ಶಹಾಪುರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅರ್ಥಪೂರ್ಣ ಆಚರಣೆ

Date:

ಯಾದಗಿರಿ ಜಿಲ್ಲೆಯ ಶಹಾಪುರ್ ಪಟ್ಟಣದ ಸಿ.ಪಿ.ಎಸ್ ಶಾಲಾ ಮೈದಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಭಾವಪೂರ್ಣವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತವಾಗದೆ, ಸಮಾಜದಲ್ಲಿ ಸಮಾನತೆ, ನ್ಯಾಯ ಹಾಗೂ ಸಂವಿಧಾನ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ವೇದಿಕೆಯಾಗಿತು.

- Advertisement -

ಕಾರ್ಯಕ್ರಮದ ಪ್ರಾರಂಭದಲ್ಲಿ ದಲಿತ ಹಿರಿಯ ಮುಖಂಡ ಭೀಮರಾಯ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿ, ಜಯಂತಿಯ ಅಂಗವಾಗಿ ವಿವಿಧ ಕ್ರೀಡಾ, ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ಕ್ರಿಕೆಟ್ ಹಾಗೂ ವಾಲಿಬಾಲ್ ಪಂದ್ಯಗಳು, ಡೊಳ್ಳು ಕುಣಿತ, ಹಾಗೂ ಉಚಿತ ರಕ್ತದಾನ ಶಿಬಿರವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. “ಒಗ್ಗಟ್ಟಿನಲ್ಲಿ ಬಲವಿದೆ; ನಾವು ಎಲ್ಲರೂ ಒಂದಾಗಿ ನಿಂತಾಗ ಮಾತ್ರ ನಮ್ಮ ಹಕ್ಕುಗಳನ್ನು ಸಂಪೂರ್ಣವಾಗಿ ಪಡೆಯಲು ಸಾಧ್ಯ” ಎಂದು ಅವರು ಹೇಳಿ, ಸಮಾಜದಲ್ಲಿ ಏಕತೆ ಮತ್ತು ಹಕ್ಕುಗಳ ಅರಿವು ಅತ್ಯಂತ ಮುಖ್ಯವೆಂದು ಒತ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1599545

ಜಯಂತಿಯ ಪ್ರಯುಕ್ತ ಸಾರ್ವಜನಿಕರಲ್ಲಿ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ವಿಶೇಷವಾಗಿ ಉಚಿತ ರಕ್ತದಾನ ಶಿಬಿರದ ಮೂಲಕ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಪ್ರಯತ್ನ ಗಮನ ಸೆಳೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ್ ಮಾತನಾಡಿ, “ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಲ್ಲುವ ಶಕ್ತಿ ಸಂವಿಧಾನದ ಮೂಲಕ ಅಂಬೇಡ್ಕರ್ ನೀಡಿದ್ದಾರೆ” ಎಂದು ಹೇಳಿದರು. ಅಂಬೇಡ್ಕರ್ ಅವರು ಸ್ವಾರ್ಥಪರವಾಗಿ ಯೋಚಿಸಿದ್ದರೆ ಇಂದಿನ ಭಾರತದ ರೂಪವೇ ಬೇರೆಯಾಗಿರುತ್ತಿತ್ತೆಂದು ಚಿಂತಿಸಬೇಕೆಂದು ತಿಳಿಸಿದರು. ದಲಿತ, ಶೋಷಿತ ಮತ್ತು ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದ ಮಹಾನ್ ವ್ಯಕ್ತಿಯಾಗಿ ಅವರು ಅಂಬೇಡ್ಕರ್ ಅವರನ್ನು ಶ್ಲಾಘಿಸಿದರು.

1599539

“ಸಂವಿಧಾನ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ. ಅದು ಯಾವುದೇ ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಲ್ಲ; ಪ್ರತಿಯೊಬ್ಬ ಭಾರತೀಯನ ಸ್ವತ್ತು” ಎಂದು ಅವರು ಹೇಳಿದರು. ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ ಅವರು, ಯುವಕರು ವಿದ್ಯಾಭ್ಯಾಸದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮತದಾನದ ಹಕ್ಕಿನ ಮಹತ್ವವನ್ನು ವಿವರಿಸಿ, ಪ್ರತಿಯೊಬ್ಬ ನಾಗರಿಕನಿಗೂ ಗೌರವಯುತ ಸ್ಥಾನವನ್ನು ಅಂಬೇಡ್ಕರ್ ನೀಡಿದವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಕರಾಗಿ ಸಹಾಯಕ ಪ್ರಾಧ್ಯಾಪಕ ಸುರೇಶ್ ಗೌತಮ್ ಮಾತನಾಡಿ, ಅಂಬೇಡ್ಕರ್ ಅವರ ಜ್ಞಾನ ಮತ್ತು ಚಿಂತನೆಗಳು ವಿಶ್ವಮಟ್ಟದಲ್ಲಿ ಗೌರವಿಸಲ್ಪಟ್ಟಿವೆ ಎಂದು ಹೇಳಿದರು. “ಒಮ್ಮೆ ಶಾಲೆಯ ಹೊರಗೆ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಿಸಿದ್ದ ಅಂಬೇಡ್ಕರ್, ನಂತರ ಜಗತ್ತಿಗೆ ಜ್ಞಾನ ದೀಪವಾಗಿದ್ದಾರೆ” ಎಂದು ಅವರು ಹೇಳಿದರು. ಭಾರತೀಯ ಆರ್ಥಿಕ ವ್ಯವಸ್ಥೆ, ಸಂವಿಧಾನ ಹಾಗೂ ವಿವಿಧ ಸಂಸ್ಥೆಗಳ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ವಿವರಿಸಿದರು.

1599541

ಕಾರ್ಯಕ್ರಮದ ಸಾನಿಧ್ಯವನ್ನು ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ, “ಎಲ್ಲಿ ಎಲ್ಲರೂ ಸಾಮರಸ್ಯದಿಂದ ಒಂದೇ ವೇದಿಕೆಯಲ್ಲಿ ಕೂತುಕೊಳ್ಳುತ್ತಾರೆ, ಅಲ್ಲಿ ಅಂಬೇಡ್ಕರ್ ಜೀವಂತವಾಗಿರುತ್ತಾರೆ” ಎಂದು ಹೇಳಿದರು. ಅಂಬೇಡ್ಕರ್ ಅವರನ್ನು ಡಿಜೆ, ಡ್ಯಾನ್ಸ್ ಅಥವಾ ಫ್ಲೆಕ್ಸ್‌ಗಳಲ್ಲಿ ಅಲ್ಲ, ಅವರ ಚಿಂತನೆ ಮತ್ತು ಬರವಣಿಗೆಯಲ್ಲಿ ಜೀವಂತವಾಗಿಡಬೇಕು ಎಂದು ತಿಳಿಸಿದರು. ಸಮಾಜದಲ್ಲಿ ಇನ್ನೂ ಮುಂದುವರಿದಿರುವ ಜಾತಿ ಆಧಾರಿತ ಭೇದಭಾವವನ್ನು ನಿರ್ಮೂಲ ಮಾಡುವುದು ಅವರಿಗಿರುವ ನಿಜವಾದ ಗೌರವ ಎಂದು ಹೇಳಿದರು.

1599540

ಕಾರ್ಯಕ್ರಮದಲ್ಲಿ ಪ್ರಸ್ತುತ ಸಮಾಜದಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಕುರಿತು ಚರ್ಚೆ ನಡೆಯಿತು. ಸಂವಿಧಾನವು ಕೇವಲ ಕಾನೂನು ಪಠ್ಯವಲ್ಲ; ಅದು ಮಾನವ ಗೌರವ, ಸಮಾನತೆ ಮತ್ತು ನ್ಯಾಯದ ಸಾರವಾಗಿದೆ ಎಂದು ವಕ್ತಾರರು ಅಭಿಪ್ರಾಯಪಟ್ಟರು. “ಸಂವಿಧಾನದ ಪ್ರತಿಯೊಂದು ಅಕ್ಷರವೂ ಅಂಬೇಡ್ಕರ್ ಅವರ ತ್ಯಾಗ ಮತ್ತು ಹೋರಾಟದ ಫಲವಾಗಿದೆ; ಅದನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರನ್ನು ಭಾರತದ ನಿಜವಾದ ಭಾಗ್ಯವಿಧಾತ ಎಂದು ಕೊಂಡಾಡಲಾಯಿತು. ಮಹಿಳಾ ಮುಕ್ತಿಗಾಗಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ, ಹೆಣ್ಣುಮಕ್ಕಳ ಶಿಕ್ಷಣ ಮತ್ತು ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಕರೆ ನೀಡಲಾಯಿತು.

ಜಯಂತ್ಯೋತ್ಸವದ ಅಧ್ಯಕ್ಷ ರಾಜು ಮಾಡಗಿ (ಅಣಬಿ) ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದ ಎಲ್ಲ ಸಂಘಟನೆಗಳು, ಮುಂಖಡರು ಯುವಕರು ಹಾಗೂ ಸಾರ್ವಜನಿಕರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರವೇ ಪ್ರಮುಖ ಕಾರಣವಾಗಿದ್ದು, ಇದೇ ರೀತಿಯ ಒಗ್ಗಟ್ಟಿನ ಮನೋಭಾವ ಮುಂದೆಯೂ ಮುಂದುವರಿಯಲಿ ಎಂದು ಆಶಿಸಿದರು.

1599542

ಕಾರ್ಯಕ್ರಮದಲ್ಲಿ ಗಣ್ಯರು, ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಸ್ಮರಿಸಿದರು. ಈ ಜಯಂತ್ಯೋತ್ಸವವು ಕೇವಲ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಸ್ಥಾಪನೆಗೆ ಪ್ರೇರಣೆಯಾದ ಅರ್ಥಪೂರ್ಣ ಕಾರ್ಯಕ್ರಮವಾಗಿ ರೂಪುಗೊಂಡಿತು.

ಕಾರ್ಯಕ್ರಮವನ್ನು ಮಲ್ಲಿಕಾರ್ಜುನ ಹುರಸಗುಂಡಗಿ ಸ್ವಾಗತಿಸಿದರು, ಶರಣು ದೋರನಹಳ್ಳಿ ನಿರೂಪಿಸಿದರು, ನಿಂಗಪ್ಪ ದೊಡ್ಮನಿ ವಂದಿಸಿದರು.

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಪೂಜಾರಿ, ಶ್ರೀಶೈಲ ಹೊಸಮನಿ, ನೀಲಕಂಠ ಬಡಿಗೇರ, ಶಿವಕುಮಾರ್ ತಳವಾರ, ಶಿವಪುತ್ರ ಜವಾಳಿ, ತಿಮ್ಮಯ್ಯ ಪುರ್ಲೆ, ಡಾ.ರವೀಂದ್ರನಾಥ ಹೊಸಮನಿ, ಮರೆಪ್ಪ ಜಾಲಿಬೆಂಚಿ, ನಿಂಗಣ್ಣ ನಾಟ್ಟೇಕರ್, ಶಿವಕುಮಾರ್ ಪೋತೆ, ಬಲಭೀಮ್, ಮರಲಿಂಗ ಸಾವೂರ್, ಶೇಖರ್ ಬಡಿಗೇರ, ವಿಶ್ವ ಬಿರನೂರ್, ರಾಯಪ್ಪ ಸಾಲಿಮನಿ, ಬಸವರಾಜ ಚಿಪ್ಪರ್, ನಿಂಗಪ್ಪ ದೋರನಹಳ್ಳಿ, ಲಕ್ಷ್ಮಣ ಹಳಿಸಾಗರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...