ಪ್ರಜಾಪ್ರಭುತ್ವ ಉಳಿಸಿ, ಮತದಾರರ ಹಕ್ಕು ರಕ್ಷಿಸಿ: ಎಸ್‌ಐಆರ್ ವಿರುದ್ಧ ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ

Date:

ದೇಶದ ಪ್ರಜಾತಂತ್ರದ ಅಡಿಪಾಯಕ್ಕೆ ಧಕ್ಕೆ ತರುವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಎಚ್ಚರಿಕೆಯ ನಿಲುವು ತಾಳಬೇಕು ಎಂದು ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳ ಒಕ್ಕೂಟ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಎಸ್‌ಐಆರ್ ಪ್ರಕ್ರಿಯೆಯು ಲಕ್ಷಾಂತರ ಮತದಾರರ ಹಕ್ಕುಗಳಿಗೆ ಧಕ್ಕೆ ತರುವ ಅಪಾಯವನ್ನು ಹೊಂದಿದ್ದು, ಕರ್ನಾಟಕ ಸರ್ಕಾರ ಈ ಪ್ರಕ್ರಿಯೆಯನ್ನು ತಾತ್ವಿಕವಾಗಿ ಮಾತ್ರವಲ್ಲದೆ ಪ್ರಾಯೋಗಿಕವಾಗಿಯೂ ವಿರೋಧಿಸಬೇಕಾಗಿದೆ’ ಎಂದು ಒತ್ತಾಯಿಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಹಿರಿಯ ಮುಖಂಡ ಮರೆಪ್ಪ ಚಟ್ಟೇಕರ್ ಹಾಗೂ ಎದ್ದೇಳು ಕರ್ನಾಟಕ ವಲಯ ಸಂಚಾಲಕ ಲಕ್ಷ್ಮಣ ಮಂಡಲಗೇರಾ ಮಾತನಾಡಿ, ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳು ಸವಾಲಿನ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಜನರ ಮತದಾನದ ಹಕ್ಕುಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಧೈರ್ಯಶಾಲಿ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

‘ಪ್ರಸ್ತುತ ರೂಪದಲ್ಲಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳಬಾರದು. ಚುನಾವಣಾ ಆಯೋಗವು ಐದು ಮೂಲಭೂತ ತಿದ್ದುಪಡಿಗಳನ್ನು ಜಾರಿಗೊಳಿಸಿದ ಬಳಿಕವೇ ಸಹಕಾರ ನೀಡಬೇಕು’ ಎಂದು ಅವರು ಆಗ್ರಹಿಸಿದರು.

“ಲಾಜಿಕಲ್ ಡಿಸ್ಕ್ರೆಪೆನ್ಸಿ” ಎಂಬ ಅವೈಜ್ಞಾನಿಕ ಹಾಗೂ ಅಪಾರದರ್ಶಕ ಮಾನದಂಡವನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಅಳವಡಿಸಬಾರದು. ಹೆಸರುಗಳ ಸ್ಪೆಲ್ಲಿಂಗ್, ಜನ್ಮ ದಿನಾಂಕ ಅಥವಾ ಇತರ ಸಣ್ಣಪುಟ್ಟ ವ್ಯತ್ಯಾಸಗಳನ್ನು ಆಧಾರವಾಗಿಟ್ಟುಕೊಂಡು ಮತದಾರರನ್ನು ಪಟ್ಟಿಯಿಂದ ಕೈಬಿಡುವುದು ಪ್ರಜಾತಾಂತ್ರಿಕ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

‘ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಮತ್ತು ಕಂಪ್ಯೂಟರ್‌ನಲ್ಲಿ ಸುಲಭವಾಗಿ ಪರಿಶೀಲಿಸಬಹುದಾದ ರೂಪದಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ಚುನಾವಣಾ ಆಯೋಗದ ನಿಯಮಾವಳಿಯಂತೆ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಕರಡು ಮತದಾರರ ಪಟ್ಟಿಯನ್ನು ಬಹಿರಂಗಪಡಿಸಿ, ಸಾರ್ವಜನಿಕ ಪರಿಶೀಲನೆ ಹಾಗೂ ತಿದ್ದುಪಡಿ ಪ್ರಕ್ರಿಯೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ತುರ್ತುಗತಿಯಲ್ಲಿ ನಡೆಸದೆ ಕನಿಷ್ಠ ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಕರಡು ಪಟ್ಟಿ ಸಿದ್ಧಪಡಿಸುವುದು, ಸಾರ್ವಜನಿಕ ಆಕ್ಷೇಪಣೆಗಳನ್ನು ಆಹ್ವಾನಿಸುವುದು ಹಾಗೂ ಅಂತಿಮ ಪಟ್ಟಿ ಪ್ರಕಟಿಸುವ ಹಂತಗಳಿಗೆ ಸಮರ್ಪಕ ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು.

‘ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಅಲೆಮಾರಿಗಳು, ಆದಿವಾಸಿಗಳು, ದಲಿತರು ಹಾಗೂ ಬಡ ಅಲ್ಪಸಂಖ್ಯಾತ ಸಮುದಾಯಗಳು ದಾಖಲೆ ಸಮಸ್ಯೆಗಳಿಂದ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ವಿಶೇಷ ಹಾಗೂ ಸರಳ ವಿಧಾನಗಳನ್ನು ರೂಪಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದ ಒಬ್ಬ ಅರ್ಹ ಮತದಾರರೂ ತಮ್ಮ ಸಂವಿಧಾನಬದ್ಧ ಹಕ್ಕು ಕಳೆದುಕೊಳ್ಳದಂತೆ ರಾಜ್ಯ ಸರ್ಕಾರ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಳಸುವ ಮತದಾರರ ಪಟ್ಟಿಯನ್ನು ಆಧರಿಸಿ ವೈಜ್ಞಾನಿಕ ಹಾಗೂ ಜನಸ್ನೇಹಿ ವಿಧಾನದಲ್ಲಿ “ಚೆಕ್ ಮೇಟ್ ಪಟ್ಟಿ” ಸಿದ್ಧಪಡಿಸಬೇಕು’ ಎಂದು ಸಲಹೆ ನೀಡಿದರು.

‘ವಿಶೇಷ ಗ್ರಾಮಸಭೆಗಳು ಹಾಗೂ ವಾರ್ಡ್ ಸಭೆಗಳನ್ನು ನಡೆಸಿ ಮತದಾರರ ಪಟ್ಟಿಯನ್ನು ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಬೇಕು. ಪರಿಶೀಲನೆಗೊಂಡ ಮತದಾರರಿಗೆ ದಾಖಲೆಗಳ ಸಮೇತ ಸ್ಮಾರ್ಟ್ ಕಾರ್ಡ್ ವಿತರಿಸಬೇಕು. ದಾಖಲೆಗಳ ಕೊರತೆ ಇರುವವರಿಗೆ ವಾಸ ದೃಢೀಕರಣ ಪತ್ರಗಳನ್ನು ತಕ್ಷಣ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್ ವ್ಯಾಪ್ತಿಯಲ್ಲಿ “ಮತದಾರರ ನೆರವು ಕೇಂದ್ರ”ಗಳನ್ನು ಸ್ಥಾಪಿಸಿ, ಅಗತ್ಯ ದಾಖಲೆಗಳನ್ನು ಜನರಿಗೆ ತ್ವರಿತವಾಗಿ ಹಾಗೂ ಯಾವುದೇ ಕಿರುಕುಳವಿಲ್ಲದೆ ಒದಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಎಸ್‌ಐಆರ್ ವಿರೋಧಿಸಿ ಕಲಬುರಗಿಯಲ್ಲಿ ಮೇ 30ರಂದು ಬೃಹತ್ ಪ್ರತಿಭಟನೆ

ಈ ಸಂದರ್ಭದಲ್ಲಿ ಎದ್ದೇಳು ಕರ್ನಾಟಕ ಸಂಘಟನೆಯ ರಾಜೇಂದ್ರ ರಾಜವಾಳ, ಎಸ್‌ಡಿಪಿಐನ ಕಾಲಿದ್, ಸೈದಪ್ಪ ಕೊಲ್ಲೂರ್, ಮಲ್ಲಿಕಾರ್ಜುನ ಕ್ರಾಂತಿ, ಶಿವಪುತ್ರ ಜವಳಿ, ಶರಣಗೌಡ ಗ್ರಾಕೋಸ್, ರಾಯಪ್ಪ ಸಾಲಿಮನಿ, ಮಲ್ಲಿಕಾರ್ಜುನ ಹೊಸಮನಿ, ಶ್ರೀಶೈಲ ಹೊಸಮನಿ, ಇರ್ಫಾನ್ ಬದಲ್, ಶರಣು ದೋರನಹಳ್ಳಿ, ಕಾಶೀನಾಥ್ ನಾಟೇಕರ್, ಸಲೀಂ ಜಮಾತ್, ಶಿವಣ್ಣ ಹಿಜೇರಿ, ಚನ್ನಪ್ಪ ಆನೇಗುಂದಿ, ಮೌನೇಶ ಶೆಟ್ಟಗೇರಾ, ವಿಶ್ವ ನಾಟೇಕರ್, ಮರಲಿಂಗ ಸಾವೂರ್, ಅಶೋಕ್ ಹೊಸಮನಿ, ಹೊನ್ನೇಶ ದೊಡ್ಡಮನಿ, ಮರೆಪ್ಪ ಜಾಲಿಮಂಚಿ, ಬಸವರಾಜ ಗುಡಿಮನಿ, ನಿಂಗಪ್ಪ ದೋರನಹಳ್ಳಿ, ಬಸವರಾಜ ಚಿಪ್ಪರ್, ಶೇಖರ್ ಬಡಿಗೇರ, ಅಯ್ಯಪ್ಪ ಗೊಂದೆನೂರ್, ವಿಶ್ವ ಬಿರನೂರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...