು, ಈ ನಿರ್ಣಾಯ ಈ ಕೂಡಲೇ ಕೈ ಬಿಡಬೇಕು’ ಎಂದು ದಸಂಸ ಮುಖಂಡ ವಿಶ್ವ ನಾಟೇಕಾರ್ ಆಗ್ರಹಿಸಿದ್ದಾರೆ.

- Advertisement -

‘ಈ ಕುರಿತು ದಸಂಸ ಭೀಮವಾದ ಜಿಲ್ಲಾಧ್ಯಕ್ಷ ವಿಶ್ವ ನಾಟೇಕಾರ್ ಪತಿಕಾ ಪ್ರಕಟಣೆ ಹೋರಡಿಸಿದ ಅವರು, ‘ರಾಜ್ಯದಲ್ಲೇ ಅತಿ ವಿಶಾಲ ಭೂವಿಸ್ತೀರ್ಣ ಹೊಂದಿರುವ ಈ ಕಾಲೇಜಿನಲ್ಲಿ ಪ್ರತಿವರ್ಷ 2000 ದಿಂದ 2500 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇಂತಹ ಮಹತ್ವದ ಶೈಕ್ಷಣಿಕ ಆವರಣವನ್ನು ಆಡಳಿತಾತ್ಮಕ ಕಟ್ಟಡ ನಿರ್ಮಾಣಕ್ಕೆ ಆಯ್ಕೆ ಮಾಡಿರುವುದು ಶಿಕ್ಷಣ ವಿರೋಧಿ ಕ್ರಮವಾಗಿದೆ’ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

‘ಪ್ರಜಾಸೌಧ ನಿರ್ಮಾಣವಾದಲ್ಲಿ ವಿದ್ಯಾರ್ಥಿಗಳ ಶಾಂತ ಅಧ್ಯಯನ ವಾತಾವರಣಕ್ಕೆ ಗಂಭೀರ ಧಕ್ಕೆ ಉಂಟಾಗುವುದರ ಜೊತೆಗೆ, ಬಡ ರೈತ ಮತ್ತು ಕಾರ್ಮಿಕ ಕುಟುಂಬಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಅಪಾಯವಿದೆ ಎಂದು ಅವರು ಎಚ್ಚರಿಸಿದರು. ಕಾಲೇಜು ಆವರಣವು ಸಂಪೂರ್ಣವಾಗಿ ಶೈಕ್ಷಣಿಕ ಉದ್ದೇಶಕ್ಕಾಗಿ ಮೀಸಲಾಗಿದ್ದು, ಇಲ್ಲಿ ಸರ್ಕಾರಿ ಕಚೇರಿ ಅಥವಾ ಇತರೆ ಆಡಳಿತಾತ್ಮಕ ಕಟ್ಟಡಗಳನ್ನು ನಿರ್ಮಿಸುವುದರಿಂದ ಭವಿಷ್ಯದಲ್ಲಿ ಕಾಲೇಜಿನ ವಿಸ್ತರಣೆಗೆ ತೀವ್ರ ಅಡ್ಡಿಯಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಈ ಭೂಮಿಯಲ್ಲಿ ಈಗಾಗಲೇ ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ಗ್ರಂಥಾಲಯ, ಕ್ರೀಡಾಂಗಣ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಜಾಗದ ಅವಶ್ಯಕತೆ ಇದೆ. ಇಂತಹ ಸಂದರ್ಭದಲ್ಲಿ ಶೈಕ್ಷಣಿಕ ಸಂಸ್ಥೆಯ ಆವರಣವನ್ನು ಬೇರೆ ಉದ್ದೇಶಕ್ಕೆ ಬಳಸುವುದು ಶಿಕ್ಷಣದ ಮೇಲೆ ದಾಳಿ ಮಾಡುವುದಕ್ಕೆ ಸಮಾನವಾಗಿದೆ’ ಎಂದು ಅವರು ಆರೋಪಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

‘ಈ ವಿಷಯದಲ್ಲಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿದ ಅವರು, ಕಾಲೇಜು ಆವರಣದಲ್ಲಿ ಪ್ರಜಾಸೌಧ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ತಕ್ಷಣವೇ ರದ್ದುಗೊಳಿಸಿ, ಶೈಕ್ಷಣಿಕ ಉದ್ದೇಶಕ್ಕೆ ಮೀಸಲಾದ ಭೂಮಿಯನ್ನು ಕೇವಲ ಶಿಕ್ಷಣಾಭಿವೃದ್ಧಿಗೆ ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಆದೇಶ ನೀಡಬೇಕು’ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...