ಯಾದಗಿರಿ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಭೀಮ ಆರ್ಮಿ ಒತ್ತಾಯ

Date:

Advertisements

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಮತ್ತು ಸೇವೆ ಕಾಯಂಗೊಳಿಸುವಂತೆ ಭೀಮ ಆರ್ಮಿ ಏಕತಾ ಮಿಷನ್‌ ಒತ್ತಾಯಿಸಿದೆ.

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

“ರಾಜ್ಯದ 430 ಕಾಲೇಜುಗಳಲ್ಲಿ ಕಳೆದ 20 ವರ್ಷಗಳಿಂದ ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಅವರಿಗೆ ಸೇವಾ ಭದ್ರತೆ ಒದಗಿಸದಿರುವುದು ಬೇಸರದ ಸಂಗತಿ. ಇದರಿಂದ ಹಲವರು ಹತಾಶೆಗೆ ಒಳಗಾಗಿ ಜೀವ ಕಳೆದುಕೊಂಡಿದ್ದಾರೆ. ಅವರ ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ. ಮಕ್ಕಳಿಗೆ ಜ್ಞಾನಾರ್ಜನೆ ಮಾಡುವ ಶಿಕ್ಷಕರ ಬದುಕೇ ಇಂದು ಅತಂತ್ರವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ಅತಿಥಿ ಉಪನ್ಯಾಸಕರು ಕಳೆದ ನ.23 ರಿಂದ ರಾಜ್ಯಾದಂತ ತರಗತಿಗಳು ಬಹಿಷ್ಕರಿಸಿ ಮುಷ್ಕರ ಕೈಗೊಂಡ ಪರಿಣಾಮ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದ್ದು ವಿದ್ಯಾರ್ಥಿಗಳಿಗೆ ಆತಂಕ ಕಾಡುತ್ತಿದೆ. ಕಾಂಗ್ರೇಸ್‌ ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೇಸ್‌ ನೇತ್ರತ್ವದ ಸರ್ಕಾರ ಬಂದಿದೆ. ಕೊಟ್ಟ ಮಾತಿನಂತೆ ಕಾಂಗ್ರೇಸ್‌ ನೇತ್ರತ್ವದ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

“ಶಹಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ 3 ತಿಂಗಳಿಂದ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶಪಾಲರಿಗೆ ಮೌಖಿಕವಾಗಿ ಎಷ್ಟೇ ಕೇಳಿದರರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕರ್ನಾಟಕದವರು ಗುಲಾಮರಲ್ಲ, ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ : ಯತ್ನಾಳ್ ಕಿಡಿ

ಪ್ರತಿಭಟನೆಯಲ್ಲಿ ಭೀಮ ಆರ್ಮಿ ಸಂಘಟನೆ ತಾಲೂಕು ಅಧ್ಯಕ್ಷ ಶರಣ್ ಎಸ್ ಗೊಂದನವರ್, ವಿಧ್ಯಾರ್ಥಿ ಘಟಕ ಅಧ್ಯಕ್ಷ ಮಂಜು ದೊರನಹಳ್ಳಿ ಸೇರಿದಂತೆ ಪ್ರಮುಖರಾದ ಬಾಬು ಹೋತಪೇಠ, ದೇವು ದೊರನಹಳ್ಳಿ, ಗಿರೀಶ್, ಸಿದ್ದು ಬುಕ್ಕಲ್, ಮಂಜು ಹಳಿಸಗರ್, ಶಿವುಮಾಳು, ಚಂದು, ಮೌಲಾಲಿ ಹಾಗೂ ವಿಧ್ಯಾರ್ಥಿಗಳಾದ ಮಂಜುಳಾ, ಅಕ್ಷಯ, ಅಮಾತೆಪ್ಪ, ನಾಗರಾಜ್, ಚೈತ್ರ, ಅಪೂರ್ವ, ಮಾರುತಿ, ಅಮೋಘ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X