ಯಾದಗಿರಿ | ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಹುಳುಗಳು ಪತ್ತೆ

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಹುಳುಗಳು ಕಂಡುಬಂದಿರುವುದನ್ನು ಖಂಡಿಸಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಅಧಿಕಾರಿ ಶಾರದಾದೇವಿ ಅವರನ್ನು ಅಮಾನತು ಮಾಡುವಂತೆ ಸರ್ ಎಂ ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಸಿದರು.

- Advertisement -

ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಅಧ್ಯಕ್ಷ ಪ್ರದೀಪ್ ಅಣಬಿ ಮಾತನಾಡಿ, “ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಶಹಾಪುರ ನಗರದ ಕನ್ಯಾಕೋಳೂರು ರೋಡ, ಶಿವನ ದೇವಸ್ಥಾನದ ಹತ್ತಿರ ಇರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ವಸತಿ ನಿಲಯವು ಸಂಪೂರ್ಣ ಅಧೋಗತಿಗೆ ಬಂದು ನಿಂತಿದೆ. ಇದು ಕೇವಲ ಹೆಸರಿಗೆ ಮಾತ್ರ ವಿದ್ಯಾರ್ಥಿಗಳ ವಸತಿ ನಿಲಯವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಊಟದಲ್ಲಿ ದೊಡ್ಡ ದೊಡ್ಡ ಹುಳುಗಳು ಕಂಡುಬಂದಿದ್ದು, ವಾರ್ಡನ್ ಅವರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಒಂದು ದಿನದ ಸಮಸ್ಯೆಯಲ್ಲ. ಹಲವಾರು ದಿನಗಳಿಂದ ಇದೇ ರೀತಿ ಕಂಡುಬರುತ್ತಿರುವ ಬಗ್ಗೆ ವಿದ್ಯಾರ್ಥಿಗಳು ನಮ್ಮ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಹೀಗಾದರೆ ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗಿ ಜೀವಕ್ಕೆ ತೊಂದರೆ ಉಂಟಾದರೆ ಯಾರು ಹೊಣೆ” ಎಂದು ಪ್ರಶ್ನಿಸಿದರು.

“ಇಲ್ಲಿ ಅನೇಕ ಮೂಲ ಸೌಲಭ್ಯಗಳು ಇಲ್ಲದ ಕಾರಣ ವಿದ್ಯಾಭ್ಯಾಸಕ್ಕೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ. ಕಾಲೇಜು ಮುಗಿದ ಬಳಿಕ ವಿದ್ಯಾಭ್ಯಾಸಕ್ಕೆ ಯೋಗ್ಯ ಸ್ಥಳವೆಂದರೆ ವಿದ್ಯಾರ್ಥಿ ವಸತಿನಿಲಯ. ಆದರೆ, ಸದರಿ ವಿದ್ಯಾರ್ಥಿ ವಸತಿನಿಲಯದ ಅವ್ಯವಸ್ಥೆಗಳ ಬಗ್ಗೆ ಸದರಿ ವಿದ್ಯಾರ್ಥಿಗಳು ಲಿಖಿತವಾಗಿ ತಿಳಿಸಿದ್ದಾರೆ. ಉಲ್ಲೇಖದಲ್ಲಿ ತಿಳಿಸಿದಂತೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರಿಗೂ ದೂರು ಸಲ್ಲಿಸಲಾಗಿತ್ತು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

“ಬಡ ವಿದ್ಯಾರ್ಥಿಗಳ ಜೀವದ ಜತೆಗೆ ಚೆಲ್ಲಾಟ ಆಡುತ್ತಿರುವ ತಾಲೂಕು ಅಧಿಕಾರಿ ಶಾರದಾದೇವಿ ಅವರನ್ನು ಕೂಡಲೇ ಅಮಾನತುಗೊಳಿಸಿ, ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಮೂಲಸೌಕರ್ಯ ಹಾಗೂ ಕಲಿಕಾ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೆರೆ ಹಾಗೂ ಚೆಕ್ ಡ್ಯಾಮ್‌ಗಳಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ ವಿರುದ್ಧ ರೈತ ರೇವಣ್ಣ ಉಪವಾಸ ಸತ್ಯಾಗ್ರಹ

ಈ ಸಂದರ್ಭದಲ್ಲಿ ಶರಣು ದೋರನಹಳ್ಳಿ, ಅಂಬ್ರೇಶ ಶಿರವಾಳ, ಭೋಜಪ್ಪ ಮುಂಡಾಸ, ವಿದ್ಯಾರ್ಥಿಗಳಾದ ಜಗದೀಶ, ಹೊನ್ನಯ್ಯ, ದಾವಲಸಾಬ, ನವಾಜ, ಅಬ್ದುಲ್, ರಫೀಕ್, ಉಸ್ಮಾನ್, ದೇವರಾಜ, ದಾವೂದ, ಬಿಲಾಲ, ಆಕಾಶ, ಸಾಬಣ್ಣ ಸೇರಿದಂತೆ ಬಹುತೇಕ ಮಂದಿ ಹಾಸ್ಟೆಲ್ ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಲಾ ಜಾತ್ರೆ ಯಶಸ್ವಿ: ಕಲಾವಿದರಿಗೆ ಶಾಶ್ವತ ಕಲಾ ಕೇಂದ್ರ ಸ್ಥಾಪಿಸಲು ಅರುಣ್ ಯೋಗಿರಾಜ್ ಸಲಹೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲಕಲೆ ಹಾಗೂ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...