ಯಾದಗಿರಿ | ಚಾಲಕನ ಸುರಕ್ಷತೆಯ ಹಕ್ಕು ಕಸಿದುಕೊಳ್ಳುವ ಕಾನೂನು ಹಿಂಪಡೆಯಲು ಚಾಲಕರ ಸಂಘ ಒತ್ತಾಯ

Date:

ಕೇಂದ್ರ ಗೃಹ ಸಚಿವ ಅಮೀತ್ ಷಾ ಅವರು ಭಾರತೀಯ ನ್ಯಾಯ ಸಂಹಿತೆಯಲ್ಲಿ ವಾಹನ ಚಾಲಕರಿಗೆ ʼಹಿಟ್ ಎಂಡ್ ರನ್ʼ ಪ್ರಕರಣದಲ್ಲಿ ಅತ್ಯುಗ್ರ ಶಿಕ್ಷೆ ನಿಗದಿಪಡಿಸಿರುವ ಹೊಸ ಕಾನೂನು ವಿರೋಧಿಸಿ ನಗರದಲ್ಲಿ ಚಾಲಕರ ಸಂಘಟನೆಗಳು ಪ್ರತಿಭಟನೆ ನಡೆಸಿದರು.

- Advertisement -

ಯಾದಗಿರಿ ನಗರದ ಸರ್ಕಾರಿ ಪದವಿ ಕಾಲೇಜು ಸಮೀಪದ ಹನುಮಾನ ದೇವಸ್ಥಾನದಿಂದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಚಾಲಕರು, ನಂತರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಬ್ಬು ಬೆಳೆಗಾರರ ಬದುಕಿಗೆ ಸಿಹಿಯಾಗದ ಕಬ್ಬಿನ ಬೆಲೆ!

ಕರ್ನಾಟಕದ ಕೃಷಿ ಆರ್ಥಿಕತೆಯಲ್ಲಿ ಕಬ್ಬು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಸಾವಿರಾರು ರೈತ ಕುಟುಂಬಗಳ ಬದುಕು, ಗ್ರಾಮೀಣ ಉದ್ಯೋಗ, ಸಕ್ಕರೆ ಕಾರ್ಖಾನೆಗಳ ಕಾರ್ಯನಿರ್ವಹಣೆ ಮತ್ತು ಅದಕ್ಕೆ ಸಂಬಂಧಿಸಿದ ಕೈಗಾರಿಕೆಗಳ ಆರ್ಥಿಕ ಚಟುವಟಿಕೆ ಕಬ್ಬಿನ ಉತ್ಪಾದನೆಯೊಂದಿಗೆ...

ಹಾಲು, ಮೊಸರು, ದಿನಸಿ ದರ ಏರಿಕೆ ಬೆನ್ನಲ್ಲೇ ಬಸ್...

ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದರೆ ಅದಕ್ಕೆ ಸಂಬಂಧಿಸಿದ ಚಾಲಕರಿಗೆ ಕನಿಷ್ಠ 10 ವರ್ಷಗಳವರೆಗೆ ಶಿಕ್ಷೆ ಮತ್ತು 7 ಲಕ್ಷ ರೂ. ದಂಡವನ್ನು ವಿಧಿಸುವ ಹೊಸ ಕಾನೂನು ಜಾರಿಗೊಳಿಸಿದ್ದು ಖಂಡನೀಯ. ಇದರಿಂದ ಚಾಲಕರ ಬದುಕನ್ನೇ ಕಸಿದುಕೊಳ್ಳಲಿದೆ, ಬೇಕೆಂತಲೇ ಯಾರೂ ಅಪಘಾತ ಮಾಡುವುದಿಲ್ಲ ಎಂಬುದನ್ನು ಸರ್ಕಾರ ಅರಿಯಬೇಕೆಂದು ಅಸಮಾನಧಾನ ವ್ಯಕ್ತಪಡಿಸಿದರು.

ಚಾಲಕರು ಉದ್ದೇಶಪೂರ್ವಕವಾಗಿ ಅಪಘಾತಗಳನ್ನು ಸಂಭವಿಸುವಂತೆ ಮಾಡುವುದಿಲ್ಲ. ಆ ಕಾನೂನು ಜಾರಿಗೆ ಬಂದರೆ ವಾಹನ ಚಾಲಕನ ಕುಟುಂಬದವರು ಬೀದಿಪಾಲಾಗುತ್ತಾರೆ. ಯಾವುದೇ ಕಾರಣಕ್ಕೂ ಈ ಕಾನೂನು ಜಾರಿಗೊಳಿಸಬಾರದು. ಒಂದು ವೇಳೆ ಜಾರಿಗೊಳಿಸಿದರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚಾಗಿ ರೋಡ್ ಬ್ರೇಕರ್ ಗಳನ್ನು ಅಳವಡಿಸಿರುವುದು, ಟೋಲ್ ಸಂಗ್ರಹ ಸ್ಥಳದಿಂದ ಕೆಲವೇ ದೂರದವರೆಗೆ ಸುರಕ್ಷಿತವಾದ ರಸ್ತೆಗಳಿದ್ದು, ಮುಂದಿನ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟ ರಸ್ತೆ, ಸುರಕ್ಷತೆಯ ನಾಮಫಲಕಗಳನ್ನು ಅಳವಡಿಸಿದೆ ಇರುವುದು., ಅಪಘಾತ ನಿಯಂತ್ರಣಕ್ಕೆ ಸಿಸಿ ಕ್ಯಾಮೆರಾ ಅಳವಡಿಸಿದರೆ ಅಪಘಾತಗಳ ಸಂಖ್ಯೆ ಕಡಿಮೆಯಾಗಬಹುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕನಾಟಕ ರಾಜ್ಯ ಚಾಲಕರ ಪರಿಷತ್ ಅಟೋ ಚಾಲಕರ ಸಂಘದ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರರಿಗೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಾವಿತ್ರಿಬಾಯಿ ಫುಲೆ ಜನ್ಮದಿನಕ್ಕೆ ರಾಷ್ಟ್ರೀಯ ರಜೆ ಘೋಷಿಸಿ: ರಮೇಶ ಡಾಕುಳಗಿ

ಪ್ರತಿಭಟನೆಯಲ್ಲಿ ಚಾಲಕರ ಪರಿಷತ್ ಆಟೋ ಚಾಲಕರ ಜಿಲ್ಲಧ್ಯಕ್ಷ ಲಕ್ಷ್ಮಣ ಚವ್ಹಾಣ ಸೇರಿದಂತೆ ಪ್ರಮುಖರಾದ  ಶಿವಶರಣಪ್ಪ ಕುಂಬಾರ, ಹಣಮಯ್ಯ ಕಲಾಲ, ಸಾಬಯ್ಯ ತಾಂಡೂರಕರ್, ಈಶ್ವರ ನಾಯಕ, ಮರಗಪ್ಪ ನಾಯಕ, ಹಣಮಂತ ನಾಯಕ, ಮಹೇಶ ನಾಟೇಕಾರ, ಆಶಪ್ಪ ನಾಯಕ, ಹಣಮಂತ ಬಬಲಾದಿ, ಈರಪ್ಪ ಚವ್ಹಾಣ, ಮೋನೇಶ ಮಡಿವಾಳ, ಅಂಬೋಜಿ ರಾವ್, ಮಲ್ಲಯ್ಯ ಮುಷ್ಟೂರು ಹಾಗೂ ಗಿರಿನಾಡು ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಇಟಗಿ, ಗೌರವಾಧ್ಯಕ್ಷ ಉಮೇಶ ಕೆ.ಮುದ್ನಾಳ ಸೇರಿದಂತೆ ಇತರರಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಳ್ಳತನ ಪ್ರಕರಣ; ಆರೋಪಿಗಳ ಬಂಧಿಸಿ ₹2.48 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ

ಲಕ್ಷ್ಮೇಶ್ವರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೈತರನ್ನು...

ಕೋಲಾರ | ಕಲ್ಲುಕುಟುಕರ 3ಎಫ್ ಫಲಾನುಭವಿಗಳಿಗೆ ವಿನಾಕಾರಣ ತೊಂದರೆ ನೀಡದಿರಿ: ಬೋವಿ ಸಂಘ ಆಗ್ರಹ

ಬಡ ಕಲ್ಲುಕುಟುಕರ 3ಎಫ್ ಫಲಾನುಭವಿಗಳಿಗೆ ವಿನಾಕಾರಣ ತೊಂದರೆ ನೀಡುತ್ತಿರುವವರ ವಿರುದ್ಧ ಕಾನೂನು...

ಶ್ರೀನಿವಾಸಪುರ | ಕಡವೆ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ?150ರಿಂದ 200 ಕೆ.ಜಿ. ಮಾಂಸ ವಶಕ್ಕೆ, ಓರ್ವ ಆರೋಪಿ ಬಂಧನ!

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಹೋಬಳಿಯ ಗುಂಟಪಲ್ಲಿ ಗ್ರಾಮದ ಸಮೀಪ...

ಸಿಂಧನೂರು | ತಿಡಿಗೋಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ: ದಲಿತರಿಗೆ ದೇವಸ್ಥಾನ ಪ್ರವೇಶ

ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತ ಸಮುದಾಯದವರು ದೇವಸ್ಥಾನ ಪ್ರವೇಶಿಸುವ ಮೂಲಕ ಸಾಮಾಜಿಕ...