₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

Date:

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ ಪಡೆದ ಆರೋಪದಡಿ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ (ಯುಡಾ) ಸದಸ್ಯ ಕಾರ್ಯದರ್ಶಿ ಶರಣಪ್ಪ ಹಾಗೂ ಅವರ ಕಾರು ಚಾಲಕ ಸಂತೋಷ ಕುಮಾರ ಅವರನ್ನು ರಾಯಚೂರು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

- Advertisement -

ರಾಯಚೂರು ಜಿಲ್ಲೆಯ ಮಾನ್ವಿ ನಿವಾಸಿ ಸುಧಾಕರ್ ವೀರಭದ್ರರಾವ್ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಮಾನ್ವಿ ನಗರ ಯೋಜನಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿರುವ ಶರಣಪ್ಪ ಅವರು, ಸುಧಾಕರ್ ಅವರ ಎನ್‌ಎ ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಯಾದಗಿರಿಯ ಯುಡಾ ಕಚೇರಿಯಲ್ಲಿ ₹3 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶರಣಪ್ಪ ಹಾಗೂ ಕಾರು ಚಾಲಕ ಸಂತೋಷ ಕುಮಾರ ಅವರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ರಾಯಚೂರು ಲೋಕಾಯುಕ್ತ ಡಿವೈಎಸ್‌ಪಿ ಶಿವಾನಂದ ಪವಡಶೆಟ್ಟಿ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ರವಿ ಪುರುಷೋತ್ತಮ್ ನೇತೃತ್ವದ ತಂಡ ದಾಳಿ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...