ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಯಾದಗಿರಿಯಲ್ಲಿ ಅಮಾನವೀಯ ಘಟನೆ

Date:

ಗ್ರಾಮದ ಹನುಮಾನ ದೇವಸ್ಥಾನದ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದಕ್ಕೆ ಆಕ್ಷೇಪಿಸಿ, ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಗುರುಮಠಕಲ್ ತಾಲೂಕಿನ ಯಂಪಾಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಈಗ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಎಂ.ಟಿ.ಪಳ್ಳಿ ಗ್ರಾಮದ ಪೋಷಪ್ಪ ಮತ್ತು ಅನಂತಮ್ಮ ದಂಪತಿಗಳು ತಮ್ಮ ಪುತ್ರ ಮಹಾಂತೇಶನ ‘ಕೂದಲು ತೆಗೆಯುವ ಶಾಸ್ತ್ರ’ಕ್ಕಾಗಿ ಯಂಪಾಡ ಗ್ರಾಮದ ಹನುಮಾನ ದೇವಸ್ಥಾನಕ್ಕೆ ಬಂದಿದ್ದರು. ಈ ಕಾರ್ಯಕ್ರಮಕ್ಕೆ ಬಂದಿದ್ದ ಗಾಜರಕೋಟ ಗ್ರಾಮದ ಅನಿಲ್‌ಕುಮಾರ ಬೇನಳ್ಳಿ ಅವರು ದೇವಸ್ಥಾನದ ಮುಂದಿನ ಕಟ್ಟೆಯ ಮೇಲೆ ಕುಳಿತಿದ್ದರು. ಅವರು ಅಲ್ಲಿ ಕುಳಿತುಕೊಳ್ಳದಂತೆ ಯಂಪಾಡ ಗ್ರಾಮದ ಪ್ರಬಲ ಜಾತಿಯವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ, ‘ಜಾತಿ ಹೆಸರಿನಲ್ಲಿ ಭೇದಭಾವ ಮಾಡಬಾರದು’ ಎಂದು ಅನಿಲ್‌ಕುಮಾರ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ, ಕುಪಿತಗೊಂಡ ಗುಂಪು ಏಕಾಏಕಿ ಅನಿಲ್‌ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಆವರಣದಲ್ಲಿದ್ದ ಬಡಿಗೆ ಮತ್ತು ಪ್ಲಾಸ್ಟಿಕ್ ಪೈಪ್‌ಗಳಿಂದ ಅನಿಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಲೇಖನ ಓದಿದ್ದೀರಾ?: ಇರಾನ್‌-ಕತಾರ್‌ ಅನಿಲ ಘಟಕಗಳಿಗೆ ಹತ್ತಿದ ಕಿಚ್ಚು: ಭಾರತಕ್ಕೂ ತಟ್ಟಲಿದೆಯಾ ಬಿಸಿ?

ಹಲ್ಲೆಯಿಂದಾಗಿ ಅನಿಲ್‌ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಅನಿಲ್ ಅವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅವರ ದೂರಿನ ಆಧಾರದ ಮೇಲೆ ಯಂಪಾಡ ಗ್ರಾಮದ ಲಕ್ಷ್ಮಣ ಕಾಳಪ್ಪ, ಅನಂತಪ್ಪ ಹಣಮಂತ ಹಾಗೂ ರಮೇಶ ಸಾಬಣ್ಣ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

“ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ತನಿಖೆ ನಡೆಯುತ್ತಿದೆ. ಗ್ರಾಮದಲ್ಲಿ ಶಾಂತಿ ಕಾಪಾಡಲು ಅಧಿಕಾರಿಗಳು ಪ್ರಯತ್ನಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುತ್ತದೆ” ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...