ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

Date:

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯ್ದೆಯಡಿ ಅಗತ್ಯ ನೋಂದಣಿ ಮಾಡಿಸಿಕೊಳ್ಳದೆ ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಎಂಟು ಕ್ಲಿನಿಕ್‌ಗಳನ್ನು ಬಂದ್ ಮಾಡಿಸಲಾಗಿದೆ. ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

- Advertisement -

ಕಳೆದ ಒಂದು ವಾರದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳನ್ನು ಒಳಗೊಂಡ ತಂಡವು ಜಿಲ್ಲೆಯ ವಿವಿಧೆಡೆ ಪರಿಶೀಲನೆ ನಡೆಸಿದೆ. ಈ ಸಂದರ್ಭದಲ್ಲಿ ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಎಂಟು ಖಾಸಗಿ ಕ್ಲಿನಿಕ್‌ಗಳನ್ನು ಬಂದ್ ಮಾಡಿಸಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಅವುಗಳ ವಿವರಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕೊಯಿಲೂರಿನ ಶಿಫಾ ನ್ಯಾಚುರೋ ಕ್ಲಿನಿಕ್, ರಾಮಸಮುದ್ರದ ಸತೀಶ್, ಕೃಷ್ಣ ಹಾಗೂ ಸಂಜೀವ ಬೋಸೆ ಅವರಿಗೆ ಸಂಬಂಧಿಸಿದ ಕ್ಲಿನಿಕ್‌ಗಳು, ಕೊಳ್ಳೂರು ಎಂ. ಗ್ರಾಮದ ಶರಣಬಸವ ಜಾಂಬವ, ಹುರುಸಗುಂಡಗಿಯ ಮಹಾದೇವಪ್ಪ, ಟೋಕಾಪುರದ ಭೀಮಣ್ಣ ಬಳಚಟ್ಟಿ ಹಾಗೂ ಮಶಾಕ ನೂರಿ ಅವರಿಗೆ ಸಂಬಂಧಿಸಿದ ಕ್ಲಿನಿಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ವೈದ್ಯಕೀಯ ಪದವಿ ಹಾಗೂ ಅಗತ್ಯ ನೋಂದಣಿ ಇಲ್ಲದೆ ವೈದ್ಯಕೀಯ ವೃತ್ತಿ ನಡೆಸುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ಕೆಪಿಎಂಇ ಕಾಯ್ದೆಯಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಯಮ ಉಲ್ಲಂಘಿಸುವವರಿಗೆ ಕಾನೂನಿನ ಅನ್ವಯ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ತುಕಾರಾಮ್ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಶೋಷಿತರಿಗೆ ಶರಣರ ಮಾನವೀಯ ಮೌಲ್ಯ ತಲುಪಿಸುವ ಗುರಿ : ಪ್ರಭುದೇವ ಸ್ವಾಮೀಜಿ

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಅನಧಿಕೃತ ವೈದ್ಯಕೀಯ ವೃತ್ತಿ ನಡೆಸುವವರ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ. ಸಾರ್ವಜನಿಕರು ಇಂತಹ ವ್ಯಕ್ತಿಗಳ ಬಳಿ ಚಿಕಿತ್ಸೆ ಪಡೆಯದೆ, ವೈದ್ಯರ ಅರ್ಹತೆ ಹಾಗೂ ಕ್ಲಿನಿಕ್‌ನ ನೋಂದಣಿ ಕುರಿತು ಪರಿಶೀಲಿಸಿ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...