ಯಾದಗಿರಿ | ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಅಸಭ್ಯ ವರ್ತನೆ; ಮುಖ್ಯಶಿಕ್ಷಕ ಅಮಾನತು

Date:

ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಅನಪುರ ಶಾಲೆಯ ಮುಖ್ಯಶಿಕ್ಷಕನನ್ನು ಅಮಾನತು ಮಾಡಲಾಗಿದೆ.

- Advertisement -

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕನನ್ನು ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರಿಮಾ ಪನ್ವಾರ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಶಾಲೆಯಲ್ಲಿ ಮುಖ್ಯಶಿಕ್ಷಕ ವಿದ್ಯಾರ್ಥಿಗಳನ್ನು ತನ್ನ ಚೇಂಬರ್‌ಗೆ ಕರೆಸಿಕೊಂಡು ಮೈ ಮುಟ್ಟುವುದು, ಕೆನ್ನೆ ಚಿವುಟುವುದು ಹಾಗೂ ಅಶ್ಲೀಲ ಜೋಕ್‌ಗಳನ್ನು ಹೇಳಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದರು ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ತಿಳಿದು ಮುಖ್ಯಶಿಕ್ಷಕನಿಗೆ ಗ್ರಾಮ ಪಂಚಾಯತಿ ಮಾತಿ ಅಧ್ಯಕ್ಷ ಗೋಪಾಲರೆಡ್ಡಿ ಬುದ್ಧಿ ಹೇಳಿದ್ದರು. ಆದರೂ, ಆತ ತನ್ನ ಚಾಳಿ ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ.

ಇತ್ತೀಚೆಗೆ, ಮುಖ್ಯಶಿಕ್ಷಕನ ದುರ್ವರ್ತನೆ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಬಳಿಕ, ಕ್ಷೇತ್ರ ಶಿಕ್ಷಣಾಧಿಕಾರಿ, ತಹಶೀಲ್ದಾರ್‌ ಹಾಗೂ ಹಲವು ಅಧಿಕಾರಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಹೇಳಿಕೆ ಪಡೆದಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ವರದಿಯನ್ನು ಆಧರಿಸಿ, ಶಿಕ್ಷಕನನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತಿ ಸಿಇಒ ಆದೇಶ ಹೊರಡಿಸಿದ್ದಾರೆ.

“ಶಿಕ್ಷಕನ ವಿರುದ್ಧ ಎಫ್ಐಆರ್‌ ದಾಖಲಿಸಲು ಸೂಚಿಸಿದ್ಧೇನೆ. ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ” ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...